Category: ರಾಜ್ಯ
-

ಅಝಾನ್ ಹೇಳುತ್ತಿದ್ದಾಗಲೇ ಕುಸಿದು ಬಿದ್ದ ಮೌಲ್ವಿ; ಮಸೀದಿಯಲ್ಲೇ ಹೃದಯಾಘಾತಕ್ಕೆ ಬಲಿ
ಹೊನ್ನಾವರ: ಮಸೀದಿಯಲ್ಲಿ ಅಸರ್ ನಮಾಜ್ಗಾಗಿ ಅಝಾನ್ ಮೊಳಗಿಸುತ್ತಿದ್ದ ವೇಳೆ ಮೌಲ್ವಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕಾದ ಎಂ.ಜೆ.ಎಂ ಮಸೀದಿಯಲ್ಲಿ ಮಂಗಳವಾರ ಸಂಜೆ ನಡೆದಿದೆ.ಮೃತರನ್ನು ಮಂಗಳೂರು ಮೂಲದ ಕುಕ್ಕಾಜೆಯ ಅಬ್ದುಲ್ ಲತೀಫ್ ಮದನಿ ಎಂದು ಗುರುತಿಸಲಾಗಿದೆ. ಮಕ್ಕಳಿಗೆ ಇಸ್ಲಾಮಿಕ್ ಧಾರ್ಮಿಕ ಹಾಗೂ ಮದರಸಾ ಶಿಕ್ಷಣ ನೀಡುವ ಉದ್ದೇಶದಿಂದ ಅವರು ಸುಮಾರು ಆರು ತಿಂಗಳ ಹಿಂದೆ ಹೊನ್ನಾವರಕ್ಕೆ ಆಗಮಿಸಿ ಮಸೀದಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು.ಮಂಗಳವಾರ ಸಂಜೆ ವಾಡಿಕೆಯಂತೆ ಅಸರ್ ನಮಾಜ್ಗೆ…
-

ರಾಜ್ಯದಲ್ಲಿ `ರೌಡಿಸಂ’ಗೆ ಬ್ರೇಕ್ ಹಾಕಲು ಮಹತ್ವದ ಕ್ರಮ: ‘ರೌಡಿ ಸ್ಕ್ವಾಡ್’ ರಚನೆಗೆ ಸರ್ಕಾರ ಮಹತ್ವದ ಆದೇಶ
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ರೌಡಿಸಂ ಹಾಗೂ ಸಮಾಜವಿರೋಧಿ ಚಟುವಟಿಕೆಗಳನ್ನು ಸಂಪೂರ್ಣವಾಗಿ ಮಟ್ಟಹಾಕಲು ಕರ್ನಾಟಕ ಪೊಲೀಸ್ ಇಲಾಖೆ ಅತ್ಯಂತ ಕಠಿಣ ಕ್ರಮಕ್ಕೆ ಮುಂದಾಗಿದೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯ ತೀರ್ಮಾನದ ಬೆನ್ನಲ್ಲೇ, ರಾಜ್ಯದಾದ್ಯಂತ ವೃತ್ತ (ಸರ್ಕಲ್) ಹಾಗೂ ಪೊಲೀಸ್ ಠಾಣಾ ಮಟ್ಟದಲ್ಲಿ ವಿಶೇಷ “ಆಂಟಿ ರೌಡಿ ಸ್ಕ್ವಾಡ್” (ರೌಡಿ ನಿಗ್ರಹ ದಳ)ಗಳನ್ನು ರಚಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿ ಮತ್ತು ಐಜಿಪಿ) ಅಧಿಕೃತ ಸುತ್ತೋಲೆ ಹೊರಡಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು…
-

ಬಾರ್, ಕ್ಲಬ್ಗಳಲ್ಲಿ ಅಪ್ರಾಪ್ತರಿಗೆ ವಯಸ್ಸಿನ ಐಡಿ ಕಡ್ಡಾಯ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ
ಬೆಂಗಳೂರು: ಅಪ್ರಾಪ್ತ ವಯಸ್ಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ತಡೆಯಲು ಮತ್ತು ಮದ್ಯ ಸರಬರಾಜು ಮಾಡುವುದನ್ನು ನಿಷೇಧಿಸಲು ಬೆಂಗಳೂರಿನ ಎಲ್ಲಾ ಪಬ್ಗಳು, ಬ್ರೂವರೀಸ್, ಬಾರ್ಗಳು, ಕ್ಲಬ್ಗಳು, ಲಾಂಜ್ಗಳು ಹಾಗೂ ರೆಸ್ಟೋರೆಂಟ್ಗಳಿಗೆ ನೋಟಿಸ್ ಜಾರಿ ಮಾಡುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಬೆಂಗಳೂರಿನಲ್ಲಿ ಹದಿಹರೆಯದವರು ಮತ್ತು ಯುವಜನರಲ್ಲಿ ಹೆಚ್ಚುತ್ತಿರುವ ಮದ್ಯಪಾನ ಹಾಗೂ ಮಾದಕ ದ್ರವ್ಯಗಳ ಬಳಕೆಯ ಆತಂಕದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರಿನ ಪ್ರಮುಖ ನಾಲ್ಕು ಶಿಕ್ಷಣ ಸಂಸ್ಥೆಗಳ ಪದವಿಪೂರ್ವ…
-

ಬೆಳ್ತಂಗಡಿಯಲ್ಲಿ ಭೀಕರ ರಸ್ತೆ ದುರಂತ; ಸ್ಕೂಟರ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಬಲಿ
ಬೆಳ್ತಂಗಡಿ: ಬಳ್ಳಮಂಜ–ಪಣಕಜೆ ರಸ್ತೆಯ ಪಾಲ್ಯರ ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಕ್ಟಿವಾ ಸ್ಕೂಟರ್ನಲ್ಲಿದ್ದ ಇಬ್ಬರು ಪ್ರಯಾಣಿಕರು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.ಮೃತರನ್ನು ಆಕ್ಟಿವಾ ಸವಾರ ಡಾಕಯ್ಯ ಗೌಡ ಹಾಗೂ ಹಿಂಬದಿ ಸವಾರ ಚಂದಪ್ಪ ಮೂಲ್ಯ ಎಂದು ಗುರುತಿಸಲಾಗಿದೆ. ಪಿಕಪ್ ವಾಹನ ಮತ್ತು ಸ್ಕೂಟರ್ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ.ವಾಹನವು ಬಳ್ಳಮಂಜ ಕಡೆಯಿಂದ ಪಣಕಜೆ ಕಡೆಗೆ ವೇಗವಾಗಿ ಸಾಗುತ್ತಿತ್ತು. ಇದೇ ವೇಳೆ ಪಣಕಜೆಯಿಂದ ಬಳ್ಳಮಂಜ ಕಡೆಗೆ ಬರುತ್ತಿದ್ದ ಆಕ್ಟಿವಾ ಸ್ಕೂಟರ್ಗೆ ಪಾಲ್ಯರ ಸಮೀಪ ಪಿಕಪ್…
-

ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವಕರಿಗೆ ವಂಚನೆ: ಕೋಟಿ ಕೋಟಿ ಲೂಟಿ ಮಾಡಿದ ಅಪ್ಪ-ಮಗಳ ಬಂಧನ
ಬೆಂಗಳೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಉತ್ತರ ಕರ್ನಾಟಕದ ನಿರುದ್ಯೋಗಿ ಯುವಕರನ್ನು ಟಾರ್ಗೆಟ್ ಮಾಡಿ ಕೋಟ್ಯಂತರ ರೂಪಾಯಿ ವಂಚಿಸುತ್ತಿದ್ದ ಅಪ್ಪ ಮತ್ತು ಮಗಳನ್ನು ಬೆಂಗಳೂರಿನ ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಶಂಶಾದ್ ಬೇಗಂ ಹಾಗೂ ಆಕೆಯ ತಂದೆ ಮನ್ಸೂರ್ ಅಹಮದ್ ಎಂದು ಗುರುತಿಸಲಾಗಿದೆ. ಈ ಅಪ್ಪ-ಮಗಳ ಜೋಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 5 ಕೋಟಿ 30 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ಲೂಟಿ ಮಾಡಿದ್ದಾರೆ ಎಂಬ ಆಘಾತಕಾರಿ…
-

ಮಂಗಳೂರು ಮುಳುಗುತ್ತಿದೆ: ರಾಜಕಾಲುವೆ ಅತಿಕ್ರಮಣದ ಆರೋಪ; ಆಡಳಿತದ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರ ಆಕ್ರೋಶ
ಮಂಗಳೂರು: ಮಂಗಳೂರು ನಗರದಲ್ಲಿ ಪ್ರತಿ ಮಳೆಗಾಲದಲ್ಲೂ ಮರುಕಳಿಸುವ ಕೃತಕ ನೆರೆ ಸಮಸ್ಯೆ ಈ ಬಾರಿ ಮತ್ತೊಮ್ಮೆ ಗಂಭೀರ ಚರ್ಚೆಗೆ ಗ್ರಾಸವಾಗಿದೆ. ನಗರದ ವಿವಿಧ ಭಾಗಗಳಲ್ಲಿ ಮಳೆ ನೀರು ನಿಂತು ಜನಜೀವನ ಅಸ್ತವ್ಯಸ್ತವಾಗುತ್ತಿರುವ ಹಿನ್ನೆಲೆಯಲ್ಲಿ, ಪಂಪ್ವೆಲ್ನಿಂದ ಬಂದರು ಪ್ರದೇಶದವರೆಗೆ ವ್ಯಾಪಿಸಿರುವ ರಾಜಕಾಲುವೆಯ ಮೇಲಿನ ಅತಿಕ್ರಮಣ ಮತ್ತು ಅನಧಿಕೃತ ಕಟ್ಟಡಗಳೇ ನೆರೆ ಸಮಸ್ಯೆಗೆ ಪ್ರಮುಖ ಕಾರಣ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.ರಾಜಕಾಲುವೆಯ ಮೂಲ ಹರಿವು ಅಸ್ತವ್ಯಸ್ತಸ್ಥಳೀಯರ ಪ್ರಕಾರ, ಮಂಗಳೂರು ನಗರದ ರಾಜಕಾಲುವೆ ಮೂಲತಃ ಪಂಪ್ವೆಲ್ ಪ್ರದೇಶದಿಂದ ಆರಂಭವಾಗಿ ನೇರವಾಗಿ ಬಂದರು…
-

ಹೋಂಸ್ಟೇ ಬಾತ್ರೂಮ್ನಲ್ಲೇ ದುರಂತ ಅಂತ್ಯ: ಗೀಸರ್ ಅನಿಲ ಸೋರಿಕೆಗೆ ಯುವತಿ ಸಾವು
ಮಡಿಕೇರಿ : ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮೈಸೂರಿನ ಯುವತಿಯೊಬ್ಬರು ಹೋಂಸ್ಟೇ ಬಾತ್ರೂಮ್ನಲ್ಲಿ ಗ್ಯಾಸ್ ಗೀಸರ್ನಿಂದ ವಿಷಾನಿಲ ಸೋರಿಕೆಯಾಗಿ ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆಯ ನಿವಾಸಿಯಾದ ವಿನೂತ (27) ಮೃತಪಟ್ಟ ದುರ್ದೈವಿ ಪ್ರವಾಸಿ ಮಹಿಳೆಯಾಗಿದ್ದಾರೆ.ಮೈಸೂರಿನಿಂದ ಕೊಡಗು ಪ್ರವಾಸಕ್ಕೆಂದು ಆಗಮಿಸಿದ್ದ ವಿನೂತ, ಸೋಮವಾರಪೇಟೆಯ ಚೌಡ್ಲು ಗ್ರಾಮದ ಹೋಂಸ್ಟೇಯೊಂದರಲ್ಲಿ ತಂಗಿದ್ದರು. ಜೂನ್ 7ರ ಭಾನುವಾರ ಬೆಳಗ್ಗೆ ಸ್ನಾನ ಮಾಡಲು ಬಾತ್ರೂಮಿಗೆ ತೆರಳಿದ್ದ ಸಂದರ್ಭದಲ್ಲಿ ಈ ಘೋರ ದುರಂತ ಸಂಭವಿಸಿದೆ.ವಿನೂತ ಅವರು ಸ್ನಾನ ಮಾಡಲು ಹೋದಾಗ…
-

ಆಟವಾಡುತ್ತಿದ್ದಾಗ ಅನಾಹುತ: ನೀರು ತುಂಬಿದ ಹೊಂಡದಲ್ಲಿ ಬಿದ್ದು ಬಾಲಕ ಮೃತ್ಯು
ಕಾಸರಗೋಡು: ಶೌಚಾಲಯಕ್ಕೆ ಅಗೆಯಲಾಗಿದ್ದ ಹೊಂಡಕ್ಕೆ ಬಿದ್ದು ಆರು ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಇಲ್ಲಿನ ಮಧೂರು ಮಂಜತ್ತಡ್ಕದ ಮುಹಮ್ಮದ್ ಸಾಜಿದ್ ಅವರ ಪುತ್ರ ಮುಹಮ್ಮದ್ ಅಯಾನ್ ಮೃತಪಟ್ಟವನು.ಆಟವಾಡುತ್ತಿದ್ದ ಬಾಲಕ ನಿರ್ಮಾಣ ಹಂತದ ಮನೆಯ ಶೌಚಾಲಯ ಗುಂಡಿಗೆ ಬಿದ್ದಿದ್ದು, ಬಾಲಕ ನಾಪತ್ತೆಯಾದುದರಿಂದ ಮನೆಯವರು ಹುಡುಕಾಡಿದಾಗ ನೀರು ತುಂಬಿದ ಹೊಂಡಕ್ಕೆ ಬಿದ್ದಿರುವುದು ಕಂಡುಬಂದಿದ್ದು, ಕೂಡಲೇ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ. ವಿದ್ಯಾನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
-

ಐದು ವರ್ಷದ ಮಗಳ ಸಾವಿಗೆ ಕೊಲೆ ಪ್ರಕರಣ: ತಾಯಿ ಹಾಗೂ ಲಿವ್-ಇನ್ ಪ್ರಿಯಕರ ಪೊಲೀಸ್ ಬಲೆಗೆ
ಬೆಂಗಳೂರು : ರಾಜಧಾನಿಯ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐದು ವರ್ಷದ ಮುಗ್ಧ ಹೆಣ್ಣು ಮಗುವಿನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ತಿರುವು ಸಿಕ್ಕಿದೆ. ತನ್ನ ಖಾಸಗಿ ಜೀವನಕ್ಕೆ ಅಡ್ಡಿಯಾಗಿದ್ದಾಳೆ ಎಂಬ ಕಾರಣಕ್ಕೆ ಸ್ವಂತ ಮಗಳನ್ನೇ ಕೊಲೆ ಮಾಡಿರುವ ಆರೋಪದ ಮೇಲೆ 39 ವರ್ಷದ ಮಹಿಳೆ ಹಾಗೂ ಆಕೆಯ ಲಿವ್-ಇನ್ ಸಂಗಾತಿಯ ವಿರುದ್ಧ ಪೊಲೀಸರು ಶನಿವಾರ ಕೊಲೆ ಮೊಕದ್ದಮೆ ದಾಖಲಿಸಿದ್ದಾರೆ.ವೆನ್ನೆಲಾ (5) ಕೊಲೆಯಾದ ದುರ್ದೈವಿ ಬಾಲಕಿ. ಮಗುವಿನ ತಂದೆ ನೀಡಿದ ದೂರಿನ ಮೇರೆಗೆ ಆತನ ಪರಿತ್ಯಕ್ತ ಪತ್ನಿ…
-

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ದಂಪತಿ ಅದೃಷ್ಟವಶಾತ್ ಪಾರು
ವಿಟ್ಲ: ಮಂಗಳೂರು-ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ವಿಟ್ಲ ಸಮೀಪದ ಮಾಣಿ ಸಮೀಪದ ಅಳಿರಾ ಎಂಬಲ್ಲಿ ಶುಕ್ರವಾರ ಮುಂಜಾನೆ ಕಾರು ಪಲ್ಟಿಯಾದ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಮಾರುತಿ 800 ಕಾರೊಂದು ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಗಿ ಬಿದ್ದಿದ್ದು, ಕಾರಿನಲ್ಲಿದ್ದ ದಂಪತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











