Category: ದೇಶ
-

ಬಂಗಾಳದಲ್ಲಿ ಮತ್ತೆ ರಕ್ತರಂಜಿತ ರಾಜಕೀಯ: ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಗುಂಡಿಕ್ಕಿ ಹತ್ಯೆ
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಜ್ಯದ ವಿವಿಧ ಭಾಗಗಳಲ್ಲಿ ರಾಜಕೀಯ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮದ ದೋಹಾರಿಯಾ ಪ್ರದೇಶದಲ್ಲಿ ಬಿಜೆಪಿ ನಾಯಕ, ಪಕ್ಷದ ಪ್ರಮುಖ ಮುಖಂಡ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಬುಧವಾರ ರಾತ್ರಿ ಸುಮಾರು 10.20ರ ವೇಳೆಗೆ ಚಂದ್ರನಾಥ್ ರಥ್…
-

ಸಾಮಾಜಿಕ ಜಾಲತಾಣ ಪರಿಚಯದಿಂದ ದುರಂತ ಅಂತ್ಯ: ಅತಿಥಿ ಉಪನ್ಯಾಸಕಿ ಕೊಲೆ ಕೇಸ್ಗೆ ರೋಚಕ ಟ್ವಿಸ್ಟ್
ದೊಡ್ಡಬಳ್ಳಾಪುರ : ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಕಾರಿನಲ್ಲೇ ಸುಟ್ಟು ಕೊಲೆ ಮಾಡಿದ ಆರೋಪಿ, ಬಳಿಕ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಜಿಂಕೆಬಚ್ಚಹಳ್ಳಿ ಬಳಿ ನಡೆದಿದೆ. ದೇವನಹಳ್ಳಿಯ ಖಾಸಗಿ ಕಾಲೇಜಿನ ಅತಿಥಿ ಉಪನ್ಯಾಸಕಿ ಸರೋಜಾ (40) ಕೊಲೆಯಾದವರು. ಇವರಿಗೆ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿದ್ದ ರಾಮಾಂಜಿ (45) ಎಂಬಾತ ಮದುವೆಯಾಗುವಂತೆ ಪೀಡಿಸುತ್ತಿದ್ದ. ವಿಚ್ಛೇದಿತೆಯಾಗಿದ್ದ ಸರೋಜಾ ಮದುವೆಗೆ ಒಪ್ಪದ ಕಾರಣ ಆಕ್ರೋಶಗೊಂಡ ರಾಮಾಂಜಿ, ಲಾಂಗ್ ಡ್ರೈವ್ ನೆಪದಲ್ಲಿ ಆಕೆಯನ್ನು ಜಿಂಕೆಬಚ್ಚಹಳ್ಳಿಯ ನಿರ್ಜನ ಪ್ರದೇಶಕ್ಕೆ ಕರೆತಂದು ಕೊಲೆ…
-

ತಲೆಗೆ ಮಚ್ಚು ಸಿಲುಕಿದ್ದರೂ ಏನು ಆಗಿಲ್ಲವೆಂಬಂತೆ ಮೊಬೈಲ್ ಹಿಡಿದು ಆಸ್ಪತ್ರೆಯಲ್ಲಿ ಓಡಾಡಿದ ಯುವಕ
ಮುಂಬೈ: ಸಿನೆಮಾ ದೃಶ್ಯವನ್ನೂ ಮೀರಿಸುವಂತಹ ಭೀಕರ ಹಾಗೂ ಅಚ್ಚರಿಯ ಘಟನೆಯೊಂದು ಮುಂಬೈನ ವಿಕ್ರೋಲಿ ಪ್ರದೇಶದಲ್ಲಿ ನಡೆದಿದೆ. ತಲೆಗೆ ಮಚ್ಚು ಚುಚ್ಚಿದ್ದರೂ ಯುವಕನೊಬ್ಬ ಆಸ್ಪತ್ರೆಯ ಆವರಣದಲ್ಲಿ ಮೊಬೈಲ್ ಹಿಡಿದು ಏನೂ ಆಗಿಲ್ಲವೆಂಬಂತೆ ಓಡಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಮುಂಬೈನ ವಿಕ್ರೋಲಿ ಪ್ರದೇಶದಲ್ಲಿ ನಡೆದಿದೆ. ಆ ಆಯುಧವು ಆತನ ತಲೆಯಲ್ಲೇ ಸಿಲುಕಿಕೊಂಡಿತ್ತು. ಆದರೆ, ಇಂತಹ ಗಂಭೀರ ಸ್ಥಿತಿಯಲ್ಲೂ ಆತ ಮೊಬೈಲ್ ಬಳಸುತ್ತಾ ಆಸ್ಪತ್ರೆಗೆ ನಡೆದು ಬಂದಿರುವ ದೃಶ್ಯವು ನೋಡುಗರನ್ನು ಬೆಚ್ಚಿಬೀಳಿಸಿದೆ ಮೇ 4, 2026 ರಂದು ಮುಂಜಾನೆ ವಿಕ್ರೋಲಿಯ…
-

ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲೇ ಅಪಾರ ಪ್ರಮಾಣದ ಚಿನ್ನ, ಹಣ ಪತ್ತೆ!
ಪಶ್ಚಿಮ ಬಂಗಾಳದ ಸರ್ಕಾರಿ ಆಸ್ಪತ್ರೆಯೊಂದು ಈಗ ಭ್ರಷ್ಟಾಚಾರದ ಕೇಂದ್ರವಾಗಿ ಸುದ್ದಿಯಲ್ಲಿದೆ. ರೋಗಿಗಳಿಗೆ ಜೀವದಾನ ಮಾಡಬೇಕಾದ ಆಸ್ಪತ್ರೆಯ ಆಪರೇಷನ್ ಥಿಯೇಟರ್ (OT) ನಲ್ಲಿ ಭಾರಿ ಪ್ರಮಾಣದ ನಗದು ಮತ್ತು ಚಿನ್ನಾಭರಣ ಪತ್ತೆಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಆಪರೇಷನ್ ಥಿಯೇಟರ್‌ನಲ್ಲಿ ಅಕ್ರಮ ದಾಸ್ತಾನು! ಸರ್ಕಾರಿ ಆಸ್ಪತ್ರೆಯ ಒಳಭಾಗದಲ್ಲಿರುವ ಆಪರೇಷನ್ ಥಿಯೇಟರ್‌ನಲ್ಲಿ ಅಕ್ರಮವಾಗಿ ಹಣ ಮತ್ತು ಚಿನ್ನವನ್ನು ಬಚ್ಚಿಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಯಾರಿಗೂ ಅನುಮಾನ ಬಾರದಂತೆ ಪೆಟ್ಟಿಗೆಗಳಲ್ಲಿ ಪ್ಯಾಕ್ ಮಾಡಿ…
-

ಚೆನ್ನೈ ವಿಮಾನ ನಿಲ್ದಾಣದಲ್ಲಿ ಶಾಕ್: ಚಲಿಸುತ್ತಿದ್ದ ವಿಮಾನದಿಂದ ಪ್ರಯಾಣಿಕ ಜಿಗಿತ
ಚೆನ್ನೈ: ಫ್ಲೈಟ್‌ನಲ್ಲಿ 2 ಬಾರಿ ವಾಂತಿ ಮಾಡಿಕೊಂಡ ಪ್ರಯಾಣಿಕನೋರ್ವ ಚೆನ್ನೈ ವಿಮಾನ ನಿಲ್ದಾಣದಲ್ಲಿ ಚಲಿಸುತ್ತಿದ್ದ ವಿಮಾನದ ತುರ್ತು ನಿರ್ಗಮನ ದ್ವಾರದಿಂದ ಹೊರಗೆ ಹಾರಿರುವ ಘಟನೆ ನಡೆದಿದೆ. ಇಂದು ಮುಂಜಾನೆ ಶಾರ್ಜಾ-ಚೆನ್ನೈ ಏರ್ ಅರೇಬಿಯಾ ವಿಮಾನವು ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದು ಮುಂದೆ ಚಲಿಸುತ್ತಿತ್ತು. ಈ ವೇಳೆ ವಿಮಾನದಲ್ಲಿದ್ದ ಪುರುಷ ಪ್ರಯಾಣಿಕನೊಬ್ಬ ತುರ್ತು ನಿರ್ಗಮನ ಬಾಗಿಲು ತೆರೆದು ಹೊರಗೆ ಹಾರಿದ್ದಾನೆ.ವಿಮಾನವು ಮುಖ್ಯ ರನ್‌ವೇಯಿಂದ ಹೊರಬಂದು ಟ್ಯಾಕ್ಸಿವೇಯಲ್ಲಿ ನಿಧಾನವಾಗಿ ಚಲಿಸುತ್ತಿದ್ದಾಗ ಈ ಘಟನೆ ನಡೆದಿದೆ. ಪೈಲಟ್ ತಕ್ಷಣವೇ ಭದ್ರತಾ ಸಿಬ್ಬಂದಿಗೆ…
-

ಗ್ರೀನ್ ಪಾರ್ಕ್ ನಿವಾಸದಲ್ಲಿ ನ್ಯಾಯಾಧೀಶರ ಸಾವು: ಕಿರುಕುಳ ಆರೋಪ, ತನಿಖೆ ಆರಂಭ
ನವದೆಹಲಿ: ದೆಹಲಿಯ ಸಫ್ದರ್ಜಂಗ್ ಪ್ರದೇಶದ ಗ್ರೀನ್ ಪಾರ್ಕ್‌ನಲ್ಲಿರುವ ತಮ್ಮ ನಿವಾಸದಲ್ಲಿ ನ್ಯಾಯಾಧೀಶರೊಬ್ಬರು ಶನಿವಾರ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಮೃತರನ್ನು ಕಾರ್ಕಾರ್ಡೂಮಾ ನ್ಯಾಯಾಲಯಗಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ (DLSA) ಪೂರ್ಣ ಸಮಯದ ಕಾರ್ಯದರ್ಶಿಯಾಗಿದ್ದ ಅಮನ್ ಕುಮಾರ್ ಶರ್ಮಾ (30) ಎಂದು ಗುರುತಿಸಲಾಗಿದೆ. ಅಮನ್ ಅವರು ಸ್ನಾನಗೃಹದಲ್ಲಿ ದುಪಟ್ಟಾದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇವರು ನ್ಯಾಯಾಧೀಶೆಯಾಗಿರುವ ಪತ್ನಿಯೊಂದಿಗೆ ಜಗಳವಾಡುತ್ತಿದ್ದರು ಮತ್ತು ಘಟನೆಗೆ ಮುನ್ನ ತಂದೆಗೆ ಕರೆ ಮಾಡಿ ತಮಗೆ ಕಳೆದ ಎರಡು ತಿಂಗಳಿನಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಅಳುತ್ತಾ…
-

ಹೈದರಾಬಾದ್‌ನಲ್ಲಿ ದುರಂತ ಅಂತ್ಯ: ಪತ್ನಿಯ ಸಂಬಂಧ ಆರೋಪದ ನಡುವೆ ಎಂಜಿನಿಯರ್ ಆತ್ಮಹತ್ಯೆ
ಹೈದರಾಬಾದ್: ಪತ್ನಿಯು ಮೂವರು ಪುರುಷರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ಸಾಫ್ಟ್‌ವೇರ್ ಎಂಜಿನಿಯರ್ ಸೀತಾರಾಮ್ (36) ಎಂಬವರು ಹುಸೇನ್ ಸಾಗರ್ ಸರೋವರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಅವರು ಬರೆದಿಟ್ಟಿರುವ 19 ಪುಟಗಳ ಡೆತ್‌ನೋಟ್‌ನಲ್ಲಿ ಪತ್ನಿಯ ವರ್ತನೆಯ ಬಗ್ಗೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸೀತಾರಾಮ್ ಅವರ ಪತ್ನಿ ರೇಣುಕಾ (30) ಕಳೆದ ಒಂದೂವರೆ ವರ್ಷಗಳಿಂದ ಮೂವರು ಪುರುಷರೊಂದಿಗೆ ಸಂಬಂಧ ಹೊಂದಿದ್ದರು ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ಈ ಪೈಕಿ ರಮಣ ಎಂಬಾತ ರೇಣುಕಾ ಜೊತೆಗಿದ್ದ ಖಾಸಗಿ…
-

ಬಿರುಗಾಳಿಗೆ ಸಿಲುಕಿದ ಬೋಟ್ ದುರಂತ: 9 ಮಂದಿ ಮೃತ್ಯು, ರಕ್ಷಣಾ ಕಾರ್ಯ ಮುಂದುವರಿಕೆ
ಜಬಲ್ಪುರ: ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ ಪ್ರವಾಸಿ ಬೋಟ್‌ನಲ್ಲಿದ್ದ ಉಳಿದ ಐವರ ಮೃತದೇಹಗಳನ್ನು ಶುಕ್ರವಾರ ರಕ್ಷಣಾ ಸಿಬ್ಬಂದಿ ಪತ್ತೆಹಚ್ಚಿದ್ದು, ಈ ಮೂಲಕ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಏ.30ರ ಸಂಜೆ ಬೋಟ್‌ನಲ್ಲಿ ಪ್ರವಾಸಿಗರನ್ನು ಕರೆದುಕೊಂಡು ಹೋಗುವ ವೇಳೆ ಅದು ಹಠಾತ್ ಬಿರುಗಾಳಿಗೆ ಸಿಲುಕಿ, ದುರಂತ ಸಂಭವಿಸಿದೆ. ದುರಂತವಾದ ತಕ್ಷಣವೇ ನಾಲ್ಕು ಜನರ ಮೃತದೇಹ ಸಿಕ್ಕಿತ್ತು, ಇದೀಗ ಐದು ಮಂದಿಯ ಮೃತದೇಹವನ್ನು ಹೊರತೆಗೆಯಲಾಗಿದೆ. ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಒಂಬತ್ತಕ್ಕೆ ಏರಿದೆ. ಇದುವರೆಗೆ 28 ಜನರನ್ನು ರಕ್ಷಿಸಲಾಗಿದೆ ಎಂದು…
-

ಸಹೋದರಿ ಮೃತಪಟ್ಟಿರುವುದನ್ನು ಸಾಬೀತುಪಡಿಸಲು ಅಸ್ಥಿಪಂಜರವನ್ನೇ ಬ್ಯಾಂಕಿಗೆ ತಂದ ವ್ಯಕ್ತಿ!
ಸಹೋದರಿ ಮೃತಪಟ್ಟಿರುವುದನ್ನು ಸಾಬೀತುಪಡಿಸಲು ಆಕೆಯ ಅಸ್ಥಿಪಂಜರವನ್ನೇ ವ್ಯಕ್ತಿಯೊಬ್ಬರು ಉರಿ ಬಿಸಿಲಿನಲ್ಲಿ 3 ಕಿಲೋಮೀಟರ್ ದೂರ ಹೊತ್ತುಕೊಂಡು ಬ್ಯಾಂಕಿಗೆ ತಂದ ವಿಲಕ್ಷಣ ಘಟನೆಯೊಂದು ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಸಂಭವಿಸಿದೆ. ಕಿಯೋಂಜಾರ್ ಜಿಲ್ಲೆಯ ಡಯಾನಾಲಿ ಗ್ರಾಮದ ಜಿತು ಮುಂಡಾ ಎಂಬವರ ಸಹೋದರಿ ಕಾಕ್ರಾ ಮುಂಡಾ ಎರಡು ತಿಂಗಳ ಹಿಂದೆ ನಿಧನರಾಗಿದ್ದರು. ಕಾಕ್ರಾ ಅವರ ಪತಿ ಮತ್ತು ಮಗು ಮೊದಲೇ ಮೃತಪಟ್ಟಿದ್ದರಿಂದ ಜಿತು ಅವರೇ ಬದುಕುಳಿದರುವ ಏಕೈಕ ಸಂಬಂಧಿಯಾಗಿದ್ದರು. ಸಹೋದರಿಯ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ಪಡೆಯಲು ಜಿತು ಬ್ಯಾಂಕ್ ಮ್ಯಾನೇಜರ್ ಅವರನ್ನು…
-

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪರ್ಸ್ ಕಳವು: ಲಕ್ಷಾಂತರ ಮೌಲ್ಯದ ಚಿನ್ನಾಭರಣ ನಷ್ಟ
ಬಂಟ್ವಾಳ: ಕೆ.ಎಸ್ .ಆರ್.ಟಿ.ಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯೋರ್ವರ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದು ಇರಿಸಿದ್ದ ಪರ್ಸ್ ಕಳವಾಗಿದ ಘಟನೆ ನಡೆದಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಾಗೆಕಾನ ಬಲ್ಯ ನಿವಾಸಿ ಕ್ರಿಸ್ತಿನ್ ವೇಗಸ್ ಅವರ ಪರ್ಸ್ ಕಳವಾಗಿದೆ. ಪರ್ಸ್ ನಲ್ಲಿ ಐದೂವರೆ ಪವನ್ ತೂಕದ ಚಿನ್ನದ ಕರಿಮಣಿ ಸರ ಮತ್ತು ನಾಲ್ಕು ಗ್ರಾಂ ತೂಕದ ಚಿನ್ನದ ಉಂಗುರ ಒಟ್ಟು 48 ಗ್ರಾಂ ತೂಕದ ಚಿನ್ನಾಭರಣದ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











