Category: ರಾಜ್ಯ
-

ಭೀಕರ ಹತ್ಯೆ : ಹೊಸ ಕಾರು ಖರೀದಿಸಿದ್ದ ಯುವಕನನ್ನ ಅದೇ ಕಾರಲ್ಲಿ ಸುಟ್ಟು ಕೊಂದ ಪಾಪಿಗಳು!
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದ ಬಳಿ ಮನುಕುಲವೇ ತಲೆತಗ್ಗಿಸುವಂತಹ ಘಟನೆ ನಡೆದಿದೆ. ಹೊಸ ಕಾರು ಖರೀದಿಸಿ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಸಂಭ್ರಮದಿಂದ ಮನೆಗೆ ಮರಳುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಕಾರಿನ ಸಮೇತ ಯುವಕನನ್ನು ಸುಟ್ಟು ಹಾಕಿದ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ನಡೆದಿದೆ. ಸೋಮು ಅಲಿಯಾಸ್ ಸೋಮಲಿಂಗಪ್ಪ ಪಡಸಲಗಿ (36) ಕೊಲೆಯಾದವರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಲೆಗೀಡಾದ ವ್ಯಕ್ತಿಯ ಸಂಬಂಧಿ ಸದಾಶಿವ ಪಡಸಲಗಿ, ರವಿ ಪಾಟೀಲ್…
-

ಪ್ರೀತಿ, ಮದುವೆ ಹೆಸರಲ್ಲಿ 50 ಮಹಿಳೆಯರಿಗೆ ವಂಚನೆ..!! ಉದ್ಯಮಿಯ ಕರಾಳ ಮುಖ ಬಯಲು
ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ಒಂದು ನಡೆದಿದ್ದು ಬೆಂಗಳೂರಲ್ಲಿ ಉದ್ಯಮಿ ಕೃಪಲಾನಿ, ಪ್ರೀತಿ ಮತ್ತು ಮದುವೆಯ ನೆಪದಲ್ಲಿ ಸುಮಾರು 50 ಮಹಿಳೆಯರಿಗೆ ವಂಚಿಸಿ, ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಬಂಧಿತನಾಗಿದ್ದಾನೆ. ಸರ್ಕಾರಿ ಮಹಿಳಾ ಅಧಿಕಾರಿಗಳನ್ನೇ ಗುರಿಯಾಗಿಸಿಕೊಂಡು, ಖಾಸಗಿ ಕ್ಷಣಗಳನ್ನು ಸೆರೆಹಿಡಿದು ಬೆದರಿಸುತ್ತಿದ್ದ ಈತನ ಕೃತ್ಯ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಉದ್ಯಮಿ ಕೃಪಲಾನಿ ಪ್ರೀತಿ ಮತ್ತು ಮದವೆ ಹೆಸರಿನಲ್ಲಿ ಮಹಿಳೆಯರನ್ನು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸುತ್ತಿದ್ದನು ಎಂಬುವುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.…
-

ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ..!
ಬೆಂಗಳೂರು : ಬಾಲ್ಯದಿಂದಲೇ ಸ್ನೇಹಿತರಾಗಿದ್ದ ಇಬ್ಬರ ನಡುವೆ ಮದ್ಯಪಾನದ ಅಮಲಿನಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ತಮಿಳುನಾಡಿನ ಸಿಂಗಸಾದನಪಳ್ಳಿ ಮೂಲದ ಮೋಹನ್ ಎಂಬ ಯುವಕನನ್ನು ಅವನ ಸ್ನೇಹಿತ ಮನೋಜ್ ಕೊಲೆ ಮಾಡಿರುವ ಘಟನೆ ಆನೇಕಲ್ ತಾಲ್ಲೂಕಿನ ಮಟ್ಟನಹಳ್ಳಿ ಬಳಿ, ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಮೋಹನ್ ಮತ್ತು ಮನೋಜ್ ಜೊತೆಗೂಡಿ ನಿರ್ಜನ ಪ್ರದೇಶಕ್ಕೆ ಹೋಗಿ ಮದ್ಯಪಾನ ಮಾಡುತ್ತಿದ್ದರು. ಈ ವೇಳೆ ಇಬ್ಬರೂ ಹೆಚ್ಚು ನಶೆಯಲ್ಲಿ ಇದ್ದಾಗ, ಸುಮಾರು ಎರಡು ವರ್ಷಗಳ ಹಿಂದೆ ನಡೆದ…
-

SSLC ವಿದ್ಯಾರ್ಥಿ ಸಂಕೇತ್ ಸಮಾಧಿ ಕೆಡವಿದ್ದ ಅಪ್ರಾಪ್ತ ಬಾಲಕ ಅರೆಸ್ಟ್!
ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ ಸಮಾಧಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಆರೋಪಿಯನ್ನು ಬಂಧಿಸಲಾಗಿದೆ. ಸಂಕೇತ್ ಕೊಲೆ ಪ್ರಕರಣದಲ್ಲಿ ತಮ್ಮ ಸ್ನೇಹಿತರು ಜೈಲು ಪಾಲಾಗಿದ್ದಾರೆ ಎಂಬ ಸಿಟ್ಟಿಗೆ ಅಪ್ರಾಪ್ತ ಈ ಕೃತ್ಯ ಎಸಗಿರುವುದು ಬಯಲಾಗಿದೆ. ಸಂಕೇತ್ ಕೊಲೆ ಕೇಸ್ನಲ್ಲಿ ಜೈಲು ಸೇರಿರುವ ಆರೋಪಿಗಳ ಅಪ್ರಾಪ್ತ ಸ್ನೇಹಿತನೇ ಈ ಕೃತ್ಯ ಎಸಗಿರೋದು ಬಯಲಾಗಿದ್ದು, ಮಾರ್ಚ್ 31ರಂದು ಸಂಕೇತ್ ಸಮಾಧಿಯನ್ನು ಧ್ವಂಸಗೊಳಿಸಲಾಗಿತ್ತು. ಈ ಹಿನ್ನೆಲೆ ಆರೋಪಿ ಪತ್ತೆಗೆ ತೀವ್ರ ತನಿಖೆ ನಡೆಸಿದ್ದ ತುಂಗಾನಗರ ಪೋಲಿಸರು, ಹಲವು ಆಯಾಮಗಳಲ್ಲಿ ಈ ಬಗ್ಗೆ…
-

ಯೋಗೀಶ್ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿ ಸೇರಿ ಎಲ್ಲಾ ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ
ಬೆಂಗಳೂರು : ಧಾರವಾಡದಲ್ಲಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 17 ಆರೋಪಿಗಳು ದೋಷಿಗಳು ಎಂದು ತೀರ್ಪು ನೀಡಿದೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 17 ಆರೋಪಿಗಳಿಗೆ ನಾಳೆ ಶಿಕ್ಷಪ್ರಮಾಣ ಪ್ರಕಟಿಸಲಾಗುತ್ತದೆ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಡ್ಜ್ ಸಂತೋಷ ಗಜಾನನ ಭಟ್ ತಿಳಿಸಿದರು.…
-

ರಾಜ್ಯದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದ ಉಷ್ಣಾಂಶ; ಇಂದು 4 ಜಿಲ್ಲೆಗಳಲ್ಲಿ ಬಿರುಗಾಳಿ-ಮಳೆಯ ಅಬ್ಬರ
ಬೆಂಗಳೂರು: ರಾಜ್ಯದಲ್ಲಿ ತಾಪಮಾನ ಮಿತಿಮೀರುತ್ತಿದೆ . ರಾಜ್ಯಾದ್ಯಂತ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿದೆ. ಕಲಬುರ್ಗಿಯಲ್ಲಿ ಬರೋಬ್ಬರಿ 44 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಇನ್ನು ರಾಜ್ಯಾದ್ಯಂತ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್‌ನಿಂದ 44 ಡಿಗ್ರಿ ಸೆಲ್ಸಿಯಸ್‌ವರೆಗೆ ಇದೆ. ಅನೇಕ ಭಾಗಗಗಳಲ್ಲಿ, ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತಲೂ ಹೆಚ್ಚಾಗಿದೆ. ಹಾಗೇ, ಉಷ್ಣಾಂಶ ಹೆಚ್ಚಳವಾಗುತ್ತಿರುವುದರಿಂದ ಜನಸಾಮಾನ್ಯರು ಎಚ್ಚರಿಕೆಯಿಂದ ಇರಬೇಕು ಎಂದೂ IMD ಎಚ್ಚರಿಕೆ ನೀಡಿದೆ.. ಕಲಬುರ್ಗಿಯಲ್ಲಂತೂ ಗರಿಷ್ಠ ತಾಪಮಾನ ಮಿತಿಮೀರುತ್ತಿದೆ. ಬೀದರ್, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ ಮತ್ತು ಬೆಂಗಳೂರು…
-

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ರೇಡ್..!! ಮೂವರು ಅರೆಸ್ಟ್ ಓರ್ವ ಮಹಿಳೆಯ ರಕ್ಷಣೆ
ರಾಯಚೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜಿಲ್ಲೆಯ ಸಿಂಧನೂರಿನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿ ವೇಳೆ ಓರ್ವ ಮಹಿಳೆಯನ್ನ ರಕ್ಷಣೆ ಮಾಡಿದ್ದಾರೆ.ಬಂಧಿತ ಆರೋಪಿಗಳನ್ನು ಗಂಗಾಧರ, ಶಾಮಣ್ಣ, ವಿಜಯಕುಮಾರ ಎಂದು ಗುರುತಿಸಲಾಗಿದೆ. ಪ್ರಮುಖ ಆರೋಪಿ ಅಭಿಷೇಕ ಪರಾರಿಯಾಗಿದ್ದಾನೆ. ನಗರದ ಹೊರವಲಯದ ನ್ಯಾಷನಲ್ ಲೇಔಟ್‌ನ ಮನೆಯೊಂದರಲ್ಲಿ ದಂಧೆ ನಡೆಯುತ್ತಿರುವ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಮುಖ ಆರೋಪಿ ಪರಾರಿಯಾಗಿದ್ದಾನೆ. ದಾಳಿ ವೇಳೆ ಮೂವರು ಆರೋಪಿಗಳನ್ನ ಪೊಲೀಸರು ವಶಕ್ಕೆ…
-

ಲವರ್ ಜೊತೆಗೆ ಹೋದ ಮಗಳನ್ನೇ ವಿಷ ಕೊಟ್ಟು ಕೊಂದು ಸುಟ್ಟು ಹಾಕಿದ ಸಂಬಂಧಿಕರು.!
ಪ್ರಿಯಕರನ ಜೊತೆ ಬಾಳಬೇಕೆಂಬ ಹಠಕ್ಕೆ ಬಿದ್ದ ಮಗಳನ್ನೇ ಹೆತ್ತವರು ಕ್ರೂರವಾಗಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ನಡೆದಿದೆ. ಕುಟುಂಬದ ಮರ್ಯಾದೆ ಉಳಿಸಿಕೊಳ್ಳಲು ಮಗಳಿಗೆ ವಿಷ ಕುಡಿಸಿ ಕೊಂದು, ಸಾಕ್ಷಿ ನಾಶಪಡಿಸಲು ಗಂಟೆಗಳಲ್ಲೇ ಮೃತದೇಹವನ್ನು ಸುಟ್ಟು ಹಾಕಿರುವ ಘೋರ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ಹಿನ್ನೆಲೆ: ಮೃತ ಸತ್ಯವ್ವ ಹಾಗೂ ಹುಕ್ಕೇರಿ ತಾಲೂಕಿನ ನದಿಗುಡಿ ಕ್ಷೇತ್ರದ ಕೃಷ್ಣಾ ಪಾಟೀಲ ಎಂಬುವವರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ನಾಲ್ಕು ವರ್ಷಗಳ ಹಿಂದೆ…
-

ಗುಂಡು ಹಾರಿಸಿ ರಿಯಲ್ ಎಸ್ಟೇಟ್ ಉದ್ಯಮಿಯ ಭೀಕರ ಹತ್ಯೆ!
ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಕೊಲೆಗೈದ ಘಟನೆ ನಗರದ ಹೊರವಲಯ ಅಲಿಯಾಬಾದ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ನಡೆದಿದೆ.ರಾಜು ಕರೆ (48) ಕೊಲೆಯಾದ ದುರ್ದೈವಿ. ಸಂಜೆ 4:30ರ ಸುಮಾರು ಘಟನೆ ನಡೆದಿದೆ. ರಸ್ತೆಯನ್ನು ಗಮನಿಸಿದರೆ ಎರಡು ವಾಹನಗಳು ದಾಟುವುದು ಕಷ್ಟ. ರಾಜು ತಮ್ಮ ಥಾರ್ ವಾಹನದಲ್ಲಿ ಬರುತ್ತಿರುವುದನ್ನು ಗಮನಿಸಿಯೇ ದುಷ್ಕರ್ಮಿಗಳು ಟಿಪ್ಪರ್ ಮೂಲಕ ಬಂದು ಡಿಕ್ಕಿ ಹೊಡೆದು ಮೊದಲು ಅಪಘಾತ ಮಾಡಿದ್ದಾರೆ. ಬಳಿಕ ಜೀಪ್ ಡೋರ್ ಓಪನ್ ಆಗದ್ದಕ್ಕೆ ಜೀಪಿನ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ.…
-

14 ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಂದು, ತಾಯಿ ಆತ್ಮ*ಹ*ತ್ಯೆಗೆ ಶರಣು
14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘೋರ ದುರಂತ ಸಂಭವಿಸಿದೆ. ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ಇಮ್ಮಡಿ ಹಳ್ಳಿಯ ಮನೆಯಲ್ಲಿ ಮನೆಯಲ್ಲಿ ಈ ಒಂದು ಘಟನೆ ನಡೆದಿದೆ. ಕಾರುಣ್ಯ (14) ವರ್ಷದ ಮಗಳನ್ನು ಉಸಿರುಗಟ್ಟಿಸಿ ತಾಯಿ ಕೊಲೆ ಮಾಡಿದ್ದಾರೆ. ಬಳಿಕ ತಾಯಿ ಸುವರ್ಣ (40) ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ ಸುವರ್ಣ ಅವರ ಅತ್ತೆ ಮಾವ ಮನೆಯಲ್ಲಿ ಇದ್ದರು ಈ ವೇಳೆ ಕೋಣೆಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಒಂದು ಘಟನೆ ನಡೆದಿದೆ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











