Category: ಕರಾವಳಿ
-

ಮಂಗಳೂರು: ಆನ್ ಲೈನ್ ಗೇಮ್ ನಲ್ಲಿ ಸೋಲಿಸಿದ ವಿಚಾರವಾಗಿ ಕೊಲೆಯತ್ನ..!! ಆರೋಪಿಗೆ 4 ವರ್ಷ ಜೈಲು ಶಿಕ್ಷೆ
ಮಂಗಳೂರು: ನಗರದ, ಜೆಪ್ಪು ಬಪ್ಪಾಲ್ ನಿವಾಸಿ ಪ್ರತ್ಯುಶ್ ಸಾಲಿಯಾನ್ ರವರು ಸಂಜಯ್ ಪೂಜಾರಿ ಎಂಬುವರನ್ನು Free Fire ಎಂಬ ಮೊಬೈಲ್ ಆನ್ ಲೈನ್ ಗೇಮ್ ನಲ್ಲಿ ಸೋಲಿಸಿದ ವಿಚಾರವಾಗಿ, ಪ್ರತ್ಯುಶ್ ಸಾಲಿಯಾನ್ ಮೇಲೆ ಸಂಜಯ್ ಪೂಜಾರಿ ಗೆ ದ್ವೇಷವಿದ್ದು, ದಿನಾಂಕ 17-05-2023 ರಂದು ಪ್ರತ್ಯುಶ್ ಸಾಲಿಯಾನ್ ರವರು ಮಂಗಳೂರು ನಗರದ ಜೆಪ್ಪು ಬಪ್ಪಾಲ್ ನ ತನ್ನ ಮನೆಯಿಂದ ನಡೆದುಕೊಂಡು ನಂದಿಗುಡ್ಡೆ ಕಡೆಗೆ ಹೋಗುತ್ತಿದ್ದಾಗ, ಸಂಜಯ್ ಪೂಜಾರಿ ಪ್ರತ್ಯುಶ್ ಸಾಲಿಯಾನ್ ರವರನ್ನು ಅಕ್ರಮವಾಗಿ ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ…
-

ಪಿಳಿಕುಳ ಮೃಗಾಲಯದಲ್ಲಿ ಪ್ರಾಣಿಗಳ ದಯನೀಯ ಸ್ಥಿತಿ ಕಂಡು ಬಂದ್ ಮಾಡಲು ಹೈಕೋರ್ಟ್ ನ್ಯಾಯಾಧೀಶರ ಸೂಚನೆ.
ಮಂಗಳೂರು : ದಕ್ಷಿಣಕನ್ನಡ ಭಾಗದಲ್ಲಿ ಪಿಳಿಕುಳ ನಿಸರ್ಗಧಾಮವೆಂದರೆ ಮಕ್ಕಳ ಅಚ್ಚುಮೆಚ್ಚಿನ ತಾಣ ಆದರೆ ಅಧಿಕಾರಿಗಳ ನಿರ್ಲಕ್ಷ್ಯಹಾಗೂ ಬೇಜವಾಬ್ದಾರಿಯಿಂದ ಕರಾವಳಿಯ ಪ್ರಸಿದ್ಧ ಮೃಗಾಲಯದ ಅವ್ಯವವಸ್ಥೆ ಕಂಡು ಹೈ ಕೋರ್ಟ್ ನ್ಯಾಯಾಧೀಶರೇ ಶಾಕ್ ಆಗಿದ್ದು ತಕ್ಷಣ ಬಂದ್ ಮಾಡಿ ಎಂದು ಹೈಕೋರ್ಟ್ ನ್ಯಾಯಾಧಿಶರು ಸೂಚನೆ ನೀಡಿದ್ದಾರೆ. ಇದೀಗ ಅಧಿಕಾರಿಗಳ ಬೇಜಾಬ್ದಾರಿಯಿಂದ ಮಂಗಳೂರಿನ ಪಿಲಿಕುಳ ಮೃಗಾಲಯಕ್ಕೆ ಸಂಕಷ್ಟ ಸುರುವಾಗಿದ್ದು ಮೃಗಾಲಯಕ್ಕೆ ಬೀಗ ಹಾಕಲು ಸೂಚಿಸಿದ್ದಾರೆ. ಪಿಳಿಕುಲ ಮೃಗಾಲಯದಲ್ಲಿರುವ ಪ್ರಾಣಿಗಳ ಫೋಟೋ ನೋಡಿ ಹೈಕೋರ್ಟ್ ನ್ಯಾಯಧೀಶರು ಗರಂ ಆಗಿದ್ದು ಉದ್ಯಾನವನದ ಪ್ರಾಣಿಗಳ ದಯನೀಯ ಸ್ಥಿತಿ…
-

ಉಡುಪಿ: ಪ್ರವಾಸಿ ದೋಣಿ ದುರಂತ ಪ್ರಕರಣ- ದೋಣಿ ಮಾಲಕ ಸಹಿತ ಮೂವರ ಬಂಧನ
ಉಡುಪಿ: ಕೋಡಿಬೆಂಗ್ರೆ ಅಳಿವೆಬಾಗಿಲಿನಲ್ಲಿ ಆರು ದಿನಗಳ ಹಿಂದೆ ಸಂಭವಿಸಿದ ಪ್ರವಾಸಿ ದೋಣಿ ದುರಂತಕ್ಕೆ ಸಂಬಂಧಿಸಿ ದೋಣಿ ಮಾಲಕ ಸಹಿತ ಮೂವರು ಆರೋಪಿಗಳನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಕೋಡಿಬೇಂಗ್ರೆಯ ನಿವಾಸಿಗಳಾದ ಸುಹಾಸ್ ಶ್ರೀಯಾನ್ (23), ಸುಫಿಯಾನ್ (20), ವಾಸು ಮೆಂಡನ್(52) ಬಂಧಿತ ಆರೋಪಿಗಳು. ಇವರನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಎಲ್ಲ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಜ.26ರಂದು ಆರೋಪಿ ಸುಹಾಸ್ ಮೈಸೂರಿನಿಂದ ಬಂದ 29 ಮಂದಿ ಪ್ರವಾಸಿಗರನ್ನು ಎರಡು ದೋಣಿಗಳಲ್ಲಿ ಸಮುದ್ರ ವಿಹಾರಕ್ಕೆ ಕಳುಹಿಸಿದ್ದನು. ಇದರಲ್ಲಿ ಒಂದು ದೋಣಿಯು…
-

ಅಕ್ರಮ ಕಟ್ಟಡದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬಾರ್ & ರೆಸ್ಟೋರೆಂಟ್..!!
ಉಡುಪಿ ಜಿಲ್ಲೆಯ ಕೆಮ್ಮಣ್ಣು ಪಡು ತೋನ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಮತ್ತು ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣವಾಗುತ್ತಿರುವ ಸರೋವರ ಬಾರ್ & ರೆಸ್ಟೋರೆಂಟ್ ವಾಣಿಜ್ಯ ಕಟ್ಟಡದ ಕಾಮಗಾರಿ ಕಟ್ಟಡ ಮಾಲೀಕ ಸಂಪತ್ ಕುಮಾರ್ ಶೆಟ್ಟಿ ಎಂಬಾತನು ಕಟ್ಟಡ ಪರವಾನಿಗೆಯನ್ನು ಪಡೆಯದೇ ರಾಜರೋಷವಾಗಿ ಅಕ್ರಮ ಕಟ್ಟಡದ ನಿರ್ಮಾಣಕ್ಕೆ ಸುಮಾರು ಮೂವತ್ತು ಕಾರ್ಮಿಕರನ್ನು ಸೇರಿಸಿ ರಾತ್ರಿ ಹಗಲು ಕಟ್ಟಡದ ಕಾಮಗಾರಿಯು ಭರದಿಂದ ಸಾಗುತ್ತಿದ್ದು ಇದೀಗ ಕಾಮಗಾರಿಯು ಕೊನೆ ಹಂತದಲ್ಲಿದೆ. ಬಾರ್ ಗಳಿಗೆ ಒಂದೇ ಬಾಗಿಲು ಅಳವಡಿಸಲು ಕಾನೂನು, ಈ ಬಾರ್…
-

ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಹರಡುವ ಪೋಸ್ಟ್- ಇಬ್ಬರ ಬಂಧನ
ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹರಡಿಸುವ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ವಾರಂಬಳ್ಳಿ ಗ್ರಾಮದ ಮೂಡು ಗರಡಿ ರಸ್ತೆಯ ಸಂತೋಷ ಕುಮಾರ್ ಶೆಟ್ಟಿ(56) ಹಾಗೂ ಕೋಟೇಶ್ವರ ಗ್ರಾಮದ ಹಾಲಾಡಿ ರೋಡ್ ಕೆ.ನಾಗರಾಜ(62) ಬಂಧಿತ ಆರೋಪಿಗಳು. ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಧರ್ಮಗಳ ಮಧ್ಯೆ ದ್ವೇಷ ಹರಡಿಸುವಂತಹ ವಿಡಿಯೋ ಹಾಕಿದ ಬಗ್ಗೆ ಇವರಿಬ್ಬರ ವಿರುದ್ಧ ಜ.29ರಂದು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ. ಮತ್ತು ಬ್ರಹ್ಮಾವರ ಪೊಲೀಸ್ ವೃತ್ತ…
-

ಉಡುಪಿ: ಪ್ರೇಯಸಿ ಜೊತೆ ಮೊಬೈಲ್‌ನಲ್ಲಿ ಮಾತನಾಡುತ್ತ ನೇಣಿಗೆ ಶರಣಾದ ಯುವಕ- ಸಂಶಯಾಸ್ಪದ ಸಾವು – ಪ್ರಕರಣ ದಾಖಲು
ಉಡುಪಿ: ಪ್ರೇಯಸಿಯೊಂದಿಗೆ ಮೊಬೈಲ್ ನಲ್ಲಿ ಮಾತನಾಡುತ್ತ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ವರದಿಯಾಗಿದೆ. ದೂರಿನ್ವಯ’ ಮೃತರಾದ ರಂಜಿತ್ (28) ರವರು ಜ 29 ರಂದು ಪೆಂಟಿಂಗ್ ಕೆಲಸವನ್ನು ಮುಗಿಸಿ ಮನೆಗೆ ಬಂದು ಮನೆಯವರೊಟ್ಟಿಗೆ ಮಾತನಾಡಿ ತಾನು ಪ್ರಿತೀಸುತ್ತಿದ್ದ ಹುಡುಗಿ ಜೊತೆ ಫೋನಿನಲ್ಲಿ ಮಾತನಾಡುತ್ತಾ ಅವರ ರೂಮಿನೊಳಗೆ ಹೋಗಿರುತ್ತಾರೆ. ಮೃತರ ತಂದೆ ವಾಟರ್ ಟ್ಯಾಂಕಿನ ವಾಲ್ ನ್ನು ಆಫ್ ಮಾಡಲು ಹೋಗುವಾಗ ರಂಜಿತ್ ರೂಮಿನ ಕಿಟಕಿ ತೆರೆದಿದ್ದು, ಅದರ ಬಳಿ ಹೋಗಿ ನೋಡಿದಾಗ ರಂಜಿತ್ ನು ಫ್ಯಾನಿಗೆ ನೇಣು…
-

ಬಸ್ ಗಳಿಗೆ ಬಾಗಿಲು ಅಳವಡಿಕೆಗೆ ಜೂ. 1ರವರೆಗೆ ಕಾಲಾವಕಾಶ: ಎಸ್ಪಿ ಹರಿರಾಮ್
ಉಡುಪಿ ಜಿಲ್ಲೆಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳು ಸೇರಿದಂತೆ ಎಲ್ಲಾ ಬಸ್‌ಗಳಿಗೆ ಕಡ್ಡಾಯವಾಗಿ ಬಾಗಿಲು ಅಳವಡಿಕೆಗೆ ನೀಡಿರುವ ಕಾಲಾವಕಾಶವನ್ನು ಜೂ. 1ರವರೆಗೆ ವಿಸ್ತರಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹರಿರಾಮ್ ಶಂಕರ್ ಹೇಳಿದ್ದಾರೆ. ಬಸ್ ಮಾಲಕರ ಸಂಘದೊಂದಿಗೆ ಇಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅಧ್ಯಕ್ಷತೆಯಲ್ಲಿ ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಎಲ್ಲಾ ಬಸ್ಸುಗಳಿಗೆ ಡೋರ್‌ಗಳನ್ನು ಶೀಘ್ರವಾಗಿ ಅಳವಡಿಸಬೇಕಾಗಿರುತ್ತದೆ, ಆದರೆ ಮಾರ್ಚ್ ವರೆಗೆ…
-

ಮಂಗಳೂರು: ಎಲ್ಲೆಂದರಲ್ಲಿ ತ್ಯಾಜ್ಯ ಸುರಿಯುವವರ ವಿರುದ್ಧ ಕಠಿಣ ಕ್ರಮ..!!
ಮಂಗಳೂರು ಮಹಾನಗರ ಪಾಲಿಕೆಯು ಸ್ವಚ್ಛ ಮಂಗಳೂರು ಅಭಿಯಾನದ ಅಂಗವಾಗಿ ಕಾರ್ಯಾಚರಣೆಗೆ ಇಳಿದಿದ್ದು, ರಸ್ತೆಬದಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯವನ್ನು ಸುರಿಯುವವರ ವಿರುದ್ಧ ಕಠಿಣ ದಂಡ ವಿಧಿಸಲು ಮುಂದಾಗಿದೆ. ಅನುಚಿತ ತ್ಯಾಜ್ಯ ವಿಲೇವಾರಿ ಒಂದು ಪ್ರಮುಖ ಸವಾಲಾಗಿ ಹೊರಹೊಮ್ಮಿದ್ದು, ನಗರದಲ್ಲಿ ಪ್ರಸ್ತುತ ಸುಮಾರು 85 ಕಸದ ಕಪ್ಪು ಚುಕ್ಕೆಗಳಿವೆ ಎಂದು ಗುರುತಿಸಲಾಗಿದೆ. ಸಮಸ್ಯೆಯನ್ನು ನಿಗ್ರಹಿಸಲು ಈ ಹಿಂದೆ ತೆಗೆದುಕೊಂಡ ಕ್ರಮಗಳ ಹೊರತಾಗಿಯೂ ಹಲವಾರು ವಾರ್ಡ್ಗಳು ಆಗಾಗ್ಗೆ ತ್ಯಾಜ್ಯವನ್ನು ಸುರಿಯುವುದನ್ನು ವರದಿ ಮಾಡುತ್ತಲೇ ಇವೆ. ಹೀಗಾಗಿ ನಿಯಮ ಉಲ್ಲಂಘಿಸುವವರ…
-

ಪಡುಬಿದ್ರೆ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು- ಪ್ರಕರಣ ದಾಖಲು
ಪಡುಬಿದ್ರೆ : ಮನೆಯೊಂದಕ್ಕೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಪಡುಬಿದ್ರೆ ಸಮೀಪದ ದೀನ್ ಸ್ಟ್ರೀಟ್‌ನಲ್ಲಿ ನಡೆದಿದೆ. ಮುಹಮ್ಮದ್ ಅಫ್ತಾಬ್ ಅಲಿ ಎಂಬವರ ತಾಯಿ ಮನೆಗೆ ಬೀಗ ಹಾಕಿ ಹತ್ತಿರದಲ್ಲಿದ್ದ ಮಗಳ ಮನೆಗೆ ತೆರಳಿದ್ದರು. ಬುಧವಾರ(ಜ.29) ಮುಂಜಾನೆ ಮನೆಗೆ ಹಿಂತಿರುಗಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು, ಕಪಾಟನ್ನು ತುಂಡರಿಸಿ ಅದರಲ್ಲಿದ್ದ 7 ಪವನ್ ಚಿನ್ನದ ನೆಕ್ಲಸ್, 5 ಪವನ್ ತೂಕದ ಚಿನ್ನದ ನೆಕ್ಲಸ್, ಸುಮಾರು 3 ಪವನ್ ತೂಕದ…
-

ಮಂಗಳೂರು: ದೈವಗಳ ಮೂರ್ತಿ, ಕಡ್ಸಲೆ ಕದ್ದವರು ಅರೆಸ್ಟ್..!!
ಮಂಗಳೂರು : ಭಕ್ತಿಯ ಕೇಂದ್ರವಾದ ದೈವಸ್ಥಾನದ ಪೂಜಾ ಪರಿಕರಗಳನ್ನು ಕದ್ದುಕೊಂಡು ಹೋಗಿದ್ದ ಕಳ್ಳರಿಬ್ಬರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಮನೆಯ ಛಾವಣಿಯ ಹಂಚು ತೆಗೆದು ಒಳನುಗ್ಗಿ, ದೈವಗಳ ಮೂರ್ತಿ ಹಾಗೂ ಬೆಳ್ಳಿಯ ಆಭರಣಗಳನ್ನು ದೋಚಿದ್ದ ಅನ್ಯಮತೀಯ ಕಳ್ಳರು ಈಗ ಪೊಲೀಸರ ಅತಿಥಿಗಳಾಗಿದ್ದಾರೆ.ಕುಳಾಯಿ ಗ್ರಾಮದ ಅಮಿತಾ ಎಂಬವರ ತಾಯಿ ಮನೆಯಲ್ಲಿ ದೈವಗಳ ಆರಾಧನೆ ನಡೆಯುತ್ತಿತ್ತು. ಆದರೆ ಮನೆಯಲ್ಲಿ ಯಾರೂ ಖಾಯಂ ವಾಸವಿಲ್ಲ. ಜನ ವಾಸವಿಲ್ಲದ ಈ ಮನೆಯನ್ನೇ ಗುರಿಯಾಗಿಸಿಕೊಂಡ ಕಳ್ಳರು ಕಳೆದ ಡಿ.26ರ ರಾತ್ರಿ ಹೆಂಚು ತೆಗೆದು ಒಳ ಪ್ರವೇಶಿಸಿ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











