Category: ರಾಜ್ಯ
-

ಅಪಘಾತದಲ್ಲಿ ಗಾಯಗೊಂಡು 6 ತಿಂಗಳು ಕೋಮಾದಲ್ಲಿದ್ದ ಯುವಕ ವಿಧಿವಶ
ಪುತ್ತೂರು: ಕಳೆದ ಕೆಲವು ತಿಂಗಳುಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕೋಮಾದಲ್ಲಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ನೆಕ್ಕಿಲಾಡಿಯ ಬಾಡಿಗೆ ಮನೆಯಲ್ಲಿ ಜೂನ್ 14ರಂದು ನಿಧನರಾಗಿದ್ದಾರೆ.ಮೃತರು ಮೂಲತಃ ಮಠ ಗ್ರಾಮದ ನಿವಾಸಿಯಾಗಿದ್ದು, ಸದ್ಯ ನೆಕ್ಕಿಲಾಡಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಬದ್ರುದ್ದೀನ್ ಮಠ ಎಂದು ಗುರುತಿಸಲಾಗಿದೆ. ಇವರು ಕೂಟೇಲ್‌ನ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು.ಘಟನೆಯ ಹಿನ್ನೆಲೆ:2025ರ ಡಿಸೆಂಬರ್ 11ರ ರಾತ್ರಿ ಬದ್ರುದ್ದೀನ್ ಅವರು ಉಪ್ಪಿನಂಗಡಿಯಿಂದ ನೆಕ್ಕಿಲಾಡಿಗೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ, ಎದುರಿನಿಂದ ಬಂದ ಕಾರು ಅವರ…
-

ಮೆಸೇಜ್ ಕಳುಹಿಸಿದ ಬಳಿಕ ನಾಪತ್ತೆಯಾದ ಉದ್ಯಮಿ; ಪ್ರಕರಣ ದಾಖಲು
ಮಂಗಳೂರು: ಕೊಟ್ಟಾರ ಚೌಕಿಯಲ್ಲಿ ಔಷಧಕ್ಕೆ ಸಂಬಂಧಿತ ಕಚೇರಿಯನ್ನುನಡೆಸುತ್ತಿದ್ದ ಉದ್ಯಮಿಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಾಪತ್ತೆಯಾದ ವ್ಯಕ್ತಿಯನ್ನು ಸುನೀಲ್ ಬಿ. ಎಸ್. (36) ಎಂದು ಗುರುತಿಸಲಾಗಿದೆ. ಅವರು ಬಿಜೈನಲ್ಲಿರುವ ಪಿಜಿ ಯೊಂದರಲ್ಲಿ ವಾಸಿಸುತ್ತಿದ್ದರು.ಕುಟುಂಬದವರು ನೀಡಿರುವ ದೂರಿನ ಪ್ರಕಾರ, ಸುನೀಲ್ ಜೂನ್ 12 ರ ಸಂಜೆ ತಮ್ಮ ಕಚೇರಿಯ ಕೆಲಸವನ್ನು ಮುಗಿಸಿ, ರಾತ್ರಿ ಸುಮಾರು 9 ಗಂಟೆಗೆ ತಮ್ಮ ಸಹೋದರಿಯ ಮೊಬೈಲ್‌ಗೆ ಸಂದೇಶ ಕಳುಹಿಸಿದ್ದರು.ಆ ಸಂದೇಶ ಕಳುಹಿಸಿದ ತಕ್ಷಣವೇ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ.…
-

ಮುಂಗಾರು ಎಫೆಕ್ಟ್: ಗಡಾಯಿಕಲ್ಲು ಚಾರಣಕ್ಕೆ ಮತ್ತೆ ಬ್ರೇಕ್, ಪ್ರವಾಸಿಗರಿಗೆ ನಿರ್ಬಂಧ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಐತಿಹಾಸಿಕ ಜಮಲಾಬಾದ್ ಕೋಟೆ ಗಡಾಯಿಕಲ್ಲು ಚಾರಣಕ್ಕೆ ಅರಣ್ಯ ಇಲಾಖೆ ಮತ್ತೆ ನಿರ್ಬಂಧ ಹೇರಿದೆ. ಮಳೆಯ ಕಾರಣ ಕಲ್ಲುಗಳು ಜಾರುವ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಜೂನ್ 14ರಿಂದ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಈ ಕುರಿತು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗ ಪ್ರಕಟಣೆ ಹೊರಡಿಸಿದ್ದು, ಸುರಕ್ಷತಾ ದೃಷ್ಟಿಯಿಂದ ಮುಂದಿನ ಆದೇಶದವರೆಗೆ ಗಡಾಯಿಕಲ್ಲು ಚಾರಣಕ್ಕೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದೆ.ಈ ಹಿಂದೆ ಬೇಸಿಗೆ ಅವಧಿಯಲ್ಲಿ ಕಾಡ್ಗಿಚ್ಚು ಹಾಗೂ ಇತರ ಅನಾಹುತಗಳನ್ನು ತಡೆಗಟ್ಟುವ…
-

99 ವರ್ಷದ ವೃದ್ಧೆ ಬಾವಿಗೆ ಬಿದ್ದು ಸಾವು; ಇಣುಕಿ ನೋಡುತ್ತಿದ್ದಾಗ ಜಾರಿ ಬಿದ್ದ ದುರಂತ
ಮೂಡುಬಿದಿರೆ: ವೃದ್ಧೆಯೋವ೯ರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಮೂಡುಬಿದಿರೆ ತಾಲೂಕಿನ ಒಂಟಿಕಟ್ಟೆಯಲ್ಲಿ ಶನಿವಾರ ನಡೆದಿದೆ.ಮೂಡಬಿದ್ರೆ ಮಾರ್ಪಾಡಿ ಗ್ರಾಮದ ಒಂಟಿಕಟ್ಟೆಯ ಕಮಲ (99) ಮೃತಪಟ್ಟವರು. ಶನಿವಾರ ಬಾವಿಗೆ ಇಣುಕಿ ನೋಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಗಂಭೀರ ಗಾಯಗೊಂಡು ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಮೂಡಬಿದ್ರೆಯ ಅಗ್ನಿಶಾಮಕ ದಳದ ಸಿಬಂದಿ ಮೃತ ದೇಹವನ್ನು ಮೇಲಕ್ಕೆತ್ತಿದ್ದಾರೆ. ಮೂಡಬಿದ್ರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
-

ಜಮೀನು ಖಾತೆ ಮಾಡಿಕೊಡಲು 10 ಸಾವಿರ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ರೆವಿನ್ಯೂ ಇನ್ಸ್‌ಪೆಕ್ಟರ್!
ಜಮೀನಿನ ಪೋಡಿ ಹಾಗೂ ಖಾತೆ ಮಾಡಿಕೊಡಲು ಸಾರ್ವಜನಿಕರಿಂದ ಲಂಚ ಪಡೆಯುತ್ತಿದ್ದ ಕಂದಾಯ ಇಲಾಖೆಯ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ತಾಲೂಕು ಕಚೇರಿಯಲ್ಲಿ ಇಂದು ನಡೆದಿದೆ. ಲಂಚದ ಹಣದೊಂದಿಗೆ ಸಿಕ್ಕಿಬಿದ್ದ ಅಧಿಕಾರಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಮಳವಳ್ಳಿ ತಾಲೂಕಿನ ಹಲಗೂರು ಹೋಬಳಿಯ ರೆವಿನ್ಯೂ ಇನ್ಸ್‌ಪೆಕ್ಟರ್ (ಕಂದಾಯ ನಿರೀಕ್ಷಕ) ಮಧುಸೂದನ್ ಲೋಕಾಯುಕ್ತ ದಾಳಿಗೆ ಸಿಲುಕಿದ ಅಧಿಕಾರಿಯಾಗಿದ್ದಾರೆ. ಜಮೀನು ಕೆಲಸಕ್ಕಾಗಿ ಸಾರ್ವಜನಿಕರನ್ನು ಅಲೆದಾಡಿಸಿ, ಹಣಕ್ಕಾಗಿ ಪೀಡಿಸುತ್ತಿದ್ದ ಇವರು, ಇಂದು ಮುಂಗಡ ಹಣ ಪಡೆಯುವಾಗ…
-

27 ಸರ್ಕಾರಿ ಗೋದಾಮುಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ : ಅಧಿಕಾರಿಗಳು ಕಕ್ಕಾಬಿಕ್ಕಿ
ಸರ್ಕಾರಿ ಒಡೆತನದ ಆಹಾರ ಗೋದಾಮುಗಳ ಮೇಲೆ ಇಂದು ಏಕಾಯಕಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಬೆಂಗಳೂರಿನ ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಲೋಕಾಯುಕ್ತ ಪೊಲೀಸರಿಂದ ಏಕಕಾಲಕ್ಕೆ 27 ಕಡೆ ದಾಳಿ ನಡೆದಿದೆ. ಲೋಕಾಯುಕ್ತ ಅಧಿಕಾರಿಗಳ ಕಳ್ಳಾಟ ಬಯಲಾಗಿದೆ. ಸರಿಯಾದ ಲೆಕ್ಕ ನೀಡದೆ ಅಧಿಕಾರಿಗಳು ಕಳ್ಳಾಟ ನಡೆಸಿದ್ದಾರೆ. ಕೆಲವು ಕಡೆ ಸಂಬಂಧ ಪಟ್ಟವರಿಗೆ ಮಾಹಿತಿ ನೀಡದೆ ಅಧಿಕಾರಿಗಳು ಗೈರು ಆಗಿದ್ದಾರೆ. ಇದು ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಅಧಿಕಾರಿಗಳು ಕಕ್ಕಾಬಿಕ್ಕಿಯಾಗಿದ್ದಾರೆ
-

ನಾಪತ್ತೆಯಾಗಿದ್ದ ಬಿಸಿಎ ವಿದ್ಯಾರ್ಥಿನಿ ಬಾವಿಯಲ್ಲಿ ಶವವಾಗಿ ಪತ್ತೆ..!! ಸಾವಿನ ಸುತ್ತ ಅನುಮಾನದ ಹುತ್ತ
ಭಟ್ಕಳ: ತಾಲೂಕಿನ ಬೆಲ್ಕೆ ಪ್ರದೇಶದಲ್ಲಿ ನಾಪತ್ತೆಯಾಗಿದ್ದ 19 ವರ್ಷದ ಬಿಸಿಎ ವಿದ್ಯಾರ್ಥಿನಿಯ ಮೃತದೇಹ ಮನೆಯ ಸಮೀಪದ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ. ಘಟನೆಗೆ ಸಂಬಂಧಿಸಿದಂತೆ ಭಟ್ಕಳ ಉಪನಗರ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಬೆಲ್ಕೆಯ ಕಾಂಚಿಕೇರಿ ನಿವಾಸಿ ಗಾಯತ್ರಿ ನಾಗರಾಜ್ ನಾಯಕ್ ಎಂಬ ವಿದ್ಯಾರ್ಥಿನಿ ಗುರುವಾರ ನಿಗೂಢವಾಗಿ ನಾಪತ್ತೆಯಾಗಿದ್ದರು. ಕುಟುಂಬಸ್ಥರು ಹಾಗೂ ಸ್ಥಳೀಯರು ಸಾಕಷ್ಟು ಹುಡುಕಾಟ ನಡೆಸಿದರೂ ಸುಳಿವು ಸಿಗದ ಹಿನ್ನೆಲೆಯಲ್ಲಿ ಭಟ್ಕಳ ಉಪನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ವಿದ್ಯಾರ್ಥಿನಿಗಾಗಿ…
-

ರೌಡಿಶೀಟರ್ 2 ಕೈಗಳನ್ನು ಕತ್ತರಿಸಿ ಬರ್ಬರ ಕೊಲೆ!!
ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ನಗರದಲ್ಲಿ ಮತ್ತೆ ರಕ್ತದ ಓಕುಳಿಯ ಹರಿದಿದ್ದು, ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ನಗರದ ಹೃದಯಭಾಗವಾದ ಗಾಂಧಿ ಬಜಾರ್ ಬಳಿ ಈ ಘಟನೆ ನಡೆದಿದ್ದು, ಗೋವಿಂದಪುರ ನಿವಾಸಿ, ರೌಡಿಶೀಟರ್ ನರಸಿಂಹ ಕೊಲೆಯಾದ ದುರ್ದೈವಿ. ನರಸಿಂಹ ಒಂಟಿಯಾಗಿ ಸಿಕ್ಕಾಗ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ. ತೀವ್ರ ಕ್ರೌರ್ಯ ಮೆರೆದಿರುವ ಹಂತಕರು, ನರಸಿಂಹನ ಎರಡು ಕೈಗಳನ್ನು ಕತ್ತರಿಸಿ, ರಸ್ತೆಯಲ್ಲೇ ಬರ್ಬರವಾಗಿ ಕೊಚ್ಚಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಪ್ರಾಥಮಿಕ ಮಾಹಿತಿ…
-

ವಿದ್ಯುತ್ ಕಂಬ ದುರಸ್ತಿ ಕಾರ್ಯ ಮುಗಿಸಿ ತೆರಳುತ್ತಿದ್ದ ಮೆಸ್ಕಾಂ ಸಿಬ್ಬಂದಿ ಹೃದಯಾಘಾತಕ್ಕೆ ಬಲಿ
ಬಂಟ್ವಾಳ: ಕರ್ತವ್ಯದಲ್ಲಿದ್ದಾಗಲೇ ಮೆಸ್ಕಾಂ ಉದ್ಯೋಗಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ಶಂಭೂರು ಎಂಬಲ್ಲಿ ನಡೆದಿದೆ. ಮೂಲತಃ ಮಿತ್ತೂರು ನಿವಾಸಿ ಚಂದ್ರಶೇಖರ ನಾಯ್ಕ ( 55) ಮೃತಪಟ್ಟ ವ್ಯಕ್ತಿ.ಅವರು ಮೆಸ್ಕಾಂ ಪಾಣೆಮಂಗಳೂರು ಶಾಖೆಯಲ್ಲಿ ಸಹಾಯಕ ಮೆಕಾನಿಕ್ ಹುದ್ದೆಯನ್ನು ನಿರ್ವಹಿಸುತ್ತಿದ್ದರು. ಬುಧವಾರ ಮಧ್ಯಾಹ್ನ ವೇಳೆ ಶಂಭೂರು ಸಮೀಪದ ಕುಂದಾಯಗೋಳಿ ಎಂಬಲ್ಲಿ ವಿದ್ಯುತ್ ಕಂಬವೊಂದು ತುಂಡಾಗಿ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿರುವ ಹಿನ್ನೆಲೆಯಲ್ಲಿ ಕಂಬವನ್ನು ಅಳವಡಿಸಿ ವಿದ್ಯುತ್ ತಂತಿಗಳನ್ನು ಎಳೆದು ಸಂಪರ್ಕ ನೀಡಿದ್ದರು.ಅ ಬಳಿಕ ಅಲ್ಲಿಂದ ಇನ್ನೊಂದು…
-

ಜಮೀರ್ ಅಹ್ಮದ್ ಖಾನ್ ಕಡೆಗಣನೆ ಕಾಂಗ್ರೆಸ್‌ಗೆ ಮುಳುವಾಗಲಿದೆಯೇ?
ಬೆಂಗಳೂರು: ಸಚಿವ ಸಂಪುಟದಲ್ಲಿ ಜಮೀರ್ ಅಹ್ಮದ್ ಖಾನ್ ಅವರಿಗೆ ಸ್ಥಾನ ನೀಡದಿರುವುದು ಕಾಂಗ್ರೆಸ್ ಪಕ್ಷದ ಅತಿದೊಡ್ಡ ತಪ್ಪು, ಜಮೀರ್ ಅಹ್ಮದ್ ಖಾನ್ ಅವರಿಗೆ ಕೇವಲ ಮುಸ್ಲಿಂ ಸಮುದಾಯದವರಷ್ಟೇ ಅಲ್ಲದೆ, ಸರ್ವಧರ್ಮದ ಜನರ ಬೆಂಬಲವೂ ಇದೆ.ಜಮೀರ್ ಅಹ್ಮದ್ ಖಾನ್ ಅವರು ಕಾಂಗ್ರೆಸ್‌ನಿಂದ ದೂರವಾದರೆ, ಪಕ್ಷವು ಬಹುಮತಗಳನ್ನೂ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ. ಇದು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗುವ ಸಾಧ್ಯತೆಯಿದೆ.ಜಮೀರ್ ಅಹ್ಮದ್ ಖಾನ್ ಅವರು ಮುಸ್ಲಿಂ ಸಮುದಾಯದವರಿಗಷ್ಟೇ ಅಲ್ಲದೆ, ವಿವಿಧ ಧರ್ಮಗಳ ಜನರಲ್ಲಿಯೂ ಜನಪ್ರಿಯ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











