Category: ರಾಜ್ಯ
-

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆಯಾದರೆ ವೈದ್ಯಾಧಿಕಾರಿಗಳೇ ಹೊಣೆ : ಆರೋಗ್ಯ ಇಲಾಖೆ ಖಡಕ್ ಎಚ್ಚರಿಕೆ
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಅಗತ್ಯವಿರುವ ಔಷಧಿಗಳ ಕೊರತೆಯಾಗದಂತೆ ನೋಡಿಕೊಳ್ಳಲು ಮತ್ತು ಖರೀದಿ ಪ್ರಕ್ರಿಯೆಯನ್ನು ವಿಳಂಬ ಮಾಡದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಇತ್ತೀಚೆಗೆ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು “ಸರ್ಕಾರ ಅಥವಾ ಇಲಾಖೆ ಸರಬರಾಜು ಮಾಡುವ ಔಷಧಿಗಳನ್ನು ಮಾತ್ರ ಬಳಸಬೇಕು, ಸ್ಥಳೀಯವಾಗಿ ಖರೀದಿ ಮಾಡಬಾರದು” ಎಂದು ತಿಳಿಸಿತ್ತು. ಆದರೆ, ಈ ಸೂಚನೆಯು ನಿಯಮಬಾಹಿರವಾಗಿದ್ದು, ಇದರಿಂದ ಸ್ಥಳೀಯವಾಗಿ ಔಷಧಿ ಕೊರತೆ ಉಂಟಾಗುವ ಸಾಧ್ಯತೆಯಿದೆ ಎಂದು ಇಲಾಖೆ ಅಭಿಪ್ರಾಯಪಟ್ಟಿದೆ. ಅನುದಾನದ…
-

ಬಿಡಿಎ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: 3 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ
ಬೆಂಗಳೂರು : ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದ ಮೇಲೆ ಬೆಂಗಳೂರು ಲೋಕಾಯುಕ್ತ ಪೊಲೀಸರು ಶನಿವಾರ ಸರ್ಕಾರಿ ಅಧಿಕಾರಿಯ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದು 3.08 ಕೋಟಿ ರೂ.ಮೌಲ್ಯದ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ. ಬಿಡಿಎ ವಲಯ ಅರಣ್ಯ ಅಧಿಕಾರಿ ಎ.ಎಲ್. ದಾಳೇಶ್ ಅವರ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಶನಿವಾರ ಬೆಳಗ್ಗೆ ದಾಳೇಶ್ ಅವರ ಮನೆ, ಕಚೇರಿ ಹಾಗೂ ಸಂಬಂಧಿಕರ ಮನೆಗಳು ಸೇರಿ ನಾಲ್ಕು ಕಡೆ ಏಕಕಾಲಕ್ಕೆ ದಾಳಿ…
-

ರಾಜ್ಯದಲ್ಲಿ ಸೈಬರ್ ಕ್ರೈಂ ತಡೆಗೆ, ಕಠಿಣ ಕಾನೂನು ರೂಪಿಸಿ ಕಡಿವಾಣ ಹಾಕಲು ಕ್ರಮ : ಜಿ.ಪರಮೇಶ್ವರ್
ಬೆಂಗಳೂರು : ಹಣಕಾಸು ವಂಚನೆ, ಮಾದಕ ವಸ್ತು ಮಾರಾಟ ಜಾಲ ಹಾಗೂ ದತ್ತಾಂಶ ಕಳವು ಸೇರಿ ಸೈಬರ್‌ಕೃತ್ಯಗಳನ್ನು ತಾಂತ್ರಿಕತೆ ಜೊತೆ ಕಠಿಣ ಕಾನೂನು ರೂಪಿಸಿ ಕಡಿವಾಣ ಹಾಕಬೇಕಿದೆ ಎಂದು ರಾಜ್ಯ ಗೃಹ ಮಂತ್ರಿ ಜಿ.ಪರಮೇಶ್ವರ್ ಹೇಳಿದರು.ಶನಿವಾರ ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ), ಸೈಬರ್‌ಅಪರಾಧ ತನಿಖಾ ತರಬೇತಿ ಮತ್ತು ಸಂಶೋಧನಾ ಕೇಂದ್ರ ಆಯೋಜಿಸಿದ್ದ 3ನೇ ವರ್ಷದ ‘ಸೈಬರ್‌ಅಪರಾಧ ತನಿಖಾ ಶೃಂಗಸಭೆ’ ಉದ್ಘಾಟಿಸಿ ಮಾತನಾಡಿದರು. ಸೈಬರ್‌ಅಪರಾಧ ಯಾವುದೇ ಭೌಗೋಳಿಕ ಪ್ರದೇಶಕ್ಕೆ ಸೀಮಿತವಾಗಿಲ್ಲ. ಇದು ಮಿತಿಯಿಲ್ಲದ, ತಂತ್ರಜ್ಞಾನ ಆಧಾರಿತ ಮತ್ತು…
-

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ- ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. 2026–27ನೇ ಸಾಲಿನ ಬಜೆಟ್ ಮಂಡನೆ ವೇಳೆ ಮಾತನಾಡಿದ ಅವರು, ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿಷೇಧಿಸಲಾಗುವುದು ಎಂದು ತಿಳಿಸಿದರು. ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲೆ-ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮಗಳು,…
-

ಶಿಕ್ಷಣ ಸಂಸ್ಥೆ, ಹಾಸ್ಟೆಲ್ ಗಳಲ್ಲಿ ಪೊಲೀಸರ ದಿಢೀರ್ ತಪಾಸಣೆ: 31 ವಿದ್ಯಾರ್ಥಿಗಳು ಡ್ರಗ್ಸ್ ಸೇವನೆ ದೃಢ
ಬೆಂಗಳೂರು: ಮಾದಕ ದ್ರವ್ಯ ಸೇವನೆ ಮುಕ್ತ ಸಮಾಜ ನಿರ್ಮಾಣದ ನಿಟ್ಟಿನಲ್ಲಿ ಬೆಂಗಳೂರು ಪಶ್ಚಿಮ ವಿಭಾಗದ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ನಗರದ 6 ಶಿಕ್ಷಣ ಸಂಸ್ಥೆಗಳು ಹಾಗೂ 2 ಹಾಸ್ಟೆಲ್‌ಗಳ ಮೇಲೆ ದಿಢೀರ್ ತಪಾಸಣೆ ನಡೆಸಿದ ಪೊಲೀಸರು, ಮಾದಕ ದ್ರವ್ಯ ಸೇವನೆ ಪತ್ತೆ ಹಚ್ಚುವ ಪರೀಕ್ಷೆ ನಡೆಸಿದ್ದಾರೆ. ಈ ವೇಳೆ ಶಾಕಿಂಗ್ ಮಾಹಿತಿ ಎನ್ನುವಂತೆ 31 ವಿದ್ಯಾರ್ಥಿಗಳು ಡ್ರಗ್ಸ್ ಸೇವಿಸಿರೋದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ಶಿಕ್ಷಣ ಸಂಸ್ಥೆಗಳು ಹಾಗೂ ಹಾಸ್ಟೆಲ್ ವ್ಯವಸ್ಥಾಪಕರ ಪೂರ್ವ ಅನುಮತಿಯೊಂದಿಗೆ ಪೊಲೀಸರು ಸುಮಾರು 1,200…
-

ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿಮುಟ್ಟಿಸಿದ್ದಾರೆ. ಬೆಂಗಳೂರಿನ 4 ಕಡೆ ಸೇರಿದಂತೆ ರಾಜ್ಯದ ಹಲವೆಡೆ ಇಂದು ಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ಕೆಆರ್‌ಐಡಿಎಲ್ ಚೀಫ್ ಎಂಜಿನಿಯರ್ ವಸಂತ್ ವಿ. ನಾಯಕ್, ಬಿಡಿಎ ವ್ಯಾಪ್ತಿಯ ಆರ್‌ಎಫ್‌ಒ ಡಾಲೇಶ್, ರೈತ ಸೇವಾ ಸಹಕಾರ ಸಂಘದ ಸಿಇಒ ಶಶಿಧರ್ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಯಾದಗಿರಿಯ ವಿದ್ಯುತ್ ಇಲಾಖೆಯ ಉಪ ವಿದ್ಯುತ್ ಪರಿವೀಕ್ಷಕ ವೀರೇಶ್ ಹಿರೇಮಠ, ಮಂಡ್ಯದ ಲೋಕೋಪಯೋಗಿ ಇಲಾಖೆಯ ಮಂಡ್ಯ ಉಪವಿಭಾಗದ ಎಎಇ ಎಸ್.ಸತೀಶ್, ಧಾರವಾಡದ ಹಿಂದುಳಿದ…
-

ವಿದ್ಯುತ್ ಬಿಲ್ ಕಲೆಕ್ಟರ್ ಸೋಗಿನಲ್ಲಿ ಹಣ ವಸೂಲಿ : ನಕಲಿ ಬಿಲ್ ಕಲೆಕ್ಟರ್ ಗೆ ಸಾರ್ವಜನಿಕರಿಂದ ಧರ್ಮದೇಟು
ವಿದ್ಯುತ್ ಬಿಲ್ ಕಲೆಕ್ಟರ್ ಎಂದು ಸುಳ್ಳು ಹೇಳಿ ಮನೆಮನೆಗೆ ತೆರಳಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ವಂಚಕನೊಬ್ಬ ಸಿಕ್ಕಿಬಿದ್ದಿರುವ ಘಟನೆ ನಗರದ ಆನಂದನಗರದಲ್ಲಿ ನಡೆದಿದೆ. ಸದ್ಯ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ನಡೆದಿದ್ದೇನು? ಆರೋಪಿಯು ಹೆಸ್ಕಾಂ (HESCOM) ಸಿಬ್ಬಂದಿಯಂತೆ ಸಮವಸ್ತ್ರ ಧರಿಸಿ, ತಾನು ವಿದ್ಯುತ್ ಬಿಲ್ ಕಲೆಕ್ಟರ್ ಎಂದು ಪರಿಚಯಿಸಿಕೊಳ್ಳುತ್ತಿದ್ದನು. ಮನೆಮನೆಗೆ ತೆರಳಿ ಕರೆಂಟ್ ಬಿಲ್ ಪಾವತಿಸುವಂತೆ ಹೇಳಿ, ಪ್ರತಿ ಮನೆಯಿಂದ ಅಂದಾಜು 1,000 ದಿಂದ 2,000 ರೂಪಾಯಿವರೆಗೆ ಹಣ ವಸೂಲಿ ಮಾಡುತ್ತಿದ್ದನು. ವಂಚಕನ ಕಾರ್ಯವೈಖರಿ…
-

ಕಾಡಾನೆ ದಾಳಿ : ಮಡಿಕೇರಿಯಲ್ಲಿ PU ವಿದ್ಯಾರ್ಥಿನಿ ಸಾವು
ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ ಎನ್ನುವಂತೆ ಮಡಿಕೇರಿಯಲ್ಲಿ ವಿದ್ಯಾರ್ಥಿನಿಯೊಬ್ಬರನ್ನು ಕಾಡಾನೆ ತುಳಿದು ಸಾಯಿಸಿದೆ. ಮಡಿಕೇರಿ ತಾಲ್ಲೂಕಿನ ಬೆಟ್ಟತೂರು ಗ್ರಾಮದಲ್ಲಿ ಗಿರೀಶ್ ಎಂಬುವರ ಪುತ್ರಿ ಪೂಜಾ(17) ಎಂಬ ವಿದ್ಯಾರ್ಥಿನಿಯನ್ನು ಕಾಡಾನೆ ಹತ್ಯೆ ಮಾಡಿದೆ. ಮೃತ ಪೂಜಾ ಮಡಿಕೇರಿಯ ಸಂತ ಮೈಕಲ್ ಶಾಲೆಯಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ನಿನ್ನೆ ಸಂಜೆ 5.30ಕ್ಕೆ ಕಾಲೇಜು ಮುಗಿಸಿಕೊಂಡು ಪೂಜಾ ತಮ್ಮ ಊರು ಬೆಟ್ಟತೂರಿಗೆ ಬಸ್ಸಿನಿಂದ ಬಂದಿಳಿದು, ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಏಕಾಏಕಿ ಕಾಡಾನೆ ಪೂಜಾ ಮಾಲೆ ದಾಳಿ…
-

ಜ್ಯೋತಿಷಿ ಮಾತು ನಂಬಿ ನೇಣು ಬಿಗಿದುಕೊಂಡ ಮದ್ವೆ ತಯಾರಿಯಲ್ಲಿದ್ದ ಯುವತಿ..!!
ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ಜ್ಯೋತಿಷಿಯೊಬ್ಬರ ಅಲ್ಪಾಯುಷಿ ಭವಿಷ್ಯವನ್ನು ನಂಬಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆಗೆ ಸಿದ್ಧತೆ ನಡೆಸುತ್ತಿದ್ದ 27 ವರ್ಷದ ವಿದ್ಯಾಜ್ಯೋತಿ, 9 ದಿನಗಳ ಪೂಜೆಯ ಕೊನೆಯ ದಿನದಂದು ಈ ದುರಂತ ನಿರ್ಧಾರ ತೆಗೆದುಕೊಂಡಿದ್ದಾರೆ. ಜ್ಯೋತಿಷಿಯೊಬ್ಬರ ಮಾತು ನಂಬಿ ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಬಾಗಲಗುಂಟೆಯ ಎಂಇಐ ಲೇಔಟ್‌ನಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. 27 ವರ್ಷದ ವಿದ್ಯಾಜ್ಯೋತಿ ಆತ್ಮ*ಹತ್ಯೆಗೆ ಶರಣಾದ ಮಹಿಳಾ ಟೆಕ್ಕಿ. ಬಾಗಲಗುಂಟೆ ನಿವಾಸಿಗಳಾದ ಉಮೇಶ್-ಕವಿತಾ ದಂಪತಿಯ ಎರಡನೇ…
-

ಡ್ರಗ್ಸ್, ಮದ್ಯದ ಜೊತೆ ಮತ್ತು ಬರುವ ಮಾತ್ರೆ ಮಿಕ್ಸ್ ಮಾಡಿ, 19ಕ್ಕೂ ಹೆಚ್ಚು ಯುವತಿಯರ ಮೇಲೆ ಗ್ಯಾಂಗ್ ರೇಪ್!
ಇಡೀ ದೇಶವೇ ಬೆಚ್ಚಿ ಬೀಳಿಸುವಂತಹ ಘಟನೆ ಇದೀಗ ಬೆಂಗಳೂರಿನಲ್ಲಿ ನಡೆದಿದ್ದು, ಡ್ರಗ್ಸ್ ಬಳಸಿ ಯುವತಿಯರಿಗೆ ಗಾಳ ಹಾಕಿ ಅವರಿಗೆ ಮತ್ತ ಬರುವ ಮಾತ್ರೆ ಮಿಕ್ಸ್ ಮಾಡಿ ಕಾಲೇಜ್ ಹುಡುಗಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಇದೀಗ ವರದಿಯಾಗಿದೆ. ಕಾಲೇಜ್ ಹುಡುಗಿಯರನ್ನು ಟಾರ್ಗೆಟ್ ಮಾಡಿ, ಜೊತೆ ಮೋಜು ಮಸ್ತಿ ಮಾಡಿದ್ದು ಡ್ರಗ್ಸ್ ಮತ್ತು ಮದ್ಯದ ಜೊತೆ ಮತ್ತಿನ ಮಾತ್ರೆ ಮಿಕ್ಸ್ ಮಾಡಿದ್ದಾರೆ ಈ ವೇಳೆ ಆರ್ಯ ಪ್ರಜ್ಞಾವಸ್ಥೆಯಲ್ಲಿರುವ ಯುವತಿಯರು ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಪೊಲೀಸರ ತನಿಖೆಗಳೆ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











