Category: ಕರಾವಳಿ
-

ಜನಜಂಗುಳಿಯ ರೈಲು ನಿಲ್ದಾಣದಲ್ಲಿ ದಾರಿ ತಪ್ಪಿದ ಮಗು; ಕ್ಷಿಪ್ರ ಕಾರ್ಯಾಚರಣೆಯಿಂದ ಸುರಕ್ಷಿತ ರಕ್ಷಣೆ
ಚೆನ್ನೈ : ರೈಲ್ವೆ ರಕ್ಷಣಾ ಪಡೆ (RPF) ಮತ್ತು ಸರ್ಕಾರಿ ರೈಲ್ವೆ ಪೊಲೀಸರ (GRP) ಮಿಂಚಿನ ಕಾರ್ಯಾಚರಣೆಯಲ್ಲಿ ರೈಲು ನಿಲ್ದಾಣದ ಭಾರಿ ಜನಸಂದಣಿಯಲ್ಲಿ ದಾರಿ ತಪ್ಪಿದ್ದ 5 ವರ್ಷದ ಪುಟ್ಟ ಬಾಲಕಿಯೊಬ್ಬಳನ್ನು ಕೇವಲ ಕೆಲವೇ ನಿಮಿಷಗಳಲ್ಲಿ ಸುರಕ್ಷಿತವಾಗಿ ರಕ್ಷಿಸಿ ಆಕೆಯ ಪೋಷಕರಿಗೆ ಒಪ್ಪಿಸಿದ ಘಟನೆ ಚೆನ್ನೈ ಎಗ್ಮೋರ್ ರೈಲು ನಿಲ್ದಾಣದಲ್ಲಿ ನಡೆದಿದೆ.ನಿನ್ನೆ ಸಂಜೆ ಸುಮಾರು 5 ಗಂಟೆಯ ವೇಳೆಗೆ ಚೆನ್ನೈ ಎಗ್ಮೋರ್ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ ಸಂಖ್ಯೆ 5 ರಲ್ಲಿ ಕನ್ಯಾಕುಮಾರಿ ಎಕ್ಸ್ಪ್ರೆಸ್ ರೈಲು ಹೊರಡಲು ಸಿದ್ಧವಾಗಿ…
-

ಗನ್ ಲೈಸೆನ್ಸ್ ಪ್ರಕ್ರಿಯೆ ಪಾರದರ್ಶಕ: ಹೊಸ ಆನ್ಲೈನ್ ಟ್ರ್ಯಾಕಿಂಗ್ ಪೋರ್ಟಲ್ ಜಾರಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ವರ್ಷಗಳಿಂದ ಗೊಂದಲದ ಗೂಡಾಗಿದ್ದ ಗನ್ ಲೈಸೆನ್ಸ್ ನವೀಕರಣ ಪ್ರಕ್ರಿಯೆಗೆ ಕೊನೆಗೂ ಡಿಜಿಟಲ್ ರೂಪ ನೀಡಲಾಗುತ್ತಿದ್ದು, ಜೂನ್ 1 ರಿಂದ ಹೊಸ ಆನ್ಲೈನ್ ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಪರಿಚಯಿಸಲಾಗುತ್ತಿದೆ. ಈ ಹೊಸ ವ್ಯವಸ್ಥೆಯು ಹೊಸ ಲೈಸೆನ್ಸ್ ಅರ್ಜಿಗಳು ಹಾಗೂ ನವೀಕರಣಗಳ ಸ್ವೀಕಾರ, ಪರಿಶೀಲನೆ ಮತ್ತು ಟ್ರ್ಯಾಕಿಂಗ್ ಪ್ರಕ್ರಿಯೆಯನ್ನು ಹೆಚ್ಚು ಸುಲಭ ಹಾಗೂ ಪಾರದರ್ಶಕಗೊಳಿಸಲಿದೆ. ಸುಮಾರು 15 ರಿಂದ 20 ದಿನಗಳ ಕಾಲ ನಡೆಸಲಾದ ಲೋಡ್ ಟೆಸ್ಟಿಂಗ್ ಪ್ರಕ್ರಿಯೆಯ ನಂತರ ಆನ್ಲೈನ್ ವ್ಯವಸ್ಥೆ ಸಂಪೂರ್ಣವಾಗಿ ಸಿದ್ಧಗೊಂಡಿದೆ.…
-

ಉಡುಪಿ: ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯ ವಿವಿಧ ಶಾಖೆಗೆ ಲೋಕಾಯುಕ್ತ ದಾಳಿ..!!
ಉಡುಪಿ: ಸಾರ್ವಜನಿಕರ ದೂರುಗಳ ಆಧಾರದ ಮೇಲೆ ಕರ್ನಾಟಕ ಲೋಕಾಯುಕ್ತ ಬೆಂಗಳೂರು ಕಚೇರಿಯಿಂದ ಶೋಧನಾ ವಾರಂಟ್ ಪಡೆದು, ಇಂದು (29/05/2026) ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯ ವಿವಿಧ ಶಾಖೆಗಳಲ್ಲಿ ದಾಳಿ ನಡೆಸಲಾಗಿದೆ. ಮಂಗಳೂರು ಲೋಕಾಯುಕ್ತ ಎಸ್.ಪಿ ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, ಉಡುಪಿ ಲೋಕಾಯುಕ್ತ ಡಿ.ವೈ.ಎಸ್.ಪಿ ಹಾಲಮೂರ್ತಿ ರಾವ್, ಪೊಲೀಸ್ ಇನ್ಸ್ಪೆಕ್ಟರ್ ರಾಜೇಂದ್ರ ನಾಯ್ಕ್ ಹಾಗೂ ಮಂಗಳೂರು ಲೋಕಾಯುಕ್ತ ಇನ್ಸ್ಪೆಕ್ಟರ್ ಶ್ರೀಮತಿ ಭಾರತಿ ಮತ್ತು ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ದಾಳಿಯ ವೇಳೆ ವಿಲೇವಾರಿಗೆ ಬಾಕಿಯಿದ್ದ ಹಲವಾರು ಕಡತಗಳು ಪತ್ತೆ,…
-

ಕಾರಿನಲ್ಲಿ ಮಾದಕವಸ್ತು ಸಾಗಾಟ: ₹40 ಸಾವಿರ ಮೌಲ್ಯದ MDMA ವಶ
ಬೆಳ್ತಂಗಡಿ : ಗುರುವಾಯನಕೆರೆಯಿಂದ ಮೂಡಬಿದಿರೆ ಕಡೆಗೆ ಕಾರಿನಲ್ಲಿ ನಿಷೇಧಿತ ಎಂಡಿಎಂಎ (MDMA) ಮಾದಕವಸ್ತುವನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವೇಣೂರು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 40 ಸಾವಿರ ರೂಪಾಯಿ ಮೌಲ್ಯದ ಮಾದಕವಸ್ತು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಮಂಗಳೂರು ತಾಲೂಕಿನ ಪುತ್ತಿಗೆ ಗ್ರಾಮದ ಹಂಡೇಲು ನಿವಾಸಿ ತನ್ವೀರ್ (27) ಹಾಗೂ ಮೂಡಬಿದಿರೆಯ ಕಲ್ಲಬೆಟ್ಟು ನಿವಾಸಿ ಮುಹಮ್ಮದ್ ಸಲ್ವಾನ್ (22) ಎಂದು ಗುರುತಿಸಲಾಗಿದೆ. ಪ್ರಕರಣದ ಮೂರನೇ ಆರೋಪಿ, ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ…
-

ಜೂ. 1ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿ ಪರವಾನಗಿಗೆ ಆನ್ಲೈನ್ ಟ್ರ್ಯಾಕಿಂಗ್ ಸಿಸ್ಟಂ ಜಾರಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ವರ್ಷಗಳಿಂದ ಗೊಂದಲದ ಗೂಡಾಗಿದ್ದ ಕೋವಿ ಪರವಾನಗಿ ನವೀಕರಣ ಪ್ರಕ್ರಿಯೆಯನ್ನು ಸರಾಗಗೊಳಿಸಲು ಜೂನ್.1ರಿಂದ ಆನ್ಲೈನ್ ಟ್ರ್ಯಾಕಿಂಗ್ ಸಿಸ್ಟಂ ಜಾರಿ ಮಾಡಲು ಅಧಿಕಾರಿಗಳು ಸಿದ್ದತೆ ನಡೆಸಿದ್ದಾರೆ. ಈ ಪೋರ್ಟಲ್ ನ ಲಾಗಿನ್ ವ್ಯವಸ್ಥೆ ಕೇವಲ ಡಿಸಿ, ಎಸ್ಪಿ, ಡಿಎಫ್ಒ ಬಳಿ ಇರಲಿದ್ದು, ಈ ಹಿಂದೆ ಕಾಗದದ ಮೂಲಕ ನಡೆಸುತ್ತಿದ್ದ ಅರ್ಜಿಯಿಂದಾಗಿ ವಿಳಂಬವಾಗಿದ್ದ ಎಲ್ಲಾ ಅರ್ಜಿಗಳನ್ನು ಸ್ವೀಕರಿಸಿ, ಅವುಗಳ ಪರಿಶೀಲನೆ ನಡೆಸಿ ಮುಂದಿನ 60 ದಿನದೊಳಗೆ ಕ್ಲಿಯರ್ ಮಾಡಲು ಸಿದ್ದತೆ ನಡೆಸಲಾಗುತ್ತಿದ್ದು, ಕೃಷಿ ರಕ್ಷಣೆಗಾಗಿ ಕೋವಿ…
-

ಪುತ್ತೂರು: ಮನೆ ಸಮೀಪದ ಶೆಡ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
ಪುತ್ತೂರು: ತಾಲೂಕಿನ ಕೆಯ್ಯೂರು ಗ್ರಾಮದ ಮಾಡಾವು ಸಣಂಗಲ ಎಸ್ಎಸ್ ಮಂಜಿಲ್ನ ದಿ.ಬಡುವನ್ ಕುಂಞ, ನಫೀಸಾ ದಂಪತಿಯ ಪುತ್ರಿ, ಮುಳ್ಳೇರಿಯದ ಸಮೀಪದ ಪಳ್ಳಪ್ಪಾಡಿಯ ಜೈನುದ್ದೀನ್ ಅವರ ಪತ್ನಿ ಸೆರಿನ (27) ಅವರ ಮೃತದೇಹ ಮೇ.27ರಂದು ಸಂಜೆ ಮನೆ ಸಮೀಪದ ಶೆಡ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸೆರಿನಾ ಅವರ ಸಾವು ಅನುಮಾನಾಸ್ಪದವಾಗಿದೆ. ಗಂಡ ಮತ್ತು ಕುಟುಂಬದವರು ಮಕ್ಕಳಿಲ್ಲವೆಂದು ಹೇಳಿ ಕಿರುಕುಳ ನೀಡುತಿದ್ದರು ಎಂದು ಸಹೋದರ ಅಬ್ದುಲ್ ರೆಹಮಾನ್ ಆರೋಪಿಸಿದ್ದು, ಅವರು ನೀಡಿದ ದೂರಿನ ಮೇರೆಗೆ ಆದೂರು ಪೊಲೀಸ್ ಠಾಣೆಯಲ್ಲಿ…
-

ಧರ್ಮಸ್ಥಳ- 70 ವರ್ಷದ ವೃದ್ಧೆಗೆ ಮತ್ತು ಬರಿಸುವ ಪಾನೀಯ ನೀಡಿ 10 ಲಕ್ಷ ಮೌಲ್ಯದ ಚಿನ್ನ, ನಗದು ದೋಚಿದ ಖದೀಮ..!
ಧರ್ಮಸ್ಥಳ : ಇಲ್ಲಿನ ಪ್ರಸಿದ್ಧ ಕ್ಷೇತ್ರ ಧರ್ಮಸ್ಥಳದ ದೇವಸ್ಥಾನದ ಮುಖ್ಯದ್ವಾರದ ಮುಂಭಾಗದ ಬಸ್ ನಿಲ್ದಾಣದಲ್ಲಿ ವೃದ್ಧೆಯೊಬ್ಬರಿಗೆ ಮತ್ತು ಬರಿಸುವ ಪಾನೀಯ ನೀಡಿ ಅಸ್ವಸ್ಥಗೊಳಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿರುವ ಘಟನೆ ಮೇ 25 ರಂದು ರಾತ್ರಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ನಿವಾಸಿ ಶ್ರೀಮತಿ ಪ್ರೇಮಾ ಕೆ (70) ಎಂಬುವರೇ ದರೋಡೆಗೊಳಗಾದ ದುರ್ದೈವಿ. ಇವರಿಂದ 112 ಗ್ರಾಂ ತೂಕದ ಚಿನ್ನದ ಆಭರಣಗಳು ಮತ್ತು…
-

ಕಾರಿಂಜೇಶ್ವರ ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯ ಗೋ ಕಳ್ಳತನದಲ್ಲಿ ಶಾಮೀಲು ಶಂಕೆ ಆರೋಪ – ದೂರು ದಾಖಲು
ಬಂಟ್ವಾಳ: ಮಹತೋಭಾರ ಶ್ರೀ ಕಾರಿಂಜೇಶ್ವರ ದೇಗುಲದ ವ್ಯವಸ್ಥಾಪನ ಸಮಿತಿ ಸದಸ್ಯ ಗೋ ಕಳ್ಳತನದಲ್ಲಿ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಬಂಟ್ವಾಳ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಏನಿದೆ? ಬಂಟ್ವಾಳ ಪೊಲೀಸ್ ಠಾಣೆ ವ್ಯಾಪ್ತಿಯ ಮಹತೋಭಾರ ಶ್ರೀ ಕಾರಿಂಜೇಶ್ವರ ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯ ಪ್ರಶಾಂತ್ ನಾಯ್ಕ ಅನ್ನುವ ವ್ಯಕ್ತಿ ತಮ್ಮ ಪರಿಚಯದವರಾದ ಶೇರ್ ಬೆಟ್ಟು ರವಿ ಆಚಾರ್ಯ ಅನ್ನುವವರ ವಿಶ್ವಾಸ ಗಳಿಸಿಕೊಂಡು, ಅವರು ಮನೆಯಲ್ಲಿ ಪ್ರೀತಿಯಿಂದ ಸಾಕಿರುವ ಮೂರು ವರ್ಷ ಪ್ರಾಯದ ಎತ್ತನ್ನು ತನ್ನ ಮನೆಯಲ್ಲಿ…
-

ಮಂಗಳೂರು: ಹಲವು ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ!
ಮೊಹಮ್ಮದ್ ಅಶ್ರಫ್ @ ಅಜ್ಜು @ ನಿಜಾಮ್ @ ಅಡ್ಡು @ ಸಮೀರ್, ಮಾವಿನಕಟ್ಟೆ, ಅಜಿಲಮೊಗರು, ಬೆಳ್ತಂಗಡಿ. ಎಂಬಾತ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ “ಬಿ” ರೌಡಿ ಶೀಟರ್ ಆಗಿದ್ದು, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ದ ಹಲವು ಪ್ರಕರಣಗಳು ದಾಖಲಾಗಿದೆ. ಆರೋಪಿತನು ಪ್ರಕರಣಕ್ಕೆ ಸಂಬಂದಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು ಈತನಿಗೆ ವಾರೆಂಟ್ ಜಾರಿಗೊಳಿಸಿತ್ತು. ಈತನ ವಿರುದ್ದ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಅ.ಕ್ರ.ಸಂ: 136/2018, ಅ.ಕ್ರ.ಸಂ: 119/2024, ಅ.ಕ್ರ.ಸಂ: 130/2024, ಅ.ಕ್ರ.ಸಂ: 119/2024…
-

ಮಂಗಳೂರು: ರಾತ್ರಿ ಬೀಟ್ ಕರ್ತವ್ಯದ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ- ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳ ಬಂಧನ
ಮಂಗಳೂರು: ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳಕ್ಕೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೇ 24ರಂದು ಬೆಳಗಿನ ಜಾವ ಸುಮಾರು 2:10 ಗಂಟೆಗೆ ಕೋಡಿಕಲ್ನ ನಾರಾಯಣಗುರು ಸಮುದಾಯ ಭವನ ರಸ್ತೆಯ ಎದುರು ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಕೆಂಪು ಬಣ್ಣದ ಎಲೆಕ್ಟ್ರಿಕ್ ಸ್ಕೂಟರ್ನಲ್ಲಿ ಬಂದ ಇಬ್ಬರು ಯುವಕರು ಹಲ್ಲೆ ನಡೆಸಿದ್ದರು. ಸ್ಕೂಟರ್ನ ಹಿಂಬದಿ ಸವಾರ ಸಿಮೆಂಟ್ ಶೀಟ್ ತುಂಡಿನಿಂದ ಪೊಲೀಸ್…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











