Category: ಕರಾವಳಿ
-

ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ-ನಾಲ್ವರು ಆರೋಪಿಗಳ ಬಂಧನ
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಡ್ನೂರು ಕಾವು ಎಂಬಲ್ಲಿ ಜೂನ್ 19ರಿಂದ 20ರ ನಡುವಿನ ಅವಧಿಯಲ್ಲಿ ನಡೆದ ಓಮ್ನಿ ಕಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ರಾಜ್ಯ ಕಳ್ಳತನ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಅ.ಕ್ರ. 94/2026ರಂತೆ ಬಿಎನ್ಎಸ್ ಕಲಂ 303(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಮೋದ್ ಕುಮಾರ್ ಹಾಗೂ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ಅವರ ಮಾರ್ಗದರ್ಶನದಲ್ಲಿ,…
-

ಹಳೆಯಂಗಡಿ : ಸಹಕಾರಿ ಸಂಘದಲ್ಲಿ ₹20 ಲಕ್ಷ ಸಾಲ ಮಂಜೂರಾಗಿ ಸದಸ್ಯನಿಗೆ ಸಿಕ್ಕಿದ್ದು ₹5 ಲಕ್ಷ ಮಾತ್ರ- ಉಳಿದ ಹಣ ಅಕ್ರಮ ಬಗ್ಗೆ ದೂರು
ಹಳೆಯಂಗಡಿ : ಪ್ರಿಯದರ್ಶಿನಿ ಸಹಕಾರಿ ಸಂಘದಲ್ಲಿ ₹20 ಲಕ್ಷ ಸಾಲ ಮಂಜೂರು ಮಾಡಿ, ಸದಸ್ಯನಿಗೆ ಕೇವಲ ₹5 ಲಕ್ಷ ನೀಡಿ ಉಳಿದ ಹಣವನ್ನು ಬೇರೆ ಖಾತೆಗಳಿಗೆ ಅಕ್ರಮವಾಗಿ ವರ್ಗಾಯಿಸಿ ವಂಚಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.ಪರಿಶಿಷ್ಟ ಜಾತಿಗೆ ಸೇರಿದ ಸಂಘದ ಸದಸ್ಯ ನಾಗೇಶ್ ಅವರು ಮದುವೆಗಾಗಿ ₹5 ಲಕ್ಷ ಸಾಲ ಪಡೆಯುವ ಉದ್ದೇಶದಿಂದ ಜಾಗದ ಮೂಲ ದಾಖಲೆಗಳನ್ನು ಸಂಘಕ್ಕೆ ನೀಡಿದ್ದರು. ಆದರೆ, ಅವರಿಂದ ಖಾಲಿ ಹಾಳೆಗಳಿಗೂ ಸಹಿ ಪಡೆದು, ಒಟ್ಟು 66 ಸೆಂಟ್ಸ್ ಜಾಗವನ್ನು ಅಡಮಾನವಿಟ್ಟು ಅವರ…
-

ಮಂಗಳೂರು: ತಂಗಿಯನ್ನೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದ ಆರೋಪಿಗೆ 4 ವರ್ಷ ಜೈಲು ಶಿಕ್ಷೆ..!
ಮಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ ತಂಗಿಯನ್ನೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ನಿವಾಸಿ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ. ನ್ಯಾಯಾಲಯವು ಐಪಿಸಿ ಕಲಂ 304 (II) ಅನ್ವಯ ಅಪರಾಧಿಗೆ 4 ವರ್ಷಗಳ ಸಜಾ ಶಿಕ್ಷೆ ಹಾಗೂ ₹10,000 ದಂಡ ಮತ್ತು ಸಾಕ್ಷ್ಯ ನಾಶಪಡಿಸಿದ ಐಪಿಸಿ ಕಲಂ 201ರ…
-

KINGS Bazaar ಹೆಸರಿನಲ್ಲಿ ಅಕ್ರಮ ಹಣಪರಿಚಲನೆ ಯೋಜನೆ: 7 ಮಂದಿ ವಿರುದ್ಧ ಪ್ರಕರಣ
ಕಡಬ: ಶೀಘ್ರವಾಗಿ ಹಣ ಗಳಿಸುವ ಅವಕಾಶ ಹಾಗೂ ಕಡಿಮೆ ದರದಲ್ಲಿ ಹೆಚ್ಚಿನ ಬೆಲೆಯ ವಸ್ತುಗಳನ್ನು ನೀಡುವುದಾಗಿ ಆಮಿಷವೊಡ್ಡಿ, ಜನರನ್ನು ಯೋಜನೆಗೆ ಸೇರಿಸಿದರೆ ಕಮಿಷನ್ ನೀಡುವುದಾಗಿ ಭರವಸೆ ನೀಡಿ ಅಕ್ರಮವಾಗಿ ಹಣಪರಿಚಲನೆ ಯೋಜನೆ ನಡೆಸುತ್ತಿದ್ದ ಆರೋಪದ ಮೇಲೆ ಕಡಬ ಪೊಲೀಸರು ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಡಬ ಗ್ರಾಮದ ಅಂಬೇಡ್ಕರ್ ಭವನದಲ್ಲಿ ಹಾವೇರಿ ಮೂಲದ KINGS Bazaar ಸಂಸ್ಥೆಯ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ಸ್ವೀಕರಿಸಿ ನಿಷೇಧಿತ ಹಣಪರಿಚಲನೆ ಯೋಜನೆ ನಡೆಸುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.…
-

ಮಂಗಳೂರು: ತೊಕ್ಕೊಟ್ಟುನಲ್ಲಿರುವ ವೃಂದಾವನ್ ಹೋಟೆಲ್ ಮೇಲೆ ದಿಡೀರ್ ದಾಳಿ- ಸಾಂಬಾರ್ನಲ್ಲಿ ಜಿರಳೆ ಪತ್ತೆ
ಮಂಗಳೂರು: ಸಾಂಬಾರ್ನಲ್ಲಿ ಜಿರಳೆ ಪತ್ತೆಯಾಗಿದೆ ಎಂಬ ಗ್ರಾಹಕರ ದೂರಿನ ಮೇರೆಗೆ ಜಿಲ್ಲಾ ಆಹಾರ ಸುರಕ್ಷತಾ ನಿಯೋಜಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಅವರು ಉಳ್ಳಾಲದ ತೊಕ್ಕೊಟ್ಟುನಲ್ಲಿರುವ ವೃಂದಾವನ್ ಹೋಟೆಲ್ ಮೇಲೆ ದಿಡೀರ್ ದಾಳಿ ನಡೆಸಿದ್ದಾರೆ. ಅಧಿಕಾರಿಯು ತಮ್ಮ ಚಾಲಕನೊಂದಿಗೆ, ಮಧ್ಯಾಹ್ನ 1:30 ಕ್ಕೆ ಹೋಟೆಲ್ನ ಶೆಟರ್ಗಳನ್ನು ತೆಗೆದು ಅಡುಗೆಮನೆಯನ್ನು ಕೂಲಂಕಷವಾಗಿ ಪರಿಶೀಲಿಸಿದರು. ಗ್ರಾಹಕರ ದೂರಿನ ಮೇರೆಗೆ ದಾಳಿ ನಡೆಸಲಾಗಿದೆ ಎಂದು ಮಾಧ್ಯಮಗಳೊಂದಿಗೆ ಮಾತನಾಡಿದ ಡಾ. ಪ್ರವೀಣ್ ಕುಮಾರ್, ತಪಾಸಣೆಯ ಸಮಯದಲ್ಲಿ, ಹೋಟೆಲ್ನಲ್ಲಿ ಆಹಾರ ಪದಾರ್ಥಗಳಿಗಾಗಿ ಪ್ರತ್ಯೇಕ ಶೇಖರಣಾ ಕೊಠಡಿ…
-

ಬೀದಿಬದಿ ವ್ಯಾಪಾರಿಗಳ ಏಕಾಏಕಿ ತೆರವಿಗೆ ಸುಪ್ರೀಂ ಕೋರ್ಟ್ ಹೇಳಿಲ್ಲ: ಹೈಕೋರ್ಟ್ ಸ್ಪಷ್ಟನೆ
ಯಾವುದೇ ಬೀದಿಬದಿ ವ್ಯಾಪಾರಿಗಳನ್ನು ಕಾನೂನುಬಾಹಿರವಾಗಿ ಹಾಗೂ ಏಕಾಏಕಿ ತೆರವುಗೊಳಿಸುವಂತೆ ಸರ್ವೋಚ್ಚ ನ್ಯಾಯಾಲಯ ಆದೇಶಿಸಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಬೀದಿಬದಿ ವ್ಯಾಪಾರಿಗಳ ಹಿತರಕ್ಷಣಾ ಕಾಯ್ದೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ಪುನರ್ವಸತಿ ಕಲ್ಪಿಸದೆ ನಡೆಸುವ ತೆರವು ಕಾರ್ಯಾಚರಣೆ ಸರಿಯಲ್ಲ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ದಾಖಲಿಸಿದ್ದ ಪ್ರಕರಣವನ್ನು ಪ್ರಶ್ನಿಸಿ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ಕಾರ್ಯಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಪರವಾಗಿ ಹಿರಿಯ ವಕೀಲ ಎಸ್. ಬಾಲನ್ ಸಲ್ಲಿಸಿದ್ದ…
-

ಸಂಡೆ ಬಜಾರ್ ಹೋರಾಟ, ಹೋರಾಟಗಾರ ಬಿ.ಕೆ ಇಮ್ತಿಯಾಜ್ ವಿರುದ್ಧದ ಎಫ್ಐಆರ್ ಗೆ ಹೈ ಕೋರ್ಟ್ ತಡೆಯಾಜ್ಞೆ,- ಸುಪ್ರೀಂ ಕೋರ್ಟ್ ಆದೇಶದ ತಪ್ಪು ವ್ಯಾಖ್ಯಾನ ರಾಜ್ಯ ಸರಕಾರಕ್ಕೆ ಹೈ ಕೋರ್ಟ್ ತರಾಟೆ
ಮಂಗಳೂರು : ಸುಪ್ರಿಂ ಕೋರ್ಟ್ ಆದೇಶದ ಹೆಸರಿನಲ್ಲಿ ಬೀದಿ ಬದಿ ವ್ಯಾಪಾರಸ್ಥರನ್ನು ತೆರವು ಮಾಡುತ್ತಿದ್ದ ರಾಜ್ಯ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. “ಯಾವುದೇ ಬೀದಿ ಬದಿ ವ್ಯಾಪಾರಸ್ಥರನ್ನು ತೆರವುಗೊಳಿಸಲು ಸುಪ್ರಿಂ ಕೋರ್ಟ್ ನೇರವಾಗಿ ಆದೇಶಿಸಿಲ್ಲ. ಬೀದಿ ಬದಿ ವ್ಯಾಪಾರಸ್ಥರ ಬದುಕುವ ಹಕ್ಕು ಮತ್ತು ಹಿತರಕ್ಷಣಾ ಕಾಯ್ದೆಯನ್ನು ರಾಜ್ಯ ಸರ್ಕಾರ ಪಾಲಿಸಬೇಕು. ಈ ಕಾಯ್ದೆಯನ್ನು ಉಲ್ಲಂಘಿಸಿ ಯಾವುದೇ ವ್ಯಾಪಾರಿಯನ್ನು ತೆರವು ಮಾಡಬಾರದು. ಬೀದಿ ಬದಿ ವ್ಯಾಪಾರಸ್ಥರನ್ನು ತೆರವು ಮಾಡಿ ಎಂದು ಸುಪ್ರಿಂಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿಲ್ಲ” ಎಂದು ಹೈಕೋರ್ಟ್…
-

ವಿಟ್ಲ : ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು
ವಿಟ್ಲ: ಈಜಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವಿಟ್ಲದ ಕೋಟಿಕೆರೆ ಎಂಬಲ್ಲಿ ನಡೆದಿದೆ ಮೃತರನ್ನು ವಿಟ್ಲ ಕಸಬಾ ಗಾಳಿಹಿತ್ಲು ನಿವಾಸಿ ವೀರಪ್ಪ ಗೌಡ ಅವರ ಪುತ್ರ ಹಾಗೂ ಎಸ್ಸಿಡಿಸಿಸಿ ಬ್ಯಾಂಕ್ ಉದ್ಯೋಗಿ ಲಿತಿನ್ (32) ಎಂದು ಗುರುತಿಸಲಾಗಿದೆ. ಬೆಳಗಿನ ಜಾವ ಈ ಘಟನೆ ನಡೆದಿದ್ದು, ನೀರಿನಲ್ಲಿ ಮುಳುಗಿದ್ದ ಲಿತಿನ್ ಅವರನ್ನು ಸ್ಥಳೀಯರು ಕೂಡಲೇ ಮೇಲಕ್ಕೆತ್ತಿದ್ದಾರೆ. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಮಗುವನ್ನು ಅಗಲಿದ್ದಾರೆ.
-

ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಯುಪಿಸಿಎಲ್ ಗುತ್ತಿಗೆ ಕೈತಪ್ಪಿದಕ್ಕಾಗಿ ಕಿಶೋರ್ ಪೂಜಾರಿಯಿಂದ ಸುಪಾರಿ -ಎಸ್ಪಿ ಹರಿರಾಮ್
ಉಡುಪಿ : ಮುದರಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷ, ಉದ್ಯಮಿ, ಗುತ್ತಿಗೆದಾರ ಡೇವಿಡ್ ಡಿಸೋಜ ಶೂಟ್ಔಟ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಅದಾನಿ ಯುಪಿಸಿಎಲ್ನ ಗುತ್ತಿಗೆ ಕೈತಪ್ಪಿದ ಕಾರಣಕ್ಕಾಗಿ ಗುತ್ತಿಗೆದಾರ ಕಿಶೋರ್ ಪೂಜಾರಿ, ತನ್ನ ಸಹೋದರ ಭೂಗತ ಪಾತಕಿ ಹೇಮಂತ್ ಪೂಜಾರಿ ಮೂಲಕ ಈ ಕೃತ್ಯ ಎಸಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಶೂಟ್ಔಟ್ ಪ್ರಕರಣದ ಬೆಳವಣಿಗೆಯ ಮಾಹಿತಿಗಳನ್ನು ನೀಡಿದರು. ಉಚ್ಚಿಲ ನಿವಾಸಿ ಕಿಶೋರ್ ರಾಮ ಪೂಜಾರಿ ಈ…
-

ಮಲ್ಪೆ ಬಂದರಿನಲ್ಲಿ ಮೀನುಗಾರನ ಕೊಲೆ- ಆರೋಪಿ ಪೊಲೀಸ್ ವಶಕ್ಕೆ
ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ಪಡುಕೆರೆ ದಕ್ಕೆಯಲ್ಲಿ ಮೀನುಗಾರ ಕಾರ್ಮಿಕನನ್ನು ಕೊಲೆಗೈದ ಆರೋಪಿಯನ್ನು ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಆ.24ರಂದು ರಾತ್ರಿ ಬೋಟ್ನಲ್ಲಿ ಗೋವಿಂದ ಹಾಗೂ ಅಭಿಷೇಕ್ ನಡುವೆ ಗಲಾಟೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಆ.25ರಂದು ಬೆಳಗಿನ ಜಾವ ಗೋವಿಂದ, ಅಭಿಷೇಕ್ನನ್ನು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆಯ ಮಾಹಿತಿ ದೊರೆತ ತಕ್ಷಣ ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ (ಕಾ&ಸು) ಅನಿಲ್ ಕುಮಾರ್ ಡಿ. ಅವರು ಸಿಬ್ಬಂದಿಗಳಾದ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











