Category: ರಾಜ್ಯ
-

50 ಸಾವಿರ ರೂ.ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ
ಭೂಮಿ ಸರ್ವೆ ಕಾರ್ಯಕ್ಕೆ ಸಂಬಂಧಿಸಿದಂತೆ ವೈದ್ಯರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ (RI) ಚಂದ್ರಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಶನಿವಾರ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಘಟನೆಯ ವಿವರ: ದಾವಣಗೆರೆ ಜಿಲ್ಲೆಯ ಕಂದಾಯ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಚಂದ್ರಪ್ಪ ಅವರು, ಭೂಮಿಯ ಸರ್ವೆ ಕೆಲಸ ಮಾಡಿಕೊಡಲು ವೈದ್ಯರೊಬ್ಬರಿಂದ 50,000 ರೂ. ಹಣಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಲಂಚ ನೀಡಲು ಇಚ್ಛಿಸದ ವೈದ್ಯರು ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲೋಕಾಯುಕ್ತ ಕಾರ್ಯಾಚರಣೆ: ದೂರಿನ ಅನ್ವಯ ಇಂದು ವೈದ್ಯರಿಂದ 50 ಸಾವಿರ ರೂ.…
-

ಹಾಡಹಗಲೇ ಚಾಕು ಇರಿದು ಯುವಕನ ಬರ್ಬರ ಹತ್ಯೆ!
ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ಜೆಸಿ ನಗರದ ಮುಖ್ಯ ರಸ್ತೆಯಲ್ಲಿ ವಿಜಯ್ (22) ಎನ್ನುವ ಕನನ್ನು ಚಾಕು ಇರಿದು ಕೊಲೆ ಮಾಡಲಾಗಿದೆ. ಇಂದು ಮಧ್ಯಾಹ್ನ ಈ ಒಂದು ಘಟನೆ ನಡೆದಿದ್ದು ಜೆಸಿ ನಗರದ ಮುಖ್ಯ ರಸ್ತೆಯಲ್ಲಿ ವಿಜಯಗೆ ಚಾಕು ಇರಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಯುವಕ ವಿಜಯ್ ಗೆ ಕಿರಣ ಮತ್ತು ವಿನೋದ್ ಎಂಬವರು ಚಾಕು ಇರಿದು ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
-

ಟ್ರೆಕ್ಕಿಂಗ್‌ಗೆ ತೆರಳಿದ್ದ ಕೇರಳದ ಯುವತಿ ಮಡಿಕೇರಿಯಲ್ಲಿ ನಾಪತ್ತೆ: 4 ತಂಡಗಳಿಂದ ಶೋಧ ಕಾರ್ಯ
ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ ಕೇರಳ ಮೂಲದ ಯುವತಿ ನಾಪತ್ತೆಯಾಗಿದ್ದಾಳೆ. ದಟ್ಟ ಮಳೆಮೋಡ, ಕಡಿದಾದ ಹಾದಿ ಮತ್ತು ಕಾಡಾನೆಗಳ ಹಾವಳಿಯ ಮಧ್ಯೆ ಪೊಲೀಸರು, ಅರಣ್ಯ ಇಲಾಖೆ ಹಾಗೂ ಶ್ವಾನ ದಳದ ನಾಲ್ಕು ತಂಡಗಳು ಆಕೆಯ ಪತ್ತೆಗೆ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಅವರ ಸುರಕ್ಷಿತ ಮರಳುವಿಕೆಗೆ ಸ್ಥಳೀಯರು ದೇವರ ಮೊರೆ ಹೋಗಿದ್ದು, ಹರಕೆಯನ್ನೂ ಹೊತ್ತಿದ್ದಾರೆ. ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವತಿ ನಾಪತ್ತೆಯಾಗಿರುವ ಘಟನೆ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದಲ್ಲಿ ನಡೆದಿದೆ. ಕೇರಳ ಮೂಲದ ಯುವತಿ ಶರಣ್ಯ ಜಿ.ಎಸ್.…
-

ಲಂಚ ಪಡೆದಿದ್ದ ಅಧಿಕಾರಿಗೆ ಜೈಲು ಶಿಕ್ಷೆ: ನ್ಯಾಯಾಲಯದ ಮಹತ್ವದ ತೀರ್ಪು
ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮಾಜಿ ಜಿಲ್ಲಾ ವ್ಯವಸ್ಥಾಪಕರಿಗೆ ಶಿವಮೊಗ್ಗ ಇಲ್ಲಿನ ನ್ಯಾಯಾಲಯವು ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶಿಸಿದೆ. ಪ್ರಕರಣದ ಹಿನ್ನೆಲೆ: ಕೆಲವು ವರ್ಷಗಳ ಹಿಂದೆ, ಫಲಾನುಭವಿಯೊಬ್ಬರಿಗೆ ಸಾಲ ಮಂಜೂರು ಮಾಡುವ ಪ್ರಕ್ರಿಯೆಯಲ್ಲಿ ಆರೋಪಿ ಅಧಿಕಾರಿಯು ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಬಗ್ಗೆ ದೂರು ಸ್ವೀಕರಿಸಿದ್ದ ಲೋಕಾಯುಕ್ತ ಪೊಲೀಸರು, ಲಂಚದ ಹಣವನ್ನು ಪಡೆಯುತ್ತಿದ್ದಾಗಲೇ ಅಧಿಕಾರಿಯನ್ನು ಕೆಂಗೆಣ್ಣಾಗಿ ಬಂಧಿಸಿದ್ದರು. ಅಂದಿನಿಂದ ಈ ಪ್ರಕರಣದ ವಿಚಾರಣೆ ಶಿವಮೊಗ್ಗದ ವಿಶೇಷ…
-

ಸೌಜನ್ಯ ಕೊಲೆ ಪ್ರಕರಣ: ಯೂಟ್ಯೂಬರ್ ಸಮೀರ್ ಮೊಹಮ್ಮದ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಅಪ್‌ಲೋಡ್ ಮಾಡಿದ್ದ ಯೂಟ್ಯೂಬರ್ ಸಮೀರ್ ಮೊಹಮ್ಮದ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಪ್ರಕರಣದ ಹಿನ್ನೆಲೆ: ಧರ್ಮಸ್ಥಳದ ನೇತ್ರಾವತಿ ನದಿ ದಡದಲ್ಲಿ ಶವಗಳನ್ನು ಹೂಳಲಾಗುತ್ತಿದೆ ಎಂಬ ಗಂಭೀರ ಆರೋಪಗಳನ್ನು ಒಳಗೊಂಡ ವಿಡಿಯೋವೊಂದನ್ನು ಸಮೀರ್ ಮೊಹಮ್ಮದ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮತ್ತು ದೇವಸ್ಥಾನದ ಘನತೆಗೆ ಧಕ್ಕೆ ತರುವಂತಿದೆ ಎಂದು ಆರೋಪಿಸಿ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.…
-

ಇನ್ಮುಂದೆ ಪೊಲೀಸರು ವಾಟ್ಸಪ್, ಸೋಷಿಯಲ್ ಮೀಡಿಯಾ ಮೂಲಕ ನೋಟಿಸ್, FIR ನೀಡುವಂತಿಲ್ಲ : ಹೈಕೋರ್ಟ್ ಸ್ಪಷ್ಟನೆ
ಇನ್ಮುಂದೆ ಪೊಲೀಸರು ನೋಟಿಸ್ ಅಥವಾ ಎಫ್‌ಐಆರ್ ಪ್ರತಿಯನ್ನು ವಾಟ್ಸ್ಆ್ಯಪ್ ಅಥವಾ ಇತರೆ ವಿದ್ಯುನ್ಮಾನ ಮಾಧ್ಯಮಗಳ ಮೂಲಕ ನೀಡುವಂತಿಲ್ಲ, ಬದಲಾಗಿ ಭೌತಿಕವಾಗಿಯೇ ನೀಡಬೇಕು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಹೌದು ಏಳು ವರ್ಷಕ್ಕಿಂತ ಕಡಿಮೆ ಅವಧಿಯ ಶಿಕ್ಷೆ ವಿಧಿಸಬಹುದಾದ ಪ್ರಕರಣಗಳಲ್ಲಿ ಆರೋಪಿಯನ್ನು ಬಂಧಿಸುವ ಮುನ್ನ ನೋಟಿಸ್ ನೀಡುವುದು ಕಡ್ಡಾಯವಿದ್ದರೂ ಆರೋಪಿ ಉದ್ದೇಶಪೂರ್ವಕವಾಗಿ ಪೊಲೀಸ್ ನೋಟಿಸ್ ಸ್ವೀಕರಿಸದೆ ತಲೆಮರೆಸಿಕೊಂಡು ತನಿಖೆಗೆ ಅಸಹಕಾರ ತೋರಿದ ಸಂದರ್ಭದಲ್ಲಿ ನೇರವಾಗಿ ಬಂಧಿಸಬಹುದಾಗಿದೆ ಎಂದು ಹೇಳಿದೆ. ಹೂಡಿಕೆದಾರರಿಗೆ ಲಕ್ಷಾಂತರ ಹಣ ವಂಚಿಸಿದ ಪ್ರಕರಣದಲ್ಲಿ ತನಿಖೆಗೆ ಸಹಕರಿಸದೆ 40…
-

ನೇಣು ಬಿಗಿದುಕೊಂಡ ಗಂಡನ ಮೃತದೇಹ ನೋಡಿ ಪತ್ನಿ17ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಭಾನು ಚಂದ್ರ ರೆಡ್ಡಿ ಹಾಗೂ ಸಾಜಿಯಾ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಮೊದಲಿಗೆ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಂಡನ ಮೃತದೇಹ ಕಂಡು ಪತ್ನಿ ಸಹ ಅಪಾರ್ಟ್‌ಮೆಂಟ್‌ನ 17ನೇ ಫ್ಲೋರ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಡ – ಹೆಂಡತಿ ಇಬ್ಬರೂ ಖಾಸಗಿ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. ಇಬ್ಬರ ನಡುವೆ ಅನೇಕ ಬಾರಿ ಕಲಹಗಳಾಗಿದೆ.…
-

ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್ ಎಂದು ಕರೆದ ಪ್ರೊಫೆಸರ್
ಬೆಂಗಳೂರು: ನಗರದ ಪ್ರತಿಷ್ಠಿತ PES ವಿಶ್ವವಿದ್ಯಾಲಯದ ಪ್ರೊಫೆಸರ್ ಒಬ್ಬರು ತರಗತಿಯಲ್ಲಿದ್ದ ಮುಸ್ಲಿಂ ವಿದ್ಯಾರ್ಥಿಯೊಬ್ಬನಿಗೆ ‘ಭಯೋತ್ಪಾದಕ’ (Terrorist) ಎಂದು ನಿಂದಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ವಿವಾದದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ವಿಶ್ವವಿದ್ಯಾಲಯ ಆಡಳಿತ ಮಂಡಳಿಯು ಪ್ರೊಫೆಸರ್ ಅವರನ್ನು ಅಮಾನತುಗೊಳಿಸಿದೆ. ಏನಿದು ಘಟನೆ? ಮಾಹಿತಿಯ ಪ್ರಕಾರ, ವಿದ್ಯಾರ್ಥಿ ಅಫ್ಫಾನ್ ತರಗತಿಯ ನಡುವೆ ಹೊರಗೆ ಹೋಗಲು ಅನುಮತಿ ಕೇಳಿದ್ದನು. ಇದರಿಂದ ಆಕ್ರೋಶಗೊಂಡ ಪ್ರೊಫೆಸರ್ ಡಾ. ಮುರಳೀಧರ್ ದೇಶಪಾಂಡೆ, ವಿದ್ಯಾರ್ಥಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ಆತನ…
-

ಸಣ್ಣಪುಟ್ಟ ಗಲಾಟೆಗಳಿಗೆಲ್ಲಾ 498A ಕೇಸ್ ಹಾಕುವಂತಿಲ್ಲ: ಅತ್ತೆ-ಮಾವಂದಿರ ವಿರುದ್ಧದ FIR ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: ವೈವಾಹಿಕ ಜೀವನದಲ್ಲಿ ಉಂಟಾಗುವ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಮತ್ತು ದೈನಂದಿನ ಜೀವನದ ಸಾಮಾನ್ಯ ಘರ್ಷಣೆಗಳನ್ನು ‘ವರದಕ್ಷಿಣೆ ಕಿರುಕುಳ’ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಕರ್ನಾಟಕ ಹೈಕೋರ್ಟ್, ಮಹಿಳೆಯೊಬ್ಬರು ತನ್ನ ಅತ್ತೆ-ಮಾವ ಹಾಗೂ ಮೈದುನನ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ರದ್ದುಗೊಳಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಮಹತ್ವದ ತೀರ್ಪು ನೀಡಿದ್ದು, “ಐಪಿಸಿ ಸೆಕ್ಷನ್ 498A (ವರದಕ್ಷಿಣೆ ಕಿರುಕುಳ) ಎಂಬುದು ದಾಂಪತ್ಯದ ಎಲ್ಲಾ ಸಮಸ್ಯೆಗಳಿಗೂ ರಾಮಬಾಣವಲ್ಲ” ಎಂದು ಮಾರ್ಮಿಕವಾಗಿ ನುಡಿದಿದೆ. ಪ್ರಕರಣದ ಹಿನ್ನೆಲೆ ಏನು? ದೂರುದಾರೆ ಮಹಿಳೆ…
-

ಬಿಟ್‌ಕಾಯಿನ್ ಹೂಡಿಕೆ ನೆಪದಲ್ಲಿ ₹17 ಲಕ್ಷ ವಂಚನೆ: ಪ್ರಕರಣ ದಾಖಲು!!
ಕುಂದಾಪುರ :ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ಭಾರೀ ವಂಚನೆ ನಡೆದ ಘಟನೆ ಕುಂದಾಪುರದಲ್ಲಿ ಬೆಳಕಿಗೆ ಬಂದಿದೆ. ಹಾಲಾಡಿ ಗ್ರಾಮದ 43 ವರ್ಷದ ಯಶೋಧ ಅವರು ನೀಡಿದ ದೂರಿನ ಪ್ರಕಾರ, ಅಂಕದಕಟ್ಟೆಯ ಚಂದ್ರಿಕಾ (38) ಮತ್ತು ಶಿವಮೊಗ್ಗದ ಭಾಸ್ಕರ (45) ಇವರಿಬ್ಬರು ಬಿಟ್‌ಕಾಯಿನ್ ಹೂಡಿಕೆ ಮೂಲಕ ಹಣವನ್ನು ದ್ವಿಗುಣಗೊಳಿಸುವುದಾಗಿ ನಂಬಿಕೆ ಮೂಡಿಸಿದ್ದರು. ಬೈಂದೂರಿನ ಪ್ರದೀಪ್ ಶೆಟ್ಟಿ ಮೂಲಕ ಸಂಪರ್ಕ ಸಾಧಿಸಿ, ಕೋಟೇಶ್ವರ ಗ್ರಾಮದ ಅಂಕದಕಟ್ಟೆ ಸಹನಾ ಹಾಲ್ ಸಮೀಪ ಇರುವ ಕಚೇರಿಗೆ ಹಣ ತರಲು ಸೂಚಿಸಿದ್ದರು. ದೂರಿನ ಪ್ರಕಾರ, ಕಚೇರಿಗೆ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











