ಪುತ್ರನೇ ತನ್ನ ಹೆತ್ತ ತಂದೆ ತಾಯಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನವೀನ್ ಚಂದ್ರ ಭಟ್(60), ಡಾ.ಶ್ಯಾಮಲಾ ಭಟ್(55) ಕೊಲೆಯಾದವರು. ಕೊಲೆಯಾದ ನವೀನ್ ಚಂದ್ರ ಭಟ್ ನೌಕಾಪಡೆಯ ನಿವೃತ್ತ ಕ್ಯಾಪ್ಟನ್ ಆಗಿದ್ದರೆ, ಡಾ.ಶ್ಯಾಮಲಾ ಭಟ್ ದಂತ ವೈದ್ಯೆಯಾಗಿದ್ದರು. ರೋಹನ್ ಭಟ್(33) ಕೃತ್ಯ ಎಸಗಿದ ಪಾಪಿ ಮಗ. ರೋಹನ್ ಭಟ್ ಸ್ವಂತ ಸಾಫ್ಟ್ವೇರ್ ಕಂಪನಿ ಹೊಂದಿದ್ದ. ಕೌಟುಂಬಿಕ ವಿಚಾರಕ್ಕೆ ಗಲಾಟೆ ನಡೆದಿದೆ ಎನ್ನಲಾಗಿದ್ದು, ಕೋಪದಲ್ಲಿ ತಂದೆ ತಾಯಿಗೆ ಚಾಕುವಿನಿಂದ ಚುಚ್ಚಿದ್ದಾನೆ. ಬಳಿಕ ದಂಪತಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ‘ಸಾರಿ ಮಮ್ಮಿ-ಪಾಪ, ಐ ಲವ್ ಯು’ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಸದ್ಯ ಹಂತಕ ರೋಹನ್ ಭಟ್ ನನ್ನು ಹೆಚ್ಎಎಲ್ ಪೊಲೀಸರು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
