,

ನಕಲಿ ಔಷಧ ಮಾರಾಟ ಕಿಂಗ್ ಪಿನ್ ಪ್ರಶಾಂತ್ ಅರೆಸ್ಟ್..!!

ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬೆಂಗಳೂರಿನ ನಕಲಿ ಮತ್ತು ಕಳಪೆ ಔಷಧ ಮಾರಾಟ ಜಾಲದ ಪ್ರಮುಖ ರೂವಾರಿ ನಾಗರಬಾವಿಯ ಪ್ರಶಾಂತ್ ಹಾಗೂ ಆತನ ಇಬ್ಬರು ಸಹಚರರು ಪಶ್ಚಿಮ ಏಷ್ಯಾದ ದೇಶವೊಂದರಲ್ಲಿ ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕ್ಯಾನ್ಸರ್ ಸೇರಿದಂತೆ ಗಂಭೀರ ಕಾಯಿಲೆಗಳಿಗೆ ಬಳಸುವ ಔಷಧಗಳನ್ನು ಅಲ್ಲಿಂದ ಅತಿ ಕಡಿಮೆ ಬೆಲೆಗೆ ಖರೀದಿಸಿ, ಅಕ್ರಮವಾಗಿ ಭಾರತಕ್ಕೆ ಸಾಗಿಸಲು ಯತ್ನಿಸುತ್ತಿದ್ದಾಗ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾರೆ. ವಿಚಾರಣೆ ವೇಳೆ ಸಹಚರರು ನೀಡಿದ ಮಾಹಿತಿ ಮೇರೆಗೆ ಕಿಂಗ್‌ಪಿನ್ ಪ್ರಶಾಂತ್‌ನನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಹತ್ವದ ವಿಚಾರವನ್ನು…

ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬೆಂಗಳೂರಿನ ನಕಲಿ ಮತ್ತು ಕಳಪೆ ಔಷಧ ಮಾರಾಟ ಜಾಲದ ಪ್ರಮುಖ ರೂವಾರಿ ನಾಗರಬಾವಿಯ ಪ್ರಶಾಂತ್ ಹಾಗೂ ಆತನ ಇಬ್ಬರು ಸಹಚರರು ಪಶ್ಚಿಮ ಏಷ್ಯಾದ ದೇಶವೊಂದರಲ್ಲಿ ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕ್ಯಾನ್ಸರ್ ಸೇರಿದಂತೆ ಗಂಭೀರ ಕಾಯಿಲೆಗಳಿಗೆ ಬಳಸುವ ಔಷಧಗಳನ್ನು ಅಲ್ಲಿಂದ ಅತಿ ಕಡಿಮೆ ಬೆಲೆಗೆ ಖರೀದಿಸಿ, ಅಕ್ರಮವಾಗಿ ಭಾರತಕ್ಕೆ ಸಾಗಿಸಲು ಯತ್ನಿಸುತ್ತಿದ್ದಾಗ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾರೆ. ವಿಚಾರಣೆ ವೇಳೆ ಸಹಚರರು ನೀಡಿದ ಮಾಹಿತಿ ಮೇರೆಗೆ ಕಿಂಗ್‌ಪಿನ್ ಪ್ರಶಾಂತ್‌ನನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಹತ್ವದ ವಿಚಾರವನ್ನು ಆತನ ಪತ್ನಿ ಪೊಲೀಸರ ವಿಚಾರಣೆ ವೇಳೆ ಬಹಿರಂಗಪಡಿಸಿದ್ದಾಳೆ.

ಈ ಜಾಲದ ವಂಚನೆಯ ವಿಧಾನ ಅತ್ಯಂತ ವ್ಯವಸ್ಥಿತವಾಗಿತ್ತು. ಚೆನ್ನೈ, ಹರ್ಯಾಣ, ಚಂಡೀಗಢ ಹಾಗೂ ವಿದೇಶಗಳಿಂದ ತೀರಾ ಕಡಿಮೆ ಬೆಲೆಗೆ ತರುತ್ತಿದ್ದ ಔಷಧಗಳನ್ನು ಬೆಂಗಳೂರು ದಕ್ಷಿಣ ತಾಲೂಕಿನ ಸಿ.ಕೆ.ತಾಂಡ್ಯಾದ ಫಾರ್ಮ್‌ಹೌಸ್‌ನಲ್ಲಿ ಮರುಪ್ಯಾಕಿಂಗ್ ಮಾಡಲಾಗುತ್ತಿತ್ತು. ಈ ಕಳಪೆ ಔಷಧಗಳಿಗೆ ಪ್ರತಿಷ್ಠಿತ ಕಂಪನಿಗಳ ನಕಲಿ ಲೇಬಲ್ ಹಾಗೂ ದುಬಾರಿ ದರಪಟ್ಟಿ ಅಂಟಿಸಿ, ಮಾರುಕಟ್ಟೆಯಲ್ಲಿ ನಾಲ್ಕು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡಲಾಗುತ್ತಿತ್ತು.

ಕೆಲ ದಿನಗಳ ಹಿಂದೆ ತಾವರೆಕೆರೆ ಪೊಲೀಸರು ಈ ಅಡ್ಡೆಯ ಮೇಲೆ ದಾಳಿ ನಡೆಸುವ ಮುನ್ನವೇ ಆಗಸ್ಟ್ 8ರಂದು ಪ್ರಶಾಂತ್ ವಿದೇಶಕ್ಕೆ ಪರಾರಿಯಾಗಿದ್ದ. ಬಳಿಕ ತನ್ನ ಪಾಲುದಾರ ವೆಂಕಟೇಶ್‌ನನ್ನು ವಿದೇಶಕ್ಕೆ ಕರೆಸಿಕೊಳ್ಳಲು ಯತ್ನಿಸಿದಾಗ, ಪೊಲೀಸರು ಆತನನ್ನು ವಿಮಾನ ನಿಲ್ದಾಣ ತಲುಪುವ ಮುನ್ನವೇ ಬಂಧಿಸಿದ್ದಾರೆ. ಪ್ರಸ್ತುತ ವಿದೇಶದಲ್ಲಿ ಕಸ್ಟಮ್ಸ್ ವಶದಲ್ಲಿರುವ ಪ್ರಶಾಂತ್‌ನನ್ನು ಇಂಟರ್‌ಪೋಲ್ ನೆರವಿನೊಂದಿಗೆ ಭಾರತಕ್ಕೆ ಕರೆತರಲು ವಿಶೇಷ ತನಿಖಾ ತಂಡ (SIT) ಕಾನೂನು ಪ್ರಕ್ರಿಯೆಗಳನ್ನು ಚುರುಕುಗೊಳಿಸಿದೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed