Category: ಕರಾವಳಿ
-

ಮಂಗಳೂರು: ಫೇಸ್ಬುಕ್ ಜಾಹೀರಾತು ನಂಬಿ ಎಪಿಕೆ ಫೈಲ್ ಡೌನ್ಲೋಡ್ – ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹1.78 ಲಕ್ಷ ಮಾಯ
ಮಂಗಳೂರು: ಫೇಸ್ಬುಕ್ನಲ್ಲಿ ಬಂದಿದ್ದ ‘XM TV’ ಉಚಿತ ಟಿವಿ ಚಾನೆಲ್ ಜಾಹೀರಾತನ್ನು ನಂಬಿ ಆ್ಯಪ್ ಡೌನ್ಲೋಡ್ ಮಾಡಿಕೊಂಡ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಒಟ್ಟು ₹1,78,191/- ಹಣವನ್ನು ಸೈಬರ್ ವಂಚಕರು ಲಪಟಾಯಿಸಿರುವ ಘಟನೆ ಬೆಳಕಿಗೆ ಬಂದಿದೆ. ದೂರುದಾರರಾದ 44 ವರ್ಷದ ವ್ಯಕ್ತಿ ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ಸೈಬರ್ ವಂಚನೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಅಕ್ಟೋಬರ್ 15ರಂದು ದೂರುದಾರರು ಮನೆಯಲ್ಲಿ ಫೇಸ್ಬುಕ್ ನೋಡುತ್ತಿದ್ದಾಗ ‘XM TV’ ಎಂಬ ಜಾಹೀರಾತು ಕಾಣಿಸಿಕೊಂಡಿದೆ. ಅದರಲ್ಲಿ ಎಲ್ಲಾ…
-

ಸೌತಡ್ಕ ದೇವಸ್ಥಾನಕ್ಕೆ ಮೀಸಲಿಟ್ಟ ಜಮೀನಿನಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಆರೋಪ: ದೂರು ದಾಖಲು
ಬೆಳ್ತಂಗಡಿ: ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನದ ಸಮೀಪ ದೇವಸ್ಥಾನಕ್ಕಾಗಿ ಕಾಯ್ದಿರಿಸಲಾದ ಜಮೀನಿನಲ್ಲಿ ಸಂಬಂಧಪಟ್ಟ ಇಲಾಖೆಗಳ ಅನುಮತಿ ಪಡೆಯದೆ ಅಕ್ರಮವಾಗಿ ಕಟ್ಟಡ ನಿರ್ಮಿಸಿ ಬಾಡಿಗೆಗೆ ನೀಡಿರುವ ಆರೋಪದ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸೌತಡ್ಕ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿ ಸುಬ್ರಹ್ಮಣ್ಯ ಶಬರಾಯ ಅವರು ನೀಡಿದ ದೂರಿನಂತೆ, ದೇವಸ್ಥಾನದ ಮಾಜಿ ಪದಾಧಿಕಾರಿ ಹಾಗೂ ಕೊಕ್ಕಡ ನಿವಾಸಿ ಕೃಷ್ಣ ಭಟ್ ಅವರು ದೇವಸ್ಥಾನಕ್ಕಾಗಿ ಕಾಯ್ದಿರಿಸಲಾದ ಜಮೀನಿನಲ್ಲಿ ಅಗತ್ಯ ಅನುಮತಿಗಳನ್ನು ಪಡೆಯದೆ ಮತ್ತು ಅಧಿಕೃತ ದಾಖಲೆಗಳಿಲ್ಲದೆ ಕಟ್ಟಡ ನಿರ್ಮಿಸಿ…
-

ಮಂಗಳೂರು: ಬೋಳಿಯಾರ್ ಅಪಘಾತ ಪ್ರಕರಣ- ಕೊಲೆ ಆರೋಪದಲ್ಲಿ ಪಿಕಪ್ ಚಾಲಕನ ಬಂಧನ
ಮಂಗಳೂರು: ಬೋಳಿಯಾರ್ ಪೆಟ್ರೋಲ್ ಪಂಪ್ ಬಳಿ ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನದಿಂದ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆಸಿ ಇಬ್ಬರು ಯುವಕರನ್ನು ಕೊಲೆ ಮಾಡಿದ ಪ್ರಕರಣದ ಪ್ರಮುಖ ಆರೋಪಿಯನ್ನು ಮಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪಿಕಪ್ ಚಾಲಕ ಹಫೀಝ್ ಅಲಿಯಾಸ್ ಅಪ್ಪಿ ಬಂಧಿತ ಆರೋಪಿ ಎಂದು ನಗರ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ. ಉಳ್ಳಾಲ ತಾಲೂಕಿನ ಕಿನ್ಯಾ ಗ್ರಾಮದ ಇಸ್ಮಾಯಿಲ್ ಅವರು ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅಕ್ಟೋಬರ್ 19ರಂದು ಸಂಜೆ ಸ್ಕೂಟರ್ನಲ್ಲಿ ತೆರಳುತ್ತಿದ್ದ…
-

ಮಂಗಳೂರು: ದ್ವಿಚಕ್ರ ವಾಹನಕ್ಕೆ ಪಿಕಪ್ ಢಿಕ್ಕಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!! ವ್ಯವಸ್ಥಿತ ಕೊಲೆ ಶಂಕೆ..? ಪಿಕಪ್ ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಲು
ಮಂಗಳೂರು: ಸೋಮವಾರ ಬೋಳಿಯಾರ್ ಪೆಟ್ರೋಲ್ ಪಂಪ್ ಬಳಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದರು. ಆದರೆ, ಇದೀಗ ಈ ಘಟನೆಯು ಪೂರ್ವಯೋಜಿತ ಕೊಲೆ ಎಂದು ಬೆಳಕಿಗೆ ಬಂದಿದೆ. ಆರಂಭದಲ್ಲಿ ಇದೊಂದು ಭೀಕರ ರಸ್ತೆ ಅಪಘಾತ ಎಂದು ವರದಿಯಾಗಿತ್ತು. ಆದರೆ, ಪೊಲೀಸ್ ತನಿಖೆ ಮತ್ತು ದಾಖಲಾದ ದೂರಿನ ಪ್ರಕಾರ, ಜಗಳವೊಂದರ ಬಳಿಕ ಪಿಕಪ್ ವಾಹನ ಚಾಲಕನೊಬ್ಬ ಉದ್ದೇಶಪೂರ್ವಕವಾಗಿಯೇ ಯುವಕರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿರುವುದು ತಿಳಿದುಬಂದಿದೆ. ಕೊಣಾಜೆ ಪೊಲೀಸರು ಆರೋಪಿ ಚಾಲಕ, ಹಫೀಜ್ ಅಲಿಯಾಸ್ ಅಪ್ಪಿ ಎಂಬಾತನ…
-

ಮಂಗಳೂರು: ದ್ವಿಚಕ್ರ ವಾಹನಕ್ಕೆ ಪಿಕಪ್ ಢಿಕ್ಕಿ..!! ಇಬ್ಬರು ಮೃತ್ಯು
ಮಂಗಳೂರು: ಬೋಳಿಯಾರ್ ಸಮೀಪದ ಕುರ್ನಾಡು ಪೆಟ್ರೋಲ್ ಪಂಪ್ ಬಳಿ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಬಂದ ಪಿಕಪ್ ಢಿಕ್ಕಿ ಹೊಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಸಹಸವಾರ ಮೃತಪಟ್ಟ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಮೃತಪಟ್ಟ ಯುವಕರನ್ನು ಕಿನ್ಯ ಅರೆಬಿನಗರದ ಮಹಮ್ಮದ್ ಅರ್ಫಾಝ್ (22) ಹಾಗೂ ಕಿನ್ಯ ಉಕ್ಕುಡ ನಿವಾಸಿ ಜುನೈದ್ (23) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಬೋಳಿಯಾರ್ ಕಡೆಯಿಂದ ಮುಡಿಪು ಕಡೆಗೆ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಬಂದ ಪಿಕಪ್…
-

ಉಪ್ಪಿನಂಗಡಿ: ತಲಾವಾರು ಪ್ರದರ್ಶಿಸಿ ಸಾರ್ವಜನಿಕರಿಗೆ ಬೆದರಿಕೆ- ಇಬ್ಬರು ಅರೆಸ್ಟ್
ಉಪ್ಪಿನಂಗಡಿ: ಠಾಣಾ ವ್ಯಾಪ್ತಿಯ ಶೆಣೈ ರಸ್ತೆಯಲ್ಲಿರುವ ಬಾರ್ ಸಮೀಪ ಮಾತಿನ ಚಕಮಕಿ ಗಲಾಟೆಗೆ ತಿರುಗಿ, ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿ ಭೀತಿ ಮೂಡಿಸಿದ ಘಟನೆ ಅ.18ರ ರಾತ್ರಿ ನಡೆದಿದೆ. ಮಂಜುನಾಥ್, ವಿಶ್ವನಾಥ ಹಾಗೂ ಮತ್ತೊಬ್ಬ ವ್ಯಕ್ತಿಯ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಮಂಜುನಾಥ್ ತನ್ನ ಬಳಿಯಿದ್ದ ತಲವಾರನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಪ್ಪಿನಂಗಡಿ ಪೊಲೀಸರು ಮಂಜುನಾಥ್ ಮತ್ತು ವಿಶ್ವನಾಥನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರ ವಿಚಾರಣೆ…
-

ಬಂಟ್ವಾಳ: ಯುವಕನ ಮೇಲೆ ಚೂರಿಯಿಂದ ದಾಳಿ -ಆರು ಮಂದಿ ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ: ಅಕ್ಟೋಬರ್ 18 ರಂದು ರಾತ್ರಿ ಸಿದ್ದಕಟ್ಟೆ ಜಂಕ್ಷನ್ನಲ್ಲಿ ಯುವಕನೊಬ್ಬನ ಮೇಲೆ ನಡೆದ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಗ್ರಾಮಾಂತರ ಪೊಲೀಸರು ಆರು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬಂಟ್ವಾಳದ ಸಂಗಬೆಟ್ಟು ನಿವಾಸಿ ಗಣೇಶ್ (34) ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ದೂರಿನ ಪ್ರಕಾರ, ಗಣೇಶ್ ತನ್ನ ಸಹೋದರ ಪ್ರಕಾಶ್ ಮತ್ತು ಇತರ ಐದು ಸ್ನೇಹಿತರೊಂದಿಗೆ ಸಿದ್ದಕಟ್ಟೆ ಜಂಕ್ಷನ್ನಲ್ಲಿ ನಿಂತಿದ್ದಾಗ, ಅಕ್ಷಿತ್, ಕಿರಣ್ ಅಲಿಯಾಸ್ ರಂಜು, ಅಜೀತ್, ಧನುಷ್, ಸಂತೋಷ್ ಮತ್ತು ರಾಜು…
-

ಪುತ್ತೂರು: ಲಾಡ್ಜ್ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಮೂವರಿಂದ ಹಲ್ಲೆ, ಜೀವ ಬೆದರಿಕೆ!!
ಪುತ್ತೂರು: ಲಾಡ್ಜ್ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಮೂವರು ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿರುವ ಘಟನೆ ಅ.17ರಂದು ರಾತ್ರಿ ನಡೆದಿದೆ.ಕಡಬ ಕೊಯಿಲ ನಿವಾಸಿ ಮಹಮ್ಮದ್ ರಿಫಾಯಿ (27) ಹಲ್ಲೆಗೊಳಗಾದವರು. ಇವರು ಪುತ್ತೂರಿನ ಲಾಡ್ಜ್ವೊಂದರಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಲಾಡ್ಜ್ನಲ್ಲಿದ್ದ ವೇಳೆ ಫಾರೂಕ್, ಸೋನು ಹಾಗೂ ಇಷಾನ್ ಎಂಬವರು ಬಂದು ಅವಾಚ್ಯವಾಗಿ ಬೈದು, ಜೀವ ಬೆದರಿಕೆ ಒಡ್ಡಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ…
-

ಬಂಟ್ವಾಳ: ಹಣಕಾಸಿನ ವಿಚಾರ, ವ್ಯಕ್ತಿಗೆ ಚೂರಿ ಇರಿತ!!
ಬಂಟ್ವಾಳ: ಹಣಕಾಸಿನ ವಿಚಾರವಾಗಿ ನಡೆದ ಮಾತಿನ ಚಕಮಕಿಯ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದು ಕೊಲೆ ಯತ್ನ ನಡೆಸಿದ ಘಟನೆ ಬಂಟ್ವಾಳದ ಬಿ.ಮೂಡ ಗ್ರಾಮದ ಪಲ್ಲಮಜಲು ಜಂಕ್ಷನ್ ನಲ್ಲಿ ಅ.17ರ ರಾತ್ರಿ ನಡೆದಿದೆ. ಬಿ.ಮೂಡ ಗ್ರಾಮದ ಕುಪ್ಪಿಲ ನಿವಾಸಿ ಉದಯ್ ಚೂರಿ ಇರಿತಕ್ಕೊಳಗಾದವರು. ಅಜಿತ್ ಕಲ್ಲಗುಡ್ಡೆ ಎಂಬಾತ ಆರೋಪಿಯಾಗಿದ್ದಾನೆ ಎಂದು ದೂರು ನೀಡಿದ್ದಾರೆ. ಉದಯ್ ಅವರು ಅಜಿತ್ ಗೆ ಹಲವು ವರ್ಷಗಳಿಂದ ಹಣ ನೀಡಿದ್ದು, ವಾಪಸ್ ಕೇಳುತ್ತಿದ್ದರೂ ಆತ ನೀಡಿರಲಿಲ್ಲ ಎನ್ನಲಾಗಿದೆ. ಅ.17ರಂದು ರಾತ್ರಿ ಹಣ ಕೇಳುವ ವಿಚಾರದಲ್ಲಿ…
-

ಮಂಗಳೂರು : ಅವಧಿ ಮೀರಿದ ಬೇಕರಿ ಉತ್ಪನ್ನಗಳ ಮಾರಾಟ- ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ, ಬೇಕರಿ ಸೀಝ್
ಮಂಗಳೂರು : ಬೇಕರಿ ಆಹಾರ ಉತ್ಪನ್ನಗಳನ್ನು ರಿಪ್ಯಾಕ್ ಮಾಡಿ ಮಾರಾಟ ಮಾಡುತ್ತಿರುವ ನಗರದ ಬೇಕರಿಯೊಂದಕ್ಕೆ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆರೋಗ್ಯ ಸಚಿವ ಯುಟಿ ಖಾದರ್ ಅವರ ಸೂಚನೆಯ ಮೇರೆಗೆ ಸಿಹಿ ತಿಂಡಿ ತಿನಿಸು ತಯಾರಿಕಾ ಘಟಕ ಹಾಗೂ ಮಾರಾಟ ಮಾಡುವ ಆಹಾರೋದ್ಯಮಗಳ ಮೇಲೆ ಶನಿವಾರ (ಅ.17) ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಪ್ರವೀಣ್ ಕುಮಾರ್ ಸಿಎಚ್ ನೇತೃತ್ವದ ತಂಡ ದಾಳಿ ನಡೆಸಿದ್ದಾರೆ. ನಗರದ ಫಳ್ನೀರ್ ಜಂಕ್ಷನ್ನಲ್ಲಿರುವ ಬೇಕರಿ ಮೇಲೆ ದಾಳಿ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











