Category: ರಾಜ್ಯ
-

ಪರವಾನಗಿ ಇಲ್ಲದೇ ಎಲ್‌ಪಿಜಿ ವ್ಯವಹಾರ: ಆಹಾರ ಇಲಾಖೆ ಕಾರ್ಯಾಚರಣೆಯಲ್ಲಿ ಬಯಲು
ಉಡುಪಿ: ಅಗತ್ಯ ಪರವಾನಗಿ ಮತ್ತು ದಾಖಲೆಗಳಿಲ್ಲದೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ಸಂಗ್ರಹಿಸಿ ಮಾರಾಟ ಮಾಡಿದ ಆರೋಪದ ಮೇಲೆ ಮಲ್ಪೆ ಪೊಲೀಸರು ಓರ್ವ ವ್ಯಕ್ತಿಯನ್ನವ ಬಂಧಿಸಿದ್ದಾರೆ.ಆರೋಪಿಯನ್ನು ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಮಲ್ಪೆ ನಿವಾಸಿ ಸನತ್ ಆರ್ ಕಾಮತ್ (43) ಎಂದು ಗುರುತಿಸಲಾಗಿದೆ. ಆರೋಪಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದಾರೆ ಎಂಬ ವಿಶ್ವಾಸಾರ್ಹ ಮಾಹಿತಿಯ ಮೇರೆಗೆ ಜೂನ್ 3 ರಂದು ಬೆಳಿಗ್ಗೆ 10.45 ರ ಸುಮಾರಿಗೆ ಆಹಾರ ಇಲಾಖೆಯ ಅಧಿಕಾರಿಗಳು ಮಲ್ಪೆ ಪೊಲೀಸ್ ಸಿಬ್ಬಂದಿಯೊಂದಿಗೆ ದಾಳಿ…
-

ಫೇಸ್‌ಬುಕ್‌ನಲ್ಲಿ ಎಸ್ಪಿ ನಕಲಿ ಖಾತೆ ತೆರೆದು ಲಕ್ಷಾಂತರ ರೂ. ವಂಚನೆ; ಆರೋಪಿಯ ಬಂಧನ
ವಿಜಯಪುರ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅವರ ಹೆಸರನ್ನೇ ಬಳಸಿ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿದ್ದ ಆರೋಪಿಯನ್ನು ಇಲ್ಲಿನ ಸಿಇಎನ್ (CEN) ಅಪರಾಧ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿದ್ದಾರೆ.ಬಂಧಿತನನ್ನು ಹಣಮಂತ ಭಜಂತ್ರಿ ಎಂದು ಗುರುತಿಸಲಾಗಿದೆ. ಸುರೇಶ ಅಥಣಿ ಎಂಬುವವರು ನೀಡಿದ ದೂರಿನ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.ಈ ಕುರಿತು ವಿಜಯಪುರ ನಗರದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಎಸ್ಪಿ ಲಕ್ಷ್ಮಣ ನಿಂಬರಗಿ ಅವರು, “ಆರೋಪಿ ಹಣಮಂತ ಭಜಂತ್ರಿ ನನ್ನ ಹೆಸರಿನಲ್ಲಿ ನಕಲಿ ಫೇಸ್‌ಬುಕ್…
-

ಸಚಿವ ಸಂಪುಟದಲ್ಲಿ ಯು.ಟಿ. ಖಾದರ್‌ಗೆ ಮಹತ್ವದ ಸ್ಥಾನ: ಅನುಭವಕ್ಕೆ ಸಂದ ಗೌರವ
ಮಂಗಳೂರು:ಸಾರ್ವಜನಿಕ ಜೀವನದಲ್ಲಿ ಸರಳತೆ, ಜನಪರ ಆಡಳಿತ ಹಾಗೂ ಅಭಿವೃದ್ಧಿ ಕಾರ್ಯಗಳ ಮೂಲಕ ವಿಶಿಷ್ಟ ಗುರುತನ್ನು ಮೂಡಿಸಿರುವ ಯು.ಟಿ. ಖಾದರ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಹೊಸ ಜವಾಬ್ದಾರಿ ದೊರೆತಿರುವುದು ಕ್ಷೇತ್ರದ ಜನರಲ್ಲಿ ಸಂತಸವನ್ನುಂಟು ಮಾಡಿದೆ.ಆರೋಗ್ಯ ಸಚಿವರಾಗಿದ್ದ ಅವಧಿಯಲ್ಲಿ ಸರ್ಕಾರಿ ಆಸ್ಪತ್ರೆಗಳ ಸೇವಾ ಗುಣಮಟ್ಟ ಸುಧಾರಣೆಗೆ ವಿಶೇಷ ಒತ್ತು ನೀಡಿದ್ದ ಖಾದರ್, ಗ್ರಾಮೀಣ ಪ್ರದೇಶಗಳು ಹಾಗೂ ಬಡ ವರ್ಗದ ಜನರಿಗೆ ಆರೋಗ್ಯ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದ್ದರು. ಆರೋಗ್ಯ ಸೇವೆಗಳು ಜನಸಾಮಾನ್ಯರಿಗೆ ಇನ್ನಷ್ಟು ಸುಲಭವಾಗಿ ದೊರೆಯುವಂತೆ…
-

ಡಿಕೆ ಶಿವಕುಮಾರ್ ಸಂಪುಟದಲ್ಲಿ ಜಮೀರ್ ಅಹ್ಮದ್‌ಗೆ ಶಾಕ್! ರಾಜಕೀಯ ವಲಯದಲ್ಲಿ ಭಾರಿ ಚರ್ಚೆ
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಪ್ರಭಾವಿ ಮುಖವಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ಗೆ ಡಿಕೆ ಶಿವಕುಮಾರ್ ನೂತನ ಸಂಪುಟದಲ್ಲಿ ಮೊದಲ ಅವಕಾಶ ಕೈತಪ್ಪಿದೆ. ಸಚಿವ ಸಂಪುಟ ವಿಸ್ತರಣೆ ವೇಳೆಯೂ ಸ್ಥಾನ ತಪ್ಪುವ ಸಾಧ್ಯತೆ ದಟ್ಟವಾಗಿದೆ. ಮುಂದಿನ ದಿನಗಳಲ್ಲೂ ಕಾಂಗ್ರೆಸ್ 2.0 ಸರ್ಕಾರದಲ್ಲಿ ಜಮೀರ್‌ಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಗಳು ಕ್ಷೀಣಿಸಿವೆ ಎಂದು ಉನ್ನತ ಮೂಲಗಳು ತಿಳಿಸಿವೆ. ದಾವಣಗೆರೆ ದಕ್ಷಿಣ ಉಪಚುನಾವಣೆಯ ವೇಳೆ ಉಂಟಾದ ಆಂತರಿಕ ಭಿನ್ನಮತ ಹಾಗೂ ಬಂಡಾಯವೇ ಜಮೀರ್‌ಗೆ ಹಿನ್ನಡೆಯಾಗಲು ಪ್ರಮುಖ…
-

ಮುಖ್ಯ ಮಂತ್ರಿಯಾಗಿ ಡಿ.ಕೆ.ಶಿವಕುಮಾರ್, ಸಚಿವರಾಗಿ ಯು.ಟಿ.ಖಾದರ್, ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ರವರಿಗೆ ಅಭಿನಂದನೆಗಳು: ಕೆ.ಅಶ್ರಫ್
ಮಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯ ಮಂತ್ರಿಯಾಗಿ ಡಿ. ಕೆ .ಶಿವಕುಮಾರ್ ,ಸಚಿವರಾಗಿ ಯು. ಟಿ.ಖಾದರ್ ರವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದು, ಅವರಿಗೆ ಅಭಿನಂದನೆಗಳು. ನೂತನ ಆಡಳಿತದಲ್ಲಿ ಸಮಗ್ರ ಕರ್ನಾಟಕದ ಅಭಿವೃದ್ಧಿ ಆಗಲಿ ಮತ್ತು ಮತೀಯ ಸೌಹಾರ್ದತೆ ಉತ್ತಮವಾಗಿ ಕೋಮುವಾದಿ ಶಕ್ತಿಗಳ ನಿಯಂತ್ರಣ ಆಗಲಿ. ಅನುಭವಿ ರಾಜಕಾರಣಿ ಆದ ಶ್ರೀ ಯು.ಟಿ.ಖಾದರ್ ರವರು ತಮ್ಮ ಅಧಿಕಾರಾವಧಿಯಲ್ಲಿ ಕರ್ನಾಟಕ ಜನತೆಗೆ ಉತ್ತಮ ಸೇವೆ ಸಲ್ಲಿಸುವಂತಾಗಲಿ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ, ಪರಿಷತ್ ಸ್ಥಾನಕ್ಕೆ…
-

ಸಿಸಿಟಿವಿಯಲ್ಲಿ ಸೆರೆಯಾದ ಭೀಕರ ಕ್ಷಣ: ಜೀಪ್-ಬೈಕ್ ಡಿಕ್ಕಿಗೆ ಯುವಕ ಬಲಿ
ತೆಕ್ಕಟ್ಟೆ : ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರಮುಖ ಸರ್ಕಲ್‌ನಲ್ಲಿ ಜೂನ್ 2ರ ಮಂಗಳವಾರ ತಡರಾತ್ರಿ ಜೀಪ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯನ್ನು ಗಣೇಶ್ ಎಂದು ಗುರುತಿಸಲಾಗಿದೆ. ಇವರು ಮಂಗಳವಾರ ರಾತ್ರಿ ತಮ್ಮ ದ್ವಿಚಕ್ರ ವಾಹನದಲ್ಲಿ ತೆಕ್ಕಟ್ಟೆ ಸರ್ಕಲ್ ರಸ್ತೆಯಾಗಿ ಸಂಚರಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ.ಮಂಗಳವಾರ ರಾತ್ರಿ ಸರಿ ಸುಮಾರು 9:47 ರ ವೇಳೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ವೇಗವಾಗಿ ಬಂದ…
-

ಯುಟಿ ಖಾದರ್ ಸೇರಿ 14 ಮಂದಿಗೆ ಸಚಿವ ಸ್ಥಾನ; ಇಂದು ಪ್ರಮಾಣ ವಚನ
ಬೆಂಗಳೂರು: ಕರ್ನಾಟಕದ ಹೊಸ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನರ್‌ರಚನೆಗೆ ವೇದಿಕೆ ಸಜ್ಜಾಗಿದ್ದು, ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾಯಕತ್ವ ಪರಿವರ್ತನೆಯ ಜೊತೆಗೆ, ಕಾಂಗ್ರೆಸ್ ಪಕ್ಷವು ಸಚಿವರ ಮೊದಲ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಹೊಸ ಮುಖ್ಯಮಂತ್ರಿಯೊಂದಿಗೆ 14 ಮಂದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ದೇಶಾದ್ಯಂತದ ಹಿರಿಯ ಕಾಂಗ್ರೆಸ್ ನಾಯಕರು ಪ್ರಮುಖ ರಾಜಕೀಯ ಕಾರ್ಯಕ್ರಮಕ್ಕಾಗಿ ಬರುವ ನಿರೀಕ್ಷೆಯಿರುವ ಲೋಕ ಭವನದಲ್ಲಿ ನಿಗದಿಯಾಗಿರುವ ಪ್ರಮಾಣ ವಚನ ಸಮಾರಂಭಕ್ಕೂ ಮುನ್ನ ಈ ಅನುಮೋದನೆಗಳು ಬಂದಿವೆ.ವರದಿಗಳ ಪ್ರಕಾರ, ಹೊಸ…
-

ಮೊಬೈಲ್ ಹವ್ಯಾಸ ಬಿಡುವಂತೆ ಬುದ್ಧಿಮಾತು ಹೇಳಿದ ತಾಯಿ;ಬಾಲಕ niguda ನಾಪತ್ತೆ
ಸುಳ್ಯ: ಮೊಬೈಲ್ ಬಳಸದಂತೆ ತಾಯಿ ಬೈದು ಬುದ್ಧಿಮಾತು ಹೇಳಿದ್ದಕ್ಕೆ ಬೇಸತ್ತು 16 ವರ್ಷದ ಅಪ್ರಾಪ್ತ ಬಾಲಕನೊಬ್ಬ ಮನೆಯಿಂದ ಹೊರಹೋಗಿ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಸುಳ್ಯ ಕಸಬಾ ಗ್ರಾಮದ ಬೋರುಗುಡ್ಡೆ ಎಂಬಲ್ಲಿ ನಡೆದಿದೆನಾಪತ್ತೆಯಾದ ಬಾಲಕನನ್ನು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಿವಾಸಿಯಾಗಿದ್ದು, ಪ್ರಸ್ತುತ ಸುಳ್ಯದ ಬೋರುಗುಡ್ಡೆಯಲ್ಲಿ ಪೋಷಕರೊಂದಿಗೆ ವಾಸವಿದ್ದ ಸೈಯದ್ ಆಲಿ ಸೈಯದ್ ಗೌಸ (16) ಎಂದು ಗುರುತಿಸಲಾಗಿದೆ. ಈ ಸಂಬಂಧ ಬಾಲಕನ ತಾಯಿ ಸಲ್ಮಾ ಅವರು ಸುಳ್ಯ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದಾರೆ. ಸಲ್ಮಾ…
-

ಅಡುಗೆ ಅನಿಲ ಸಿಲಿಂಡರ್ ಹೊತ್ತ ಲಾರಿ ಡಿಕ್ಕಿ: ನುಜ್ಜುಗುಜ್ಜಾದ ಕಾರು, ಐವರ ಸ್ಥಿತಿ ಗಂಭೀರ
ಉಪ್ಪಿನಂಗಡಿ: ಕಾರೊಂದಕ್ಕೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಕೂಟೇಲು ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.ಕಾರ್ಕಳದ ನಕ್ರೆ ಗ್ರಾಮದ ಕುಟುಂಬವೊಂದು ಸುಬ್ರಹ್ಮಣ್ಯಕ್ಕೆ ವ್ಯಾಗನರ್ ಕಾರಿನಲ್ಲಿ ತೆರಳುತ್ತಿತ್ತು. ಉಪ್ಪಿನಂಗಡಿಯ ಕೂಟೇಲು ಸಮೀಪ ಕಾರು ಸಂಚರಿಸುತ್ತಿದ್ದ ವೇಳೆ ಅಡುಗೆ ಅನಿಲದ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆಯಿತು.ಪರಿಣಾಮ ಕಾರಿನಲ್ಲಿದ್ದ ಚಾಲಕ ದೀಪಕ್ (45), ಯಾತ್ರಾರ್ಥಿಗಳಾಗಿದ್ದ ಗುರುರಾಜ್ (46), ಧನುಷ್ (15), ಭಾರತಿ (48), ಗೀತಾ (55) ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ…
-

ಬಿಟ್ ಕಾಯಿನ್ ಬಹುಕೋಟಿ ಹಗರಣ: ED ಸತತ ತನಿಖೆ ಮುಂದುವರಿಕೆ, ನಲಪಾಡ್ ವಿಚಾರಣೆ
ಬೆಂಗಳೂರು: ಬಿಟ್ ಕಾಯಿನ್ ಬಹುಕೋಟಿ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ ಗೆ ಮತ್ತೆ ಶಾಕ್ ಎದುರಾಗಿದೆ. ಸೋಮವಾರ (ಜೂ.1) ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇಡಿ (ED) ಸಮನ್ಸ್ ನೀಡಿದೆ. ನಲಪಾಡ್ ವಿಚಾರಣೆ ಗೆ ಹಾಜರಾಗುವಂತೆ ಕಳೆದ ಶುಕ್ರವಾರವೇ ಇಡಿ ಸಮನ್ಸ್ ಜಾರಿಗೊಳಿಸಿತ್ತು. ಆದ್ರೆ ಪ್ರಸ್ತುತ ರಾಜಕೀಯ ಬೆಳವಣಿಗೆಯಿಂದಾಗಿ ವಿನಾಯ್ತಿ ನೀಡಿತ್ತು. ಇದೀಗ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದೆ. ಬಿಟ್ ಕಾಯಿನ್ ಬಹುಕೋಟಿ ಹಗರಣದಲ್ಲಿ ಮೂವರನ್ನು ಬಂಧಿಸಿರುವ ಇಡಿ ತನಿಖೆ ತೀವ್ರಗೊಳಿಸಿದೆ. ಸತತ 21…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











