ಆರ್ ಎಸ್ ಎಸ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಮೊಹಮ್ಮದ್ ನಲಪಾಡಗೆ ಜಾಮೀನು ಮಂಜೂರು ಮಾಡಲಾಗಿದೆ. ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ಕೋಟ್ ಜಾಮೀನು ನೀಡಿ ಆದೇಶ ಹೊರಡಿಸಿದೆ.
ತಲಾ 10 ಸಾವಿರ ರೂಪಾಯಿ ವೈಯಕ್ತಿಕ ಶೂರಿಟಿ ವಿಧಿಸಿದೆ ಆರ್ ಎಸ್ ಎಸ್ ಕಾರ್ಯಕರ್ತ ಎ ತೇಜಸ್ ದೂರು ನೀಡಿದ್ದರು. 2025 ಅಕ್ಟೋಬರ್ 14ರಂದು ಆರ್ ಎಸ್ ಎಸ್ ಸದಸ್ಯರ ವಿರುದ್ಧ ಪ್ರಿಯಾಂಕ ಖರ್ಗೆ ಟ್ವೀಟ್ ಮಾಡಿದರು. ಇನ್ನು ಯುಟ್ಯೂಬ್ ಚಾನೆಲ್ನಲ್ಲಿ ಮಹಮ್ಮದ್ ನಲಪಾಡ್ ಅವಹೇಳನಕಾರಿ ಹೇಳಿಕೆ ನೀಡಿದ್ದರು ಬೆಂಗಳೂರಿನ ಸಿದ್ದಾಪುರದ ಎ ತೇಜಸ್ ಖಾಸಗಿ ದೂರು ದಾಖಲಿಸಿದ್ದರು . ಇದೀಗ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ನೀಡಿ ಆದೇಶ ಹೊರಡಿಸಿದೆ.















