Category: ರಾಜ್ಯ
-

ಮೇಲಾಧಿಕಾರಿಗಳಿಂದ ಕಿರುಕುಳ ಆರೋಪ – ವಿಡಿಯೋ ಮಾಡಿಟ್ಟು ಕಚೇರಿಯಲ್ಲೇ ನೇಣಿಗೆ ಶರಣಾದ ಅಧಿಕಾರಿ
ತುಮಕೂರು: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಪಾವಗಡದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ವೀಡಿಯೋ ಮಾಡಿ ಸಹೋದ್ಯೋಗಿಗಳಿಗೆ ಕಳಿಸಿ ಕಚೇರಿಯಲ್ಲೇ ನೇಣಿಗೆ ಶರಣಾಗಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಆತ್ಮಹತ್ಯೆಗೆ ಶರಣಾದವರು. ಸಾವಿಗೂ ಮುನ್ನ ಮೇಲಾಧಿಕಾರಿಗಳ ಕಿರುಕುಳವೇ ಸಾವಿಗೆ ಕಾರಣವೆಂದು ವೀಡಿಯೋ ಮಾಡಿ, ಸಹೊದ್ಯೋಗಿಗಳಿಗೆ ಕಳಿಸಿದ್ದಾರೆ. ಬಳಿಕ ಪಾವಗಡ ಪಟ್ಟಣದ ಆಪ್ ಬಂಡೆಯಲ್ಲಿರುವ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೀಡಿಯೋದಲ್ಲಿ ತುಮಕೂರು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಅವರ ವಿರುದ್ಧ ಕಿರುಕುಳದ…
-

ತಾಲ್ಲೂಕು ಕಚೇರಿಯಲ್ಲೇ ನಕಲಿ ದಾಖಲೆ ಸೃಷ್ಠಿ ಜಾಲ ಪತ್ತೆ..!! ಆರು ಮಂದಿ ವಿರುದ್ಧ FIR ದಾಖಲು
ರಾಜ್ಯದಲ್ಲಿ ತಾಲ್ಲೂಕು ಕಚೇರಿಯಲ್ಲೇ ನಕಲಿ ದಾಖಲೆ ಸೃಷ್ಠಿ ಮಾಡುತ್ತಿದ್ದಂತ ಜಾಲವೊಂದು ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಕಛೇರಿಯಲ್ಲಿ ಭೂ ಸುರಕ್ಷಾ ಯೋಜನೆಯಡಿ ನಡೆಯುತ್ತಿರುವ ಕಂದಾಯ ದಾಖಲೆಗಳ ಗಣಕೀಕರಣ ಕಾರ್ಯದಲ್ಲಿ ನಕಲಿ ದಾಖಲೆಗಳನ್ನು ಸೇರಿಸಲು ಯತ್ನಿಸಿದ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಸಂಬಂಧ ತಹಶೀಲ್ದಾರ್ ರಶ್ಮಿ ಅವರು ನೀಡಿದ ದೂರಿನ ಮೇರೆಗೆ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದ ಹಿನ್ನೆಲೆ: ದಿನಾಂಕ 18-03-2026 ರಂದು ಮಧ್ಯಾಹ್ನ ತಾಲೂಕು ಕಛೇರಿಯಲ್ಲಿ ಗಣಕೀಕರಣ ಕಾರ್ಯ…
-

ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕೆ 35,000 ಲಂಚಕ್ಕೆ ಬೇಡಿಕೆ !! ಡ್ರಗ್ಸ್ ಕಂಟ್ರೋಲರ್ ಲೋಕಾಯುಕ್ತ ಬಲೆಗೆ
ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕೆ 35,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೋಲಾರ ಸಹಾಯಕ ಡ್ರಗ್ಸ್ ಕಂಟ್ರೋಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸರು ಘಟನೆ ಸಂಬಂಧ ಸಹಾಯಕ ಔಷಧ ನಿಯಂತ್ರಕರಾದ ಶ್ಯಾಮಲಾ, ವಾಹನ ಚಾಲಕ ಮಹಂತೇಶ್ ಮತ್ತು ನಿವೃತ್ತ ಡಿ ಗ್ರೂಪ್ ನೌಕರ ಶ್ರೀನಿವಾಸನನ್ನು ಬಂಧಿಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಲಂಚದ ಹಣ ಬಿಸಾಡಿ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದರು. ಆದರೆ ಅವರನ್ನು ಬೆನ್ನಟ್ಟಿ ಲೋಕಾಯುಕ್ತ ಅಧಿಕಾರಿಗಳು ಹಿಡಿದಿದ್ದಾರೆ. ದಲಿತ ಮುಖಂಡ ಹೂಹಳ್ಳಿ ಪ್ರಕಾಶ್ ಹಾಗೂ ಕೃಷ್ಣಯ್ಯ ಎಂಬುವವರು…
-

ವೃದ್ಧನನ್ನು ಮಂಗಳೂರಿಗೆ ಕೊರಿಯರ್ ಮೂಲಕ ಪಾರ್ಸಲ್ ಮಾಡಲು ಮುಂದಾದ ತಂಡ!
ಬೆಂಗಳೂರು: ರೀಲ್ಸ್ ಮಾಡುವುದಕ್ಕೆ ಜೀವಂತ ವ್ಯಕ್ತಿಯನ್ನು ಚೀಲದಲ್ಲಿ ತುಂಬಿಸಿ ಕೊರಿಯರ್ ಮಾಡಲು ಬಂದ ಕೊರಿಯರ್ ಆಫೀಸ್‌ಗೆ ತಂಡವೊಂದು ಬಂದ ಘಟನೆ ಬೆಂಗಳೂರಿನಲ್ಲಿ ನಿನ್ನೆ ಸಂಭವಿಸಿದೆ. ಮಂಗಳೂರಿಗೆ ಕೊರಿಯರ್ ಪಾರ್ಸೆಲ್ ಮಾಡುವ ನೆಪದಲ್ಲಿ ಈ ತಂಡ ವೈಯಾಲಿಕಾವಲ್‌ನಲ್ಲಿರುವ ಕೊರಿಯರ್ ಆಫೀಸ್‌ಗೆ ಬಂದಿದೆ. ಸಂಜೆ 4.30ರ ಸುಮಾರಿಗೆ ಬಿಳಿಬಣ್ಣದ ಭಾರವಾದ ಗೋಣಿಚೀಲದ ಮೂಟೆಯೊಂದಿಗೆ ನಾಲ್ವರು ವೈಯಾಲಿಕಾವಲ್‌ನಲ್ಲಿರುವ ಕೊರಿಯರ್ ಆಫೀಸ್‌ಗೆ ಬಂದು ಇದನ್ನು ಮಂಗಳೂರಿಗೆ ಕಳುಹಿಸಬೇಕೆಂದು ಕೊರಿಯರ್ ಸಿಬ್ಬಂದಿಗೆ ಹೇಳಿದ್ದಾರೆ. ಮೂಟೆ ಅಲುಗಾಡ್ತಿರೋದು ನೋಡಿ ಕೊರಿಯರ್ ಕಚೇರಿಯಲ್ಲಿದ್ದ ಇಬ್ಬರು ಮಹಿಳಾ ಸಿಬ್ಬಂದಿ…
-

ಲೇಔಟ್ ಹೆಸರಲ್ಲಿ ಮರಗಳ ಮಾರಣಹೋಮ..!!
ಹಸಿರು ವಲಯದಲ್ಲಿದ್ದಂತ ಭೂಮಿಯನ್ನು ವಾಣಿಜ್ಯ ವಲಯವಾಗಿ ಬದಲಾವಣೆ ಮಾಡೋದಕ್ಕೆ ಅದರಲ್ಲಿ ಇರೋದು ಏನು ಅನ್ನೋದನ್ನು ಸಂಬಂಧ ಪಟ್ಟಂತ ಸ್ಥಳೀಯ ಆಡಳಿತ, ತಾಲ್ಲೂಕು ಹಾಗೂ ಜಿಲ್ಲಾ ಆಡಳಿತ ಗಮನಿಸಿ ಅನುಮತಿ ನೀಡಬೇಕು. ಆದರೇ ಕಾಡಂತಿದ್ದ ಖಾಸಗಿ ಭೂಮಿಯನ್ನು ವಾಣಿಜ್ಯ ಬಳಕೆಗೆ ಭೂ ಪರಿವರ್ತನೆ ವೇಳೆಯಲ್ಲಿ ಅದನ್ನೇ ಮರೆತ ಅಧಿಕಾರಿಗಳು ಮಾತ್ರ ಅನುಮತಿಸಿದ್ದರ ಪರಿಣಾಮ ಸಾಗರದ ಲಿಂಗದಹಳ್ಳಿ ಬಳಿಯಲ್ಲಿ ಲೇಔಟ್ ಹೆಸರಲ್ಲಿ ಮರಗಳ ಮಾರಣಹೋಮವೇ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಲಿಂಗದಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ಎದುರಲ್ಲಿನ ಸರ್ವೆ ನಂಬರ್…
-

ಹೋಟೆಲ್, ಟೀ ಅಂಗಡಿಯಲ್ಲಿ ಮನೆ ಗ್ಯಾಸ್ ಬಳಸುವವರೇ ಎಚ್ಚರ : ರಾಜ್ಯಾದ್ಯಂತ `ಅಗತ್ಯ ವಸ್ತುಗಳ ಕಾಯ್ದೆ ಅಡಿ’ 316 ಕೇಸ್ ದಾಖಲು
ಬೆಂಗಳೂರು: ನೀವು ಹೋಟೆಲ್, ಕೆಫೆ ಅಥವಾ ಟೀ ಅಂಗಡಿ ನಡೆಸುತ್ತಿದ್ದೀರಾ? ಲಾಭದ ಆಸೆಗೆ ಬಿದ್ದು ಗೃಹಬಳಕೆಯ (Domestic) ಗ್ಯಾಸ್ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದರೆ ಎಚ್ಚರ! ರಾಜ್ಯದಾದ್ಯಂತ ಆಹಾರ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿ ನೂರಾರು ಪ್ರಕರಣಗಳನ್ನು ದಾಖಲಿಸಿದ್ದಾರೆ. 316 ಪ್ರಕರಣ ದಾಖಲು, ಸಾವಿರಾರು ಸಿಲಿಂಡರ್ ವಶ ವಾಣಿಜ್ಯ ಉದ್ದೇಶಕ್ಕೆ ಕಡಿಮೆ ಬೆಲೆಯ ಗೃಹಬಳಕೆ ಸಿಲಿಂಡರ್ ಬಳಸುತ್ತಿದ್ದ ಹೋಟೆಲ್‌ಗಳ ಮೇಲೆ ಅಧಿಕಾರಿಗಳು ಗದಾಪ್ರಹಾರ ನಡೆಸಿದ್ದಾರೆ. ಅಗತ್ಯ ವಸ್ತುಗಳ ಕಾಯ್ದೆ ಅಡಿ…
-

ಜಿಲ್ಲಾಧಿಕಾರಿ, ಎಡಿಸಿ ಸಹಿ ಫೋರ್ಜರಿ : 15 ಲಕ್ಷ ರೂ. ನಕಲಿ ಬಿಲ್ ಸೃಷ್ಟಿಸಿದ್ದ ಐವರು ಆರೋಪಿಗಳು ಅರೆಸ್ಟ್
ರಾಜ್ಯದಲ್ಲಿ ಮತ್ತೊಂದು ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು, ಜಿಲ್ಲಾಧಿಕಾರಿ ಹಾಗೂ ಎಡಿಸಿಯವರ ಡಿಜಿಟಲ್ ಸಹಿ ದುರುಪಯೋಗಪಡಿಸಿಕೊಂಡು 15 ಲಕ್ಷ ರೂ. ಮೌಲ್ಯದ ನಕಲಿ ಬಿಲ್ ಸೃಷ್ಟಿಸಿದ್ದ ಐವರು ನೌಕರರನ್ನು ಬಂಧಿಸಿರುವ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ವಿಭಾಗದಲ್ಲಿ ಹೊರಗುತ್ತಿಗೆ ನೌಕರ ಸೈಯದ್ ಸಾದಿಕ್, ವಿನಯ್ ಶರ್ಮಾ, ವಿಜಯ್ ಕುಮಾರ್, ಬಸವರಾಜ, ಮಹೆಬೂಬ್ ಭಾಷಾ ಹಾಗೂ ವೆಂಕಟೇಶ್ ಎಂಬ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಎ1 ಆರೋಪಿ ಸೈಯದ್ ಪರಾರಿಯಾಗಿದ್ದು, ಇನ್ನುಳಿದ ಐವರನ್ನು ಬಂಧಿಸಿದ್ದಾರೆ.…
-

ಒಳ ಉಡುಪಿನಲ್ಲಿಟ್ಟು ಕೈದಿಗಳಿಗೆ ಗಾಂಜಾ ಸಾಗಿಸುತ್ತಿದ್ದ ವಾರ್ಡನ್ ಅರೆಸ್ಟ್!!
ಹಲವು ತಿಂಗಳುಗಳಿಂದ ಒಂದಲ್ಲಾ ಅಕ್ರಮಗಳಿಂದ ಒಂದು ರೀತಿಯ ಸುದ್ದಿಯಾಗುತ್ತಿರುವ ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಗಾಂಜಾ ಅಕ್ರಮ ಸಾಗಾಟದ ಪ್ರಕರಣ ಬೆಳಕಿಗೆ ಬಂದಿದೆ. ಜೈಲಿನಲ್ಲಿರುವ ಆರೋಪಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಜೈಲು ವಾರ್ಡನ್ ಪ್ರಕಾಶ್ ಗಾವಡೆ ಅವರನ್ನು ಬಂಧಿಸಲಾಗಿದೆ. ಮಾರ್ಚ್ 9 ರಂದು ರಾತ್ರಿ ಸುಮಾರು 8.15ರ ಸುಮಾರಿಗೆ ಈ ಘಟನೆ ನಡೆದಿದೆ. ಆ ದಿನ ನಿಯೋಜನೆಗೊಂಡಿದ್ದ ವಾರ್ಡನ್ ಪ್ರಕಾಶ್ ಗಾವಡೆ ಜೈಲಿನೊಳಗೆ ಪ್ರವೇಶಿಸುವ ವೇಳೆ ತಪಾಸಣೆ ವಿಭಾಗ-2ರಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿ…
-

ಇನ್ಮುಂದೆ ಪೊಲೀಸ್ ಅಧಿಕಾರಿಗಳು MLA, MLC, MP ನಂಬರ್ ಹೊಂದಿರೋದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ
ರಾಜ್ಯದ ಎಲ್ಲಾ ಹಂತದ ಪೊಲೀಸ್ ಅಧಿಕಾರಿಗಳು ಇನ್ಮುಂದೆ ಜನಪ್ರತಿನಿಧಿಗಳ ಕರೆಗಳನ್ನು ಕಡ್ಡಾಯವಾಗಿ ಸ್ವೀಕರಿಸಬೇಕು ಹಾಗೂ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಪೊಲೀಸ್ ಮಹಾನಿರ್ದೇಶಕರು (DGP) ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಇತ್ತೀಚೆಗೆ ನಡೆದ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆಯು ಈ ಮಹತ್ವದ ಸುತ್ತೋಲೆಯನ್ನು ಹೊರಡಿಸಿದೆ. ಇದರ ಪ್ರಮುಖ ಅಂಶಗಳು ಈ ಕೆಳಗಿನಂತಿವೆ: ಸುತ್ತೋಲೆಯಲ್ಲಿ ಏನಿದೆ ? ಸಂಪರ್ಕ ಸಂಖ್ಯೆ ಇಟ್ಟುಕೊಳ್ಳುವುದು ಕಡ್ಡಾಯ: ಎಲ್ಲಾ ಹಿರಿಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ವಿಧಾನಸಭಾ ಸದಸ್ಯರು (MLA), ವಿಧಾನ ಪರಿಷತ್ ಸದಸ್ಯರು (MLC),…
-

2 ವರ್ಷದ ಮಗುವಿನ ಕತ್ತು ಹಿಸುಕಿ, ದಂಪತಿ ಆತ್ಮ*ಹ*ತ್ಯೆ..!! ಅದೃಷ್ಟವಶಾತ್ ಮಗು ಬಚಾವ್
ರಾಜ್ಯದಲ್ಲಿ ಇಂದು ಘೋರವಾದ ಘಟನೆಯ ಒಂದು ಸಂಭವಿಸಿದ್ದು, ಎರಡು ವರ್ಷದ ಮಗುವಿನ ಕತ್ತು ಹಿಸುಕಿ ದಂಪತಿಗಳು ನೇಣಿಗೆ ಶರಣಾಗಿರುವ ಘಟನೆ , ಮಂಡ್ಯ ಜಿಲ್ಲೆಯ ಕೆಆರ್ ಪೇಟೆಯ ಜಯನಗರದ ಮನೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಮಗು ಬದುಕುಳಿದಿದೆ ಎಂದು ತಿಳಿದುಬಂದಿದೆ. ಕಳೆದ ಮೂರು ವರ್ಷದ ಹಿಂದೆ ದರ್ಶನ್ ಮತ್ತು ದಿವ್ಯಶ್ರೀ ಎಂಬುವವರು ವಿವಾಹವಾಗಿದ್ದರು. ಘಟನೆ ಕುರಿತು ಕೆಆರ್ ಪೇಟೆ ಟೌನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದಂಪತಿ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಕುರಿತು ಕೆಆರ್…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











