ಮಂಗಳೂರು: eKYC ಮಾಡಿಸಿಕೊಳ್ಳಲು ಸರ್ವರ್ ಸಮಸ್ಯೆಯಿಂದಾಗಿ ಮಕ್ಕಳು ಹಾಗೂ 70 ವರ್ಷ ಮೇಲ್ಪಟ್ಟ ವೃದ್ಧರು ಸೇರಿದಂತೆ ಸಾರ್ವಜನಿಕರು ಬಿಸಿಲಿನಲ್ಲಿ ಗಂಟೆಗಟ್ಟಲೆ ಸರದಿಯಲ್ಲಿ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದ್ದು, ಸಾರ್ವಜನಿಕರು ವ್ಯವಸ್ಥೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದರೊಂದಿಗೆ SIR ಪ್ರಕ್ರಿಯೆಯ ಹೆಸರಿನಲ್ಲಿ ಸರ್ಕಾರಿ ನೌಕರರಿಗೆ ಹೆಚ್ಚುವರಿ ಜವಾಬ್ದಾರಿ ವಹಿಸಿರುವುದರಿಂದ ತಾಲೂಕು ಕಚೇರಿ, ಜಿಲ್ಲಾಧಿಕಾರಿ ಕಚೇರಿ, ಮಹಾನಗರ ಪಾಲಿಕೆ, ಮುಡಾ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳಲ್ಲಿನ ಇತರೆ ಕೆಲಸಗಳು ನಿಧಾನಗೊಳ್ಳುತ್ತಿವೆ ಎಂಬ ಆರೋಪವೂ ಕೇಳಿಬಂದಿದೆ. ಒಬ್ಬೊಬ್ಬ ಸಿಬ್ಬಂದಿಗೆ ಎರಡು-ಮೂರು ಕೆಲಸಗಳನ್ನು ವಹಿಸಲಾಗುತ್ತಿದ್ದು, ಬಹುತೇಕ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು SIR ಪ್ರಕ್ರಿಯೆಯ ಕೆಲಸಕ್ಕೆ ನಿಯೋಜಿಸಿರುವುದರಿಂದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುವವರೇ ಇಲ್ಲದಂತಾಗಿದೆ ಎಂದು ಆರೋಪಿಸಲಾಗಿದೆ.
SIR ನೋಟಿಸ್‌ನಲ್ಲಿ ಬಂದಿರುವ ಮಾಹಿತಿಯನ್ನು ಸರಿಪಡಿಸಲು ಜನರು ಗಂಟೆಗಟ್ಟಲೆ ಸರದಿಯಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದಕ್ಕಾಗಿಯೇ ಇಡೀ ದಿನ ಕಳೆಯುವಂತಾಗಿದೆ ಎನ್ನಲಾಗಿದೆ. ಊಟ, ಉಪಾಹಾರವನ್ನೂ ಮಾಡದೆ, ಇತರೆ ಕೆಲಸಗಳಿಗೆ ರಜೆ ಹಾಕಿಕೊಂಡು ಜನರು ದಿನವಿಡೀ ಕಚೇರಿಗಳಲ್ಲಿ ಕಾಯಬೇಕಾಗಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರ ನಡುವೆ ಸರ್ವರ್ ಡೌನ್ ಸಮಸ್ಯೆ ಮತ್ತಷ್ಟು ತೊಂದರೆ ಉಂಟುಮಾಡುತ್ತಿದ್ದು, ಪ್ರಕ್ರಿಯೆಗಳು ಅಪೂರ್ಣವಾಗುವ ಪರಿಸ್ಥಿತಿ ಎದುರಾಗಿದೆ ಎಂದು ದೂರಲಾಗಿದೆ.
ಸಣ್ಣ ಪ್ರಮಾಣದ ಪ್ರಕ್ರಿಯೆಗಾಗಿ ದಿನವಿಡೀ ಸರ್ವರ್ ಡೌನ್ ಆಗಿರುವುದರಿಂದ ಸಾರ್ವಜನಿಕರು ಸರದಿಯಲ್ಲಿ ನಿಂತು ಕಾಯಬೇಕಾಗಿದೆ. ಅದರಲ್ಲೂ ಶಾಲೆಗೆ ತೆರಳಬೇಕಾದ ಮಕ್ಕಳು eKYCಗಾಗಿ ಸಾಲಿನಲ್ಲಿ ನಿಲ್ಲುವಂತಾಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಒಂದು ದಿನ ಶಾಲೆ ತಪ್ಪಿದರೆ ಮಗುವಿನ ಒಂದು ದಿನದ ಕಲಿಕೆಗೆ ತೊಂದರೆಯಾಗುತ್ತದೆ. ಇದಕ್ಕೆ ಹೊಣೆ ಯಾರು ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.
ಇನ್ನು 70 ವರ್ಷದ ವೃದ್ಧರು ಕೂಡ ಬೆಳಗ್ಗೆಯಿಂದ ನೀರು ಹಾಗೂ ಊಟವಿಲ್ಲದೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎನ್ನಲಾಗಿದೆ. “ಅವರು ಭಿಕ್ಷೆ ಬೇಡಲು ಬಂದಿಲ್ಲ, ತಮ್ಮ ಹಕ್ಕಿನ ಅಕ್ಕಿಗಾಗಿ ಬಂದಿದ್ದಾರೆ” ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ವರ್ ಸಮಸ್ಯೆ ಮುಂದುವರಿದಿರುವ ಸಂದರ್ಭದಲ್ಲಿ eKYCಗೆ ಗಡುವು ವಿಧಿಸಿರುವುದಕ್ಕೂ ಸಾರ್ವಜನಿಕರು ಪ್ರಶ್ನೆ ಎತ್ತಿದ್ದಾರೆ. ಜನರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಸಾಧ್ಯವಾಗದ ಸಂದರ್ಭದಲ್ಲಿ ಗಡುವು ವಿಧಿಸಿ ಅವರನ್ನು ಆತಂಕಕ್ಕೆ ಒಳಪಡಿಸುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ.
ಎಸಿ ಕಚೇರಿಯಲ್ಲಿ ಕುಳಿತು ಗಡುವು ವಿಸ್ತರಿಸಲಾಗಿದೆ ಎಂದು ಹೇಳುವುದು ಸುಲಭ. ಆದರೆ ಸಾರ್ವಜನಿಕರು ಬಿಸಿಲಿನಲ್ಲಿ ಎದುರಿಸುತ್ತಿರುವ ಸಮಸ್ಯೆಯನ್ನು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಒತ್ತಾಯಿಸಲಾಗಿದೆ.
ತಕ್ಷಣ eKYC ಗಡುವನ್ನು ಒಂದು ತಿಂಗಳು ವಿಸ್ತರಿಸಿ ಲಿಖಿತ ಆದೇಶ ನೀಡಬೇಕು. ಪ್ರತಿ ಕೇಂದ್ರದಲ್ಲಿ ಮಕ್ಕಳು ಹಾಗೂ ವೃದ್ಧರಿಗೆ ಪ್ರತ್ಯೇಕ ಟೋಕನ್ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ನೆರಳಿನ ವ್ಯವಸ್ಥೆ ಮಾಡಬೇಕು. ಅಲ್ಲದೆ, ಪ್ರತಿ ಪಂಚಾಯಿತಿಗೆ ಮೊಬೈಲ್ eKYC ಯಂತ್ರಗಳನ್ನು ಕಳುಹಿಸಿ ಜನರು ಅಲೆದಾಡುವುದನ್ನು ತಪ್ಪಿಸಬೇಕು ಎಂಬ ಬೇಡಿಕೆಯನ್ನೂ ಸಾರ್ವಜನಿಕರು ಮುಂದಿಟ್ಟಿದ್ದಾರೆ.
ಸರ್ವರ್ ಸಮಸ್ಯೆ ಆಡಳಿತದ ಸಮಸ್ಯೆಯಾಗಿದ್ದು, ಅದಕ್ಕಾಗಿ ಜನರನ್ನು ಶಿಕ್ಷಿಸಬಾರದು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇನ್ನು ಎರಡು ದಿನಗಳಲ್ಲಿ ಸಮಸ್ಯೆಗೆ ಪರಿಹಾರ ಸಿಗದಿದ್ದರೆ ಲೋಕಾಯುಕ್ತರಿಗೆ ದೂರು ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
eKYCಗೆ ಸರ್ವರ್ ಸಮಸ್ಯೆ: ಮಕ್ಕಳು, ವೃದ್ಧರು ಬಿಸಿಲಿನಲ್ಲಿ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ- ಸಾರ್ವಜನಿಕರ ಆಕ್ರೋಶ
ಮಂಗಳೂರು: eKYC ಮಾಡಿಸಿಕೊಳ್ಳಲು ಸರ್ವರ್ ಸಮಸ್ಯೆಯಿಂದಾಗಿ ಮಕ್ಕಳು ಹಾಗೂ 70 ವರ್ಷ ಮೇಲ್ಪಟ್ಟ ವೃದ್ಧರು ಸೇರಿದಂತೆ ಸಾರ್ವಜನಿಕರು ಬಿಸಿಲಿನಲ್ಲಿ ಗಂಟೆಗಟ್ಟಲೆ ಸರದಿಯಲ್ಲಿ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದ್ದು, ಸಾರ್ವಜನಿಕರು ವ್ಯವಸ್ಥೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದರೊಂದಿಗೆ SIR ಪ್ರಕ್ರಿಯೆಯ ಹೆಸರಿನಲ್ಲಿ ಸರ್ಕಾರಿ ನೌಕರರಿಗೆ ಹೆಚ್ಚುವರಿ ಜವಾಬ್ದಾರಿ ವಹಿಸಿರುವುದರಿಂದ ತಾಲೂಕು ಕಚೇರಿ, ಜಿಲ್ಲಾಧಿಕಾರಿ ಕಚೇರಿ, ಮಹಾನಗರ ಪಾಲಿಕೆ, ಮುಡಾ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳಲ್ಲಿನ ಇತರೆ ಕೆಲಸಗಳು…

Previous Post
Next Post
Leave a Reply
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed









