Category: ರಾಜ್ಯ
-

ಬೆಂಗಳೂರು: ಪಕ್ಕದ ಮನೆಯ ಮಹಿಳೆಗೆ ಕಿರುಕುಳ, ಪ್ರಶ್ನಿಸಿದ ಪತಿಗೆ ಮಚ್ಚಿನಿಂದ ಹಲ್ಲೆ
ಬೆಂಗಳೂರು: ಅಂಕಲ್ ಒಬ್ಬ ಪಕ್ಕದ ಮನೆಯ ಮಹಿಳೆಯನ್ನ ಹಿಂಬಂದಿಯಿಂದ ತಬ್ಬಿಕೊಂಡು ಅವಾಂತರ ಮಾಡಿಕೊಂಡಿದ್ದಾರೆ. ಪುಟ್ಟರಾಜ ಎಂಬಾತ ತಬ್ಬಿ ವಿಕೃತಿ ಮೆರೆದಿರುವ ಘಟನೆ ಶಂಕರಪುರದ ರಂಗಾರಾವ್ ರಸ್ತೆಯಲ್ಲಿ ನಡೆದಿದೆ. ಇದನ್ನ ಪ್ರಶ್ನೆ ಮಾಡಿದ ಮಹಿಳೆಯ ಪತಿ ನಂದೀಶ್ ಮೇಲೆ ಮಚ್ಚು, ದೋಸೆ ತವಾದಿಂದ ಹಲ್ಲೆ ಕೂಡ ನಡೆಸಿದ್ದಾನೆ. ತ್ರೀವ ಹಲ್ಲೆಗೊಳಗಾದ ನಂದೀಶ್ ಆಸ್ಪತ್ರೆಗೆ ದಾಖಲಾಗಿದ್ದಾನೆ. ನಂದೀಶ್ ಹಾಗೂ ಆತನ ಹೆಂಡ್ತಿ ಶಂಕರಪುರ ರಂಗರಾವ್ ರಸ್ತೆಯಲ್ಲಿರುವ ಗಿರೀಶ್ ಜೈನ್ ಎಂಬುವರ ಮನೆಯಲ್ಲಿ ವಾಸವಾಗಿದ್ರು. ಇದೇ ವಠಾರದಲ್ಲಿ ಪುಟ್ಟರಾಜು ಹಾಗೂ ಆತನ ಹೆಂಡ್ತಿ…
-

ಎರಡು ಬಾರಿ ಗರ್ಭಪಾತ, ಲಕ್ಷಾಂತರ ರೂಪಾಯಿ ಮೋಸ?: ಇದು ಪೊಲೀಸ್ ಇಲಾಖೆಗೆ ಮುಜುಗರ ತಂದ ಪ್ರೇಮ ಪ್ರಕರಣ
ಕಳೆದ ಎಂಟು ವರ್ಷಗಳಿಂದ ಪ್ರೀತಿಸಿ, ಸಂಸಾರ ನಡೆಸಿ ಈಗ ಕೈಕೊಟ್ಟ ಪ್ರೇಯಸಿಯ ವಿರುದ್ಧ ಪೊಲೀಸ್ ಅಧಿಕಾರಿಯೊಬ್ಬರು ಬೀದಿಗಿಳಿದು ನ್ಯಾಯಕ್ಕಾಗಿ ಮೊರೆ ಹೋಗಿರುವ ಘಟನೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರಿಯಕರನಿಗೆ ವಂಚಿಸಿ ಬೇರೊಬ್ಬನ ಜೊತೆ ಮದುವೆಯಾಗಲು ಸಜ್ಜಾಗಿರುವ ಲೇಡಿ ಕಾನ್ಸ್‌ಟೇಬಲ್ ವಿರುದ್ಧ ಪಿಎಸ್ಐ ರಾಯಚೂರು ಎಸ್ಪಿ ಹಾಗೂ ಆನ್‌ಲೈನ್ ಮೂಲಕ ದೂರು ದಾಖಲಿಸಿದ್ದಾರೆ. ಸ್ನೇಹದಿಂದ ಶುರುವಾದ ಪ್ರೀತಿ ಯಾದಗಿರಿಯ ಶಹಾಪುರದಲ್ಲಿ ಗುಪ್ತಚರ ಇಲಾಖೆಯಲ್ಲಿ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿರುವ ವಿರೇಶ್ ಮತ್ತು ಕಾನ್ಸ್‌ಟೇಬಲ್ ವಿಜಯಶ್ರೀ ಅವರ…
-

ಕೆಎಸ್‌ಆರ್‌ಟಿಸಿ ಬಸ್ ಹೊತ್ತಿ ಉರಿದು ನಾಶ:17 ಪ್ರಯಾಣಿಕರು ಪಾರು
ಹಾವೇರಿ : ಬೆಂಗಳೂರಿನಿಂದ ಗದಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಪಲ್ಲಕ್ಕಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಬ್ರೇಕ್ ಲೈನ್ ದೋಷದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಕ್ಷಣಾರ್ಧದಲ್ಲಿ ಬಸ್‌ಗೆ ವ್ಯಾಪಿಸಿದೆ. ಈ ವೇಳೆ ಸಮಯಪ್ರಜ್ಞೆ ಮೆರೆದ ಚಾಲಕ ಪಕ್ಕೀರಪ್ಪ ಅವರು ತಕ್ಷಣವೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಇದರಿಂದಾಗಿ ಬಸ್ಸಿನಲ್ಲಿದ್ದ ಎಲ್ಲಾ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕ ಪಕ್ಕೀರಪ್ಪ…
-

ಬೈಕ್ ಹಿಂಬಾಲಿಸಿ ಹತ್ಯೆ: ಯುವಕನನ್ನು ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು
ಮಂಡ್ಯ : ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಗಂಜಾಂನಲ್ಲಿ ಭಾನುವಾರ ತಡರಾತ್ರಿ ಭೀಕರ ಕೊಲೆಯೊಂದು ನಡೆದಿದ್ದು, ಸಕ್ಕರೆ ನಾಡಿನ ಜನತೆಯನ್ನು ಬೆಚ್ಚಿಬೀಳಿಸಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಯುವಕನೋರ್ವನನ್ನು ದುಷ್ಕರ್ಮಿಗಳ ತಂಡ ಅಟ್ಟಾಡಿಸಿ ಕಡಿದು ಹತ್ಯೆ ಮಾಡಿದೆ.ಘಟನೆಯ ವಿವರ:ಮೈಸೂರು ಮೂಲದ ಮಹಮ್ಮದ್ ಸೋಹೇದ್ (27) ಕೊಲೆಯಾದ ದುರ್ದೈವಿ. ಬೈಕಿನಲ್ಲಿ ತೆರಳುತ್ತಿದ್ದ ಸೋಹೇದ್ನನ್ನು ನಾಲ್ಕೈದು ಮಂದಿ ಕಿರಾತಕರ ತಂಡ ಬೈಕ್ಗಳಲ್ಲಿ ಹಿಂಬಾಲಿಸಿಕೊಂಡು ಬಂದಿದೆ. ಶ್ರೀರಂಗಪಟ್ಟಣ ಟೌನ್ ವ್ಯಾಪ್ತಿಯ ಗಂಜಾಂ ತಲುಪುತ್ತಿದ್ದಂತೆ ಅಡ್ಡಗಟ್ಟಿದ ಹಂತಕರು, ಲಾಂಗು ಮತ್ತು ಮಚ್ಚುಗಳಿಂದ ಮನಬಂದಂತೆ ದಾಳಿ…
-

ಪತಿ-ಪತ್ನಿ ಕಲಹ: ತಾಯಿಯೇ ಮಗು ಮಾರಾಟ ಮಾಡಿದ ಗಂಭೀರ ಆರೋಪ
ಬೆಂಗಳೂರು: ನಗರದಲ್ಲಿ ಪತಿ ಪತ್ನಿ ಕಲಹದಲ್ಲಿ ತಾಯಿಯೇ ಮಗು ಮಾರಾಟ ಮಾಡಿದ ಗಂಭೀರ ಆರೋಪ ಕೇಳಿ ಬಂದಿದೆ. ಪತಿಯೊಂದಿಗೆ ಜಗಳ ಆಡಿ ಮೂರು ಮಕ್ಕಳೊಂದಿಗೆ ಮನೆ ಬಿಟ್ಟ ಪತ್ನಿ, ಇಬ್ಬರು ಮಕ್ಕಳನ್ನ ಮೆಜೆಸ್ಟಿಕ್ನಲ್ಲಿ ಬಿಟ್ಟು ಇನ್ನೊಂದು ಮಗುವನ್ನು ಮಾರಿದ್ದಾಳೆ ಎಂದು ಪತಿ ಆರೋಪಿಸಿದ್ದಾರೆ. ಬೆಂಗಳೂರಿನ ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸ ಮಾಡ್ತಿದ್ದ ರವಿ ಬಾಬು ದಂಪತಿ ಮದುವೆಯಾಗಿ 16 ವರ್ಷಗಳಾಗಿತ್ತು. ಆಗಾಗ ಗಂಡ ಹೆಂಡತಿ ನಡುವೆ ನಡೆಯುತ್ತಿದ್ದ ಜಗಳದ ಕಾರಣಕ್ಕೆ ಗಂಡನ ಮೇಲಿನ ಕೋಪದಿಂದ ಹೆಂಡತಿ ಮೂರು…
-

ಮದುವೆ ಹೆಸರಿನಲ್ಲಿ ವಂಚನೆ: ಮಹಿಳೆಯರನ್ನು ಬ್ಲ್ಯಾಕ್‌ಮೇಲ್ ಮಾಡಿದ ನಟ ಬಂಧನ
ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಸಂಪರ್ಕ ಬೆಳೆಸಿ, ಖಾಸಗಿ ವಿಡಿಯೋಗಳನ್ನು ಮುಂದಿಟ್ಟು ಮಹಿಳೆಯರಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕಿರುತೆರೆ ನಟ ಹನಿಯೂರು ಚಂದ್ರೇಗೌಡನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಸರ್ಕಾರಿ ಅಧಿಕಾರಿ ಎಂದು ಹೇಳಿಕೊಂಡು 43 ವರ್ಷದ ಮೇಕಪ್ ಆರ್ಟಿಸ್ಟ್ ಸೇರಿದಂತೆ ಹಲವು ಮಹಿಳೆಯರಿಗೆ ವಂಚಿಸಿರುವ ಆರೋಪ ಕೇಳಿಬಂದಿದೆ. ಫೇಸ್‌ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಒಂಟಿ ಮಹಿಳೆಯರನ್ನು ಪರಿಚಯಿಸಿಕೊಳ್ಳುತ್ತಿದ್ದ ಚಂದ್ರೇಗೌಡ, ತಾನು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ), ವಕೀಲ ಅಥವಾ ಕಾಲೇಜು ಉಪನ್ಯಾಸಕ ಎಂದು ಸುಳ್ಳು ಹೇಳುತ್ತಿದ್ದ. ಸಂತ್ರಸ್ತರಿಗೆ…
-

ಮೊಬೈಲ್ ಬಳಕೆದಾರರಿಗೆ ಎಮರ್ಜೆನ್ಸಿ ಅಲರ್ಟ್: ಸರ್ಕಾರದಿಂದ ಸ್ಪಷ್ಟನೆ
ಬೆಂಗಳೂರು: ದೇಶದ ಕೋಟ್ಯಂತರ ಮೊಬೈಲ್ ಬಳಕೆದಾರರಿಗೆ ಏಕಾಏಕಿ ‘ಎಮರ್ಜೆನ್ಸಿ ಅಲರ್ಟ್’ ಸಂದೇಶಗಳು ಬಂದಿವೆ. ಆದರೆ, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಇದು ಕೇಂದ್ರ ಸರ್ಕಾರವು ಹೊಸದಾಗಿ ಜಾರಿಗೆ ತಂದಿರುವ ‘ಸೆಲ್ ಬ್ರಾಡ್‌ಕಾಸ್ಟ್’ ವ್ಯವಸ್ಥೆಯ ಅಧಿಕೃತ ಪರೀಕ್ಷೆಯಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇಂದು ದೆಹಲಿಯಲ್ಲಿ ಈ ಸ್ವದೇಶಿ ವಿಪತ್ತು ಸಂವಹನ ವ್ಯವಸ್ಥೆಗೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಭಾರತದ 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜಧಾನಿಗಳಲ್ಲಿ ಇಂದು ಈ ಪರೀಕ್ಷಾರ್ಥ…
-

ಪತ್ನಿಯ ನಡತೆಯಿಂದ ಮನನೊಂದು ತಂದೆಯಿಂದ ಭೀಕರ ಕೃತ್ಯ
ತುಮಕೂರು: ಚಿನ್ನಾಭರಣ ಸಹಿತ ಪರಾರಿಯಾದ ಹೆಂಡತಿಯ ನಡತೆಯಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನಿಬ್ಬರು ಪುಟ್ಟ ಮಕ್ಕಳನ್ನೂ ಕೊಲೆ ಮಾಡಿ, ತಾನೂ ನೇಣಿಗೆ ಶರಣಾಗಿರುವ ಅಮಾನವೀಯ ಘಟನೆ ತುಮಕೂರುಜಿಲ್ಲೆಯ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಈ ಭೀಕರ ಕೃತ್ಯ ನಡೆದಿದ್ದು, ಇಂದು ಬೆಳಗ್ಗೆ ಅಕ್ಕಪಕ್ಕದ ಮನೆಯವರು ಗಮನಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಲ್ಕೆರೆ ಗ್ರಾಮದ ಮಲ್ಲೇಶ್ವರಸ್ವಾಮಿ ದೇಗುಲದ ಅರ್ಚಕ ಹಾಗೂ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಶಿವಣ್ಣ (40) ಆತ್ಮಹತ್ಯೆ…
-

ಲೋಕಾಯುಕ್ತ ದಾಳಿ: ಆರ್‌ಟಿಓ ಕಚೇರಿ ಸಿಬ್ಬಂದಿ ಸಹಿತ ಇಬ್ಬರ ಬಂಧನ
ಕೊಪ್ಪಳ: ಲಂಚದ ಹಣ ಸ್ವೀಕರಿಸಿದ ಆರೋಪದ ಮೇಲೆ ಕೊಪ್ಪಳ ಪ್ರಾದೇಶಿಕ ಸಾರಿಗೆ ಕಚೇರಿ(ಆರ್‌ಟಿಓ)ಯ ದ್ವಿತೀಯ ದರ್ಜೆ ಸಹಾಯಕ ಹಾಗೂ ಖಾಸಗಿ ವ್ಯಕ್ತಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಂಜಿತ್ ಸಹಾಜಾನಂದ(30) ಆರ್‌ಟಿಓ ಕಚೇರಿ ದ್ವಿತೀಯ ದರ್ಜೆ ಸಹಾಯಕ, ಹಾಗೂ ವಿನಯಕುಮಾರ(32) ಡ್ರೈವಿಂಗ್ ಸ್ಕೂಲ್ ಗುಮಾಸ್ತ ಎಂದು ಗುರುತಿಸಲಾಗಿದೆ. ಲಂಚ ನೀಡಲು ಇಚ್ಛಿಸದ ನಈಮ್ ಅಕ್ರಮ್ ಕೆ.ಎಸ್. ಎಂಬವರು ಲೋಕಾಯುಕ್ತ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಶೋರೂಮ್‌ಗಳಿಗೆ ಟ್ರೇಡ್ ಲೈಸೆನ್ಸ್ ನೀಡಲು 21,000 ರೂ.…
-

ಹೋಂಗಾರ್ಡ್ಸ್, ರಿಸರ್ವ್ ಪೊಲೀಸ್ & ಎಎಸೈಗಿಂತ ಕಡಿಮೆ ದರ್ಜೆಯ ಪೊಲೀಸ್ ಸಿಬ್ಬಂದಿಗಳು ಸಾರ್ವಜನಿಕ ವಾಹನಗಳನ್ನು ಅಡ್ಡಗಟ್ಟಿದರೆ ಕ್ರಮ
ರಾಜ್ಯದ ಗೃಹರಕ್ಷಕ ದಳ, ಸಶಸ್ತ್ರ ಪೊಲೀಸ್ ಹಾಗೂ ಎಎಸೈ ದರ್ಜೆಗಿಂತ ಕೆಳಹಂತದ ಪೊಲೀಸ್ ಸಿಬ್ಬಂದಿಗಳು ನಿಯಮಬಾಹಿರವಾಗಿ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಸರ್ಕಾರಿ ವಾಹನಗಳನ್ನು ಬಳಸಿಕೊಂಡು ವಾಹನ ತಪಾಸಣಾ ನೆಪದಲ್ಲಿ ಸಾರ್ವಜನಿಕರಿಗೆ ಕಿರುಕುಳ, ಪ್ರಕರಣ ದಾಖಲಿಸುವುದಾಗಿ ಹೆದರಿಸಿ, ಬೆದರಿಸಿ ಅನಧಿಕೃತವಾಗಿ ಹಣ ವಸೂಲಿ ಮಾಡುತ್ತಿರುವ ಘಟನೆಗಳನ್ನು ಕೂಡಲೇ ನಿಲ್ಲಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯದ ಡಿಜಿ & ಐಜಿಪಿರವರಿಗೆ ಪತ್ರ ಬರೆದ ನಿಮಿತ್ಯ ಆಯಾ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತ ಚಟುವಟಿಕೆಗಳ ವಿರುದ್ಧ ವಿಶೇಷ ಮತ್ತು ನಿರಂತರ ಕಾರ್ಯಾಚರಣೆ ಕೈಗೊಂಡು ಸಿಬ್ಬಂದಿಗಳ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











