Category: ಕರಾವಳಿ
-

ಲೈಂಗಿಕ ಕಿರುಕುಳ ಆರೋಪದಡಿ ಮೂಡಬಿದ್ರೆ ಠಾಣೆ ಇನ್ಸ್ ಪೆಕ್ಟರ್ ಸಂದೇಶ್ ಸಸ್ಪೆಂಡ್
ಮಂಗಳೂರು: ರಕ್ಷಣೆ ನೀಡಬೇಕಾದ ಪೊಲೀಸರೇ ಭಕ್ಷಕರಾದರೇ ಎಂಬ ಅನುಮಾನ ಮೂಡಿಸುವಂತಹ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ದೂರು ನೀಡಲು ಬಂದ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಘಟನೆಯ ಹಿನ್ನೆಲೆ: ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪಗಳು ಕೇಳಿಬಂದಿವೆ. ದೂರು ನೀಡಲು ಬಂದ ಮಹಿಳೆಯೊಬ್ಬರನ್ನು ಬ್ಲಾಕ್‌ಮೇಲ್ ಮಾಡಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೆ, ಮತ್ತೊಬ್ಬ ಸಂತ್ರಸ್ತ…
-

ಮಂಗಳೂರು ನಗರದಲ್ಲಿ ಅಲ್ಲಲ್ಲಿ ಪೊಲೀಸ್ ಬೂತ್ ಅಳವಡಿಕೆ, ತಮಿಳುನಾಡಿನ ವ್ಯಕ್ತಿಗೆ ಗುತ್ತಿಗೆ ನೀಡಿ ಕೈತೊಳೆದುಕೊಂಡ ಸರ್ಕಾರ..!!
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜಾಹೀರಾತುಗಳ ಟೆಂಡರ್, ಟ್ರಾಫಿಕ್ ಪೊಲೀಸ್ ಬೂತ್ ಹೀಗೆ ಮೊದಲಾದ ವಿಷಯಗಳಲ್ಲಿ ಬೆಂಗಳೂರಿನಲ್ಲಿ ಕೂತವರು, ಪಾಲಿಕೆ ಅಧಿಕಾರಿಗಳು, ಪೊಲೀಸ್ ಇಲಾಖೆ, ಜನಪ್ರತಿನಿಧಿಗಳು, ಸೇರಿದಂತೆ ಯಾರಿಗೂ ಮಾಹಿತಿ ನೀಡದೇ ಏಕಪಕ್ಷೀಯವಾಗಿ ನಡೆದುಕೊಂಡು ತಮಿಳುನಾಡಿನ ವ್ಯಕ್ತಿಯೊಬ್ಬರಿಗೆ ಗುತ್ತಿಗೆ ನೀಡಿ ಕೈ ತೊಳೆದುಕೊಂಡಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ನೀತಿ ನಿಯಮಗಳನ್ನೆಲ್ಲ ಗಾಳಿಗೆ ತೂರಿ, ತಮಗಿಷ್ಟ ಬಂದ ಹಾಗೆ ಅನ್ಯ ರಾಜ್ಯದವರಿಗೆ ಅನುಕೂಲ ಮಾಡಿಕೊಟ್ಟು, ಇಷ್ಟು ವರ್ಷ ಮಂಗಳೂರಿನಲ್ಲಿ…
-

ಮೂಡುಬಿದಿರೆ ಇನ್‌ಸ್ಪೆಕ್ಟರ್‌ರ ಇನ್ನಷ್ಟು ವಿಡಿಯೋ ಬಹಿರಂಗ
ಮೂಡುಬಿದಿರೆ: ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರದ್ದು ಎನ್ನಲಾದ ಇನ್ನಷ್ಟು ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ದೂರು ನೀಡಲು ಬಂದ ಮಹಿಳೆಯರನ್ನೇ ಲೈಂಗಿಕ ಕ್ರಿಯೆಗೆ ಬಲವಂತಪಡಿಸಿರುವ ಆರೋಪ ಎದುರಿಸುತ್ತಿರುವ ಸಂದೇಶ್ ಪಿಜಿ ವಿರುದ್ಧ ಇದೀಗ ಇನ್ನೂ ಅನೇಕ ಆರೋಪಗಳು ಕೇಳಿಬರುತ್ತಿವೆ. ಸಂದೇಶ್ ಪಿ.ಜಿ.ಅಡುಗೆ ಕೋಣೆಯಲ್ಲಿ ಮಹಿಳೆಯೊಬ್ಬಳ ಕೈಹಿಡಿದು ಬಲವಂತವಾಗಿ ಕುಣಿಸುತ್ತಿರುವ ಹಾಗೂ ಮನೆಯೊಂದರ ಕಾಂಪೌಂಡ್ ಹಾರುತ್ತಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. ಪೊಲೀಸ್…
-

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡಿಪಾರು ಆದೇಶ!!
ಬೆಳ್ತಂಗಡಿ: ಸೌಜನ್ಯಾ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್ ಆದೇಶದಂತೆ ಆರು ತಿಂಗಳು ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಮಾ.16ರಂದು ಆದೇಶ ಹೊರಡಿಸಿದ್ದಾರೆ. ಗಡಿಪಾರು ಅವಧಿಯು ಮಾ.16ರಿಂದ ಸೆಪ್ಟಂಬರ್ 16ರವರೆಗೆ ಆರು ತಿಂಗಳು ಕಾಲಾವಧಿಯನ್ನು ಹೊಂದಿದೆ. ಪುತ್ತೂರು ಎಸಿಯವರ ಗಡಿಪಾರು ಆದೇಶದಂತೆ ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಣಿ ಸಿ.ಕೆ. ನೇತೃತ್ವದಲ್ಲಿ ಪೊಲೀಸರು…
-

ಮೂಡಬಿದ್ರೆ ಇನ್ಸ್‌ಪೆಕ್ಟರ್ ವಿರುದ್ದ ಮಹಿಳೆ ಆರೋಪ ಪ್ರಕರಣ: ಕಮಿಷನರ್ ಮಹತ್ವದ ಆದೇಶ
ಮೂಡುಬಿದಿರೆ: ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ವಿರುದ್ದ ಮಹಿಳೆ ಆರೋಪ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಮಹಿಳೆ ಹಾಗೂ ಇನ್ಸ್‌ಪೆಕ್ಟರ್ ಸಂದೇಶ್ ಫೋನ್ ಸಂಭಾಷಣೆ ಮಾಡಿದ್ದಾರೆ ಎನ್ನಲಾದ ಆಡಿಯೋ ಭಾರಿ ವೈರಲ್ ಆಗಿದೆ. 8 ವರ್ಷ ಅಕ್ರಮ ಸಂಬಂಧ ಇಟ್ಟುಕೊಂಡರೂ ಇನ್ಸ್‌ಪೆಕ್ಟರ್ ಅನ್ನೋ ಕಾರಣಕ್ಕೆ ಸಹಿಸಿಕೊಂಡಿದ್ದೇನೆ. ಆದರೆ ಮಗಳ ಮೇಲೆ ಕಣ್ಣು ಹಾಕಿದರೆ ಸುಮ್ಮನಿರಲ್ಲ ಅನ್ನೋ ಆಡಿಯೋ ಕೋಲಾಹಲ ಸೃಷ್ಟಿಸಿದೆ. ಈ ಆಡಿಯೋ ವೈರಲ್ ಆದ ಬೆನ್ನಲ್ಲೇ ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಇದರ ಬೆನ್ನಲ್ಲೇ ಮಂಗಳೂರು ಪೊಲೀಸ್…
-

ಪಡುಬಿದ್ರಿ: ಸಾಲದ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆ- ಚೂರಿ ಇರಿದು ಕೊಲೆ ಯತ್ನ
ಪಡುಬಿದ್ರಿ: ಸಾಲದ ಹಣವನ್ನು ಕೇಳಿದ ಕಾರಣಕ್ಕೆ ಸ್ನೇಹಿತನ ಮೇಲೆಯೇ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.ಕಾರ್ಕಳ ತಾಲೂಕಿನ ಬಜಗೋಳಿ ಅಂಚೆ ನಿವಾಸಿ ಸುಮಿತ್ ಎಸ್. ಸುವರ್ಣ (29) ಅವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಅವರ ದೂರಿನ ಪ್ರಕಾರ, ಆರೋಪಿ ಧೀರಜ್ ಅವರೊಂದಿಗೆ ಸ್ನೇಹಿತರಾಗಿದ್ದು, ಸುಮಾರು ಎರಡು ವರ್ಷಗಳ ಹಿಂದೆ 2 ಲಕ್ಷ ರೂಪಾಯಿ ಸಾಲವಾಗಿ ನೀಡಿದ್ದರು. ಆರು ತಿಂಗಳೊಳಗೆ ಹಣವನ್ನು ಹಿಂತಿರುಗಿಸುವುದಾಗಿ ಹೇಳಿದ್ದರೂ…
-

ಕಂಪ್ಲೇಂಟ್ ಕೊಡೋಕೆ ಬಂದ ಮಹಿಳೆಯನ್ನೇ ಮಂಚಕ್ಕೆ ಕರೆದ ಮೂಡಬಿದ್ರೆ ಇನ್ಸ್‌ಪೆಕ್ಟರ್..!!
ಮೂಡಬಿದ್ರೆ: ಪತಿಯನ್ನು ಬಿಡುಗಡೆ ಮಾಡಿಸಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ಲೈಂಗಿಕ ಕಿರುಕುಳ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಸಂತ್ರಸ್ತ ಮಹಿಳೆ ಈ ಆರೋಪ ಮಾಡಿದ್ದಾರೆ. ಮಹಿಳೆಯೊಬ್ಬಳು ತನ್ನ ಪತಿಯನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲು ಮಹಿಳೆ ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ಇನ್ಸ್‌ಪೆಕ್ಟರ್ ಸಂದೇಶ್ ಅಸಭ್ಯವಾಗಿ ವರ್ತಿಸಿ, ಪತಿಯನ್ನು ಬಿಡಿಸಬೇಕಾದರೆ ಲೈಂಗಿಕವಾಗಿ ಸಹಕರಿಸಬೇಕು ಎಂದು ಒತ್ತಾಯಿಸಿದರು ಎಂದು ಮಹಿಳೆ ಆರೋಪ…
-

ಉಡುಪಿ: ಕಟಪಾಡಿ ಬಳಿ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಎಲ್‌ಪಿಜಿ ಟ್ಯಾಂಕರ್
ಉಡುಪಿ: ಉಡುಪಿ ಸಮೀಪದ ಕಟಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎಲ್ಪಿಜಿ ಗ್ಯಾಸ್ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ಮಗುಚಿ ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲೇ ಟ್ಯಾಂಕರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿರುವುದಾಗಿ ತಿಳಿದು ಬಂದಿದೆ. ಘಟನೆಯ ಬಳಿಕ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ ಇದೆಯೇ ಎಂಬುದರ ಬಗ್ಗೆ ಪರಿಶೀಲನೆ ನಡೆಸಿದರು. ಯಾವುದೇ ಅಪಾಯ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಟ್ಯಾಂಕರ್…
-

ಯುವತಿಗೆ ಬೆದರಿಸಿ 14 ಲಕ್ಷ ರೂ. ಪಡೆದ ಯುವಕ: ಪ್ರಕರಣ ದಾಖಲು
ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಯುವತಿಗೆ ಬೆದರಿಸಿ 14 ಲಕ್ಷ ರೂ. ವಸೂಲಿ ಮಾಡಿದ ಯುವಕನ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾರ್ಪಳ್ಳಿ ಬಲ್ಲಾಳ್ ನಗರದ ನಿವಾಸಿ ಮಹಿಮಾ (22) ಎಂಬಾಕೆಗೆ ಕೆ.ಆರ್.ಪೇಟೆಯ ಶರತ್ ಎಂಬಾತನು ಕಳೆದ 2ವರ್ಷಗಳ ಹಿಂದೆ ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದ. ಮೊದಲಿಗೆ ಬೇರೆ ಬೇರೆ ಸಮಸ್ಯೆಗಳನ್ನು ಹೇಳಿಕೊಂಡು 500, 1000, 2000 ರೂ. ಹೀಗೆ ಹಣವನ್ನು ಪಡೆದುಕೊಳ್ಳುತ್ತಿದ್ದನು. ಈ ಹಣವನ್ನು ಮಹಿಮಾ ವಾಪಸ್ಸು ಕೇಳಿದಾಗ ಏನಾದರೂ ನೆಪ ಹೇಳಿ ತಪ್ಪಿಸಿಕೊಳ್ಳುತ್ತಿದ್ದು, ಕಳೆದ ಫೆಬ್ರವರಿ ತಿಂಗಳಲ್ಲಿ…
-

ಉಡುಪಿ ಜಿಲ್ಲೆಯ ಮೂವರಿಗೆ ಗಡಿಪಾರು ಆದೇಶ..!!
ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕ್ರಿಮಿನಲ್ ಪ್ರಕರಣದ ಹಿನ್ನೆಲೆಯುಳ್ಳ ಸಂದೇಶ, ಸುಶಾಂತ್ ಹಾಗೂ ಪಡುಬಿದ್ರಿ ಪೊಲೀಸ್ ಠಾಣೆಯ ವ್ಯಾಪ್ತಿಯ ಜಬ್ಬಾರ್ ಹುಸೇನ್ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಪೊಲೀಸ್ ಅಧೀಕ್ಷಕರು ಗಡಿಪಾರು ಆದೇಶ ಹೊರಡಿಸಿದ್ದಾರೆ. ಈ ಪೈಕಿ ಕಾಪು ನಡ್ಸಾಲು ನಿವಾಸಿ ಜಬ್ಬಾರ್ ಹುಸೈನ್ ಎಂಬುವರ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದ್ದು, ಈತನ ವಿರುದ್ಧ ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರದಲ್ಲಿ ಇದುವರೆಗೆ ಒಟ್ಟು…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











