Category: ಕರಾವಳಿ
-

ಮಂಗಳೂರು: ಸೆಪ್ಟೆಂಬರ್ 6ರಂದು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ “ಬೆಳ್ಳಿ ಹಬ್ಬ ಸಮಾರಂಭ”
ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ (ಮಂಗಳೂರು ಮತ್ತು ಉಡುಪಿ ಜಿಲ್ಲೆಗಳು) ಅಭಿವೃದ್ಧಿ ಹಾಗೂ ಪರಿಸರ ಸಂರಕ್ಷಣೆಯ ಪ್ರಮುಖ ವಿಚಾರಗಳ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಗಮನ ಸೆಳೆಯುತ್ತಾ ಕಾರ್ಯನಿರ್ವಹಿಸುತ್ತಿರುವ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ 25ನೇ ವರ್ಷದ ಬೆಳ್ಳಿ ಹಬ್ಬ ಸಮಾರಂಭ ಸೆಪ್ಟೆಂಬರ್ 6ರಂದು ಮಂಗಳೂರಿನಲ್ಲಿ ನಡೆಯಲಿದೆ. ನಗರದ ಕುದ್ಮುಲ್ ರಂಗರಾವ್ ಟೌನ್‌ಹಾಲ್, ಹಂಪನಕಟ್ಟೆ ಇಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಗೆ ಸಮಾರಂಭ ಆಯೋಜಿಸಲಾಗಿದೆ.ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ.ಸಮಿತಿಯ ಅಧ್ಯಕ್ಷ…
-

ಉಪ್ಪಿನಂಗಡಿ: ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ..!! ಸಾವಿನಲ್ಲಿ ಅನುಮಾನ
ಉಪ್ಪಿನಂಗಡಿ: ಪೆರ್ನೆ ಸಮೀಪ ಮಹಿಳೆಯೊಬ್ಬರು ಮನೆಯೊಳಗೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ.ಮಹಿಳೆಯ ಮೃತದೇಹ ಮನೆಯೊಳಗೆ ನೇಣು ಬಿಗಿದು ಅರ್ದ ಕಾಲು ನೆಲದ ಮೇಲೆ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸಾವಿನ ಸುತ್ತ ಹಲವು ಅನುಮಾನಗಳು ಮೂಡಿವೆ.ಇದು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.ಮೃತ ಮಹಿಳೆಯನ್ನು ಸೇವಾ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ಕಾವ್ಯ ಎಂದು ಗುರುತಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಮೃತರಿಗೆ ಇಬ್ಬರು ಮಕ್ಕಳಿದ್ದು ಇತ್ತೀಚೆಗೆ ಹೆಣ್ಣು ಮಗಳ ಮದುವೆ ನೆರವೇರಿಸಿದ್ದರು. ಇನ್ನೋರ್ವ ಗಂಡು…
-

ಮಂಗಳೂರು: ಅನಧಿಕೃತ ಬೀದಿಬದಿ ವ್ಯಾಪಾರ ತೆರವುಗೊಳಿಸಲು ಮನಪಾ ಆಯುಕ್ತರು ಸೂಚನೆ
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಬೀದಿಬದಿ ವ್ಯಾಪಾರ ತೆರವುಗೊಳಿಸಲು ಮನಪಾ ಆಯುಕ್ತರು ಸೂಚನೆ ನೀಡಿದ್ದಾರೆ. ಪಾಲಿಕೆ ವ್ಯಾಪ್ತಿಯ ನಗರದ ಸಾರ್ವಜನಿಕ ಸ್ಥಳಗಳಲ್ಲಿ ವಾಹನ ದಟ್ಟಣೆ ಹೆಚ್ಚುತ್ತಿದ್ದು, ಪಾದಚಾರಿ ರಸ್ತೆಗಳಲ್ಲಿ ಮತ್ತು ಇನ್ನಿತರೆ ಪ್ರದೇಶದಲ್ಲಿ ಅನಧಿಕೃತವಾಗಿ ಬೀದಿಬದಿ ವ್ಯಾಪಾರ ಮಾಡುತ್ತಿರುವುದರಿಂದ ಸಾರ್ವಜನಿಕರ ಹಿತರಕ್ಷಣೆಗೆ ಹಾಗೂ ಸುಗಮ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಮತ್ತು ಸಂಘಟನೆಗಳಿಂದ ದೂರುಗಳು ಬರುತ್ತಿದೆ ಪಾಲಿಕೆಯಿಂದ ಈಗಾಗಲೇ ಬೀದಿಬದಿ ವ್ಯಾಪಾರದ ಗುರುತಿನ ಚೀಟಿ ಮತ್ತು ವ್ಯಾಪಾರ ಪ್ರಮಾಣ ಪತ್ರ ಪಡೆದುಕೊಂಡಿರುವ ಬೀದಿಬದಿ ವ್ಯಾಪಾರಿಗಳನ್ನು ಹೊರತು…
-

ಮಂಗಳೂರು: ಹಿಂ. ಜಾ. ವೇ. ಸದಸ್ಯನಿಗೆ ಗಡಿಪಾರು ಆದೇಶ!!
ಮಂಗಳೂರು: ಸಾರ್ವಜನಿಕ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ರೀತಿಯಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ಆರೋಪದ ಹಿನ್ನೆಲೆಯಲ್ಲಿ ರಾಜೇಶ್ ನಾಯಕ್ (32) ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಆರು ತಿಂಗಳ ಅವಧಿಗೆ ಗಡಿಪಾರು ಮಾಡಿ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್. ಕೆ., ಐಪಿಎಸ್ ಆದೇಶ ಹೊರಡಿಸಿದ್ದಾರೆ. ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ನಿವಾಸಿಯಾಗಿರುವ ರಾಜೇಶ್ ನಾಯಕ್ ಅವರ ವಿರುದ್ಧ ಈ ಹಿಂದೆ ಹಲವು ಅಪರಾಧ ಪ್ರಕರಣಗಳು…
-

ಸಂಪಾಜೆ ಫಾತಿಮಾ ನಿಶಾನ್ ಹತ್ಯೆ ಪ್ರಕರಣ – ಇಬ್ಬರು ಆರೋಪಿಗಳಿಗೆ ಶರತ್ತುಬದ್ಧ ಜಾಮೀನು ಮಂಜೂರು
ಸುಳ್ಯ: ಕಡೆಪಾಲ ಬಳಿ ನಿಗೂಢವಾಗಿ ಹತ್ಯೆಯಾಗಿದ್ದ ಫಾತಿಮಾ ನಿಶಾನ ಹತ್ಯೆ ಆರೋಪಿಗಳಿಗೆ ಪುತ್ತೂರು ಐದನೇ ಹೆಚ್ಚುವರಿ ಸತ್ರ ನ್ಯಾಯಾಲಯ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜು.18 ರಂದು ರಾತ್ರಿ ಮಾವ ಅಲವಿ, ಅತ್ತೆ ಆಯಿಷಾ ಹಾಗೂ ನಾದಿನಿ ಫಸೀಲಾ ಹಿಂಸೆ ನೀಡಿ ಕೊಂದಿರುವ ಆರೋಪದ ಹಿನ್ನೆಲೆಯಲ್ಲಿ ಸುಳ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಸುಳ್ಯ ಹಿರಿಯ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಆಯಿಷಾ ಮತ್ತು ಫಸೀಲಾ ಪರವಾಗಿ ಪುತ್ತೂರು…
-

ಮಂಗಳೂರು: ಮನೆ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿ ಹಣ ಪಡೆದ ಬಳಿಕ ವಂಚನೆ- ಆರೋಪಿಗೆ ಶಿಕ್ಷೆ ಪ್ರಕಟ
ಮಂಗಳೂರು: ಮನೆ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿ ಹಣ ಪಡೆದ ಬಳಿಕ ಮನೆಯನ್ನೂ ನಿರ್ಮಿಸದೆ, ಹಣವನ್ನೂ ವಾಪಸ್ ಕೊಡದೆ, ಹಣದ ಕುರಿತು ಪ್ರಶ್ನಿಸಿದಾಗ ಜಾತಿ ನಿಂದನೆ ಮಾಡಿದ ಪ್ರಕರಣ ಸಂಬಂಧ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ(ವಿಶೇಷ) ನ್ಯಾಯಾಲಯವು ಶಿಕ್ಷೆ, ದಂಡ ವಿಧಿಸಿ ತೀರ್ಪು ನೀಡಿದೆ. ಶಿಕ್ಷೆಗೊಳಗಾದ ಆರೋಪಿ ಸಿಪ್ರಿಯಾನ್ ಡಿಸೋಜ ಎಂದು ತಿಳಿದು ಬಂದಿದೆ. ಜಯಂತ್ ನಾಯ್ಕ ಮನೋಜ್, ವಾಸುದೇವ ಎಂಬವರಿಗೆ 1250 ಚದರ ಅಡಿಯ ಮನೆ ಕಟ್ಟಿಸಿ ಕೊಡುವುದಾಗಿ ತಿಳಿಸಿದ ಸಿಪ್ರಿಯಾನ್ ಡಿಸೋಜ…
-

ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಮೂವರ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ಪುತ್ತೂರು ಕಸಬ ಗ್ರಾಮದ ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿದ ಆರೋಪದಡಿ ಮೂವರು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.1ರಂದು ಮಧ್ಯಾಹ್ನ ಸಾರ್ವಜನಿಕ ಸ್ಥಳದಲ್ಲಿ ಕೆಲವರು ಗುಂಪು ಸೇರಿ ಗಲಾಟೆ ನಡೆಸುತ್ತಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಜಾನ್ಸನ್ ಡಿಸೋಜ ಅವರಿಗೆ ಮಾಹಿತಿ ಲಭಿಸಿತ್ತು. ಮಾಹಿತಿ ಮೇರೆಗೆ ಪೊಲೀಸರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದಾಗ, ಕೆಲವರು ಪರಸ್ಪರ ಕೈಕೈ ಮಿಲಾಯಿಸಿಕೊಂಡು…
-

ಮಂಗಳೂರು: ಕುಖ್ಯಾತ ಅಂತರರಾಜ್ಯ 17ಕ್ಕೂ ಹೆಚ್ಚು ಪ್ರಕರಣಗಳ ವಂಚಕ, ಇಂಟರ್‌ಪೋಲ್ ರೆಡ್ ಕಾರ್ನರ್ ನೋಟಿಸ್‌ದಾರ ಸ್ಯಾಮ್ ಪೀಟರ್ ಬಂಧನ
ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ನಿರ್ದೇಶಕ/ಅಧಿಕಾರಿ ಎಂದು ಸುಳ್ಳು ಪರಿಚಯ ಮಾಡಿಕೊಂಡು ಸುಲಿಗೆ ಹಾಗೂ ವಂಚನೆ ನಡೆಸುತ್ತಿದ್ದ ಪ್ರಕರಣದಲ್ಲಿ ಬಂಧಿತರಾಗಿ, ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಕೇರಳದ ನಿವಾಸಿಯಾಗಿದ್ದು, ಪ್ರಸ್ತುತ ಉತ್ತರ ಪ್ರದೇಶದ ಲಕ್ನೋದಲ್ಲಿ ವಾಸಿಸುತ್ತಿದ್ದ ಶ್ಯಾಮ್ ಪೀಟರ್ ಅಲಿಯಾಸ್ ಡ್ಯಾನಿ ತಾರಕನ್ ಅಲಿಯಾಸ್ ಆಂಟನಿ (64 ವರ್ಷ) ಎಂದು ಗುರತಿಸಲಾಗಿದೆ. ಪ್ರಕರಣದ ಹಿನ್ನೆಲೆ: ಆರೋಪಿ ಶ್ಯಾಮ್ ಪೀಟರ್ ಅಲಿಯಾಸ್ ಟಿ. ಸ್ಯಾಮ್…
-

ಪುತ್ತೂರು ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ: ಸುದರ್ಶನ್ ಪೈಗೆ ಜಾಮೀನು, ಅಂಜನಾ ಪೈಗೆ ನಿರೀಕ್ಷಣಾ ಜಾಮೀನು
ಪುತ್ತೂರು : ದರ್ಬೆಯ ಜನಸೇವಾ ಕೇಂದ್ರವೊಂದರಲ್ಲಿ ತಾಂತ್ರಿಕ ದೋಷದಿಂದ ಗ್ರಾಹಕರ ದಾಖಲಾತಿ ಹಾನಿಗೊಂಡ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಹಲ್ಲೆ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸುದರ್ಶನ್ ಪೈಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದೇ ಪ್ರಕರಣದ ಇನ್ನೋರ್ವ ಆರೋಪಿಯಾಗಿರುವ ಜನಸೇವಾ ಕೇಂದ್ರದ ಮಾಲಕಿ ಅಂಜನಾ ಎಸ್. ಪೈ ಅವರಿಗೆ ನಿರೀಕ್ಷಣಾ ಜಾಮೀನು ಲಭಿಸಿದೆ. ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಉಭಯ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಸುಳ್ಯ ತಾಲೂಕಿನ ಜಾಲ್ಲೂರು…
-

ಭ್ರಷ್ಟಾಚಾರ ಪ್ರಕರಣ: ಬೆಳ್ತಂಗಡಿಯ SIT ಸಬ್ ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ಅಮಾನತು
ಬೆಳ್ತಂಗಡಿ: ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಒಂದು ವರ್ಷದಿಂದ ಬೆಳ್ತಂಗಡಿಯಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ)ದಲ್ಲಿ ಸೇವೆ ಸಲ್ಲಿಸುತ್ತಿದ್ದ ಸಬ್ ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ಅವರನ್ನು ಆಗಸ್ಟ್ 31 ರಂದು ಭ್ರಷ್ಟಾಚಾರ ಪ್ರಕರಣದಲ್ಲಿ ಅಮಾನತುಗೊಳಿಸಲಾಗಿದೆ. ರೆಡ್ಡಿ ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು ಮತ್ತು ನಂತರ ಅವರನ್ನು ಮುಂಡಗೋಡ ಪೊಲೀಸ್ ಠಾಣೆಗೆ ವರ್ಗಾಯಿಸಲಾಯಿತು. ವರ್ಗಾವಣೆ ಮತ್ತು ಮಾಸಿಕ ವಸೂಲಿಗಳಿಗೆ ಸಂಬಂಧಿಸಿದ ವ್ಯವಹಾರಗಳ ಕುರಿತು ಚರ್ಚೆಗಳು ನಡೆದಿವೆ ಎನ್ನಲಾದ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











