,

ಮಂಜೇಶ್ವರ: ತಂದೆಯಿಂದಲೇ ಮಗಳ ಹತ್ಯೆ- ಆರೋಪಿಯ ಬಂಧನ

ಮಂಜೇಶ್ವರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಂದೆಯೊಬ್ಬನೇ ತನ್ನ 18 ವರ್ಷದ ಮಗಳನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿಯೇ ಹತ್ಯೆ ಮಾಡಿರುವ ದಾರುಣ ಘಟನೆ ಸೋಮವಾರ ಸಂಜೆ ಮಂಜೇಶ್ವರ ಸಮೀಪದ ಕುಂಜತ್ತೂರು ತೂಮಿನಾಡು ಹಿಲ್ ಟಾಪ್ ನಗರದಲ್ಲಿ ನಡೆದಿದೆ. ಮರಿಯಮತ್ ಜುಮೈರಾ (18) ಕೊಲೆಯಾದ ದುರ್ದೈವಿ. ಕೃತ್ಯ ಎಸಗಿದ ಆರೋಪಿ ತಂದೆ ಉಮರ್ ಪಾಷ ಎಂಬಾತನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ದಾಳಿಯ ವೇಳೆ ಅಡ್ಡ ಬಂದ ಯುವತಿಯ ದೊಡ್ಡಪ್ಪ ಶೇಕುಂಞ ಎಂಬುವವರಿಗೂ ಆರೋಪಿ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ಆರೋಪಿ ಉಮರ್…

ಮಂಜೇಶ್ವರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಂದೆಯೊಬ್ಬನೇ ತನ್ನ 18 ವರ್ಷದ ಮಗಳನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿಯೇ ಹತ್ಯೆ ಮಾಡಿರುವ ದಾರುಣ ಘಟನೆ ಸೋಮವಾರ ಸಂಜೆ ಮಂಜೇಶ್ವರ ಸಮೀಪದ ಕುಂಜತ್ತೂರು ತೂಮಿನಾಡು ಹಿಲ್ ಟಾಪ್ ನಗರದಲ್ಲಿ ನಡೆದಿದೆ.

ಮರಿಯಮತ್ ಜುಮೈರಾ (18) ಕೊಲೆಯಾದ ದುರ್ದೈವಿ. ಕೃತ್ಯ ಎಸಗಿದ ಆರೋಪಿ ತಂದೆ ಉಮರ್ ಪಾಷ ಎಂಬಾತನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ದಾಳಿಯ ವೇಳೆ ಅಡ್ಡ ಬಂದ ಯುವತಿಯ ದೊಡ್ಡಪ್ಪ ಶೇಕುಂಞ ಎಂಬುವವರಿಗೂ ಆರೋಪಿ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ.

ಆರೋಪಿ ಉಮರ್ ಕಳೆದ ಮೂರು ತಿಂಗಳ ಹಿಂದಷ್ಟೇ ವಿದೇಶದಿಂದ ಊರಿಗೆ ಮರಳಿದ್ದ ಎನ್ನಲಾಗಿದ್ದು, ಆಸ್ತಿ ವಿಚಾರವಾಗಿ ಕುಟುಂಬದಲ್ಲಿ ಆಗಾಗ ಗಲಾಟೆಗಳು ನಡೆಯುತ್ತಿದ್ದವು. ಇಂದು ಸಂಜೆ ಕೂಡ ಮನೆಯಲ್ಲಿ ಜಗಳ ತಾರಕಕ್ಕೇರಿದ್ದು, ಈ ವೇಳೆ ಆಕ್ರೋಶಗೊಂಡ ಉಮ್ಮರ್ ಮಗಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಮಗಳ ಕಿರುಚಾಟ ಕೇಳಿ ಓಡಿ ಬಂದ ದೊಡ್ಡಪ್ಪ ಶೇಕುಂಞ ಅವರು ತಡೆಯಲು ಯತ್ನಿಸಿದಾಗ ಅವರಿಗೂ ಆರೋಪಿ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾನೆ.
ಮನೆಯಲ್ಲಿ ಕಿರುಚಾಟ ಕೇಳಿ ಸ್ಥಳೀಯರು ಧಾವಿಸಿ ಬಂದಾಗ ಜುಮೈರಾ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕೊಂಡೊಯ್ಯುವ ಪ್ರಯತ್ನ ಮಾಡಲಾಯಿತಾದರೂ, ಅಷ್ಟರಲ್ಲೇ ಆಕೆ ಮೃತಪಟ್ಟಿದ್ದಳು.

ಸ್ಥಳಕ್ಕೆ ಮಂಜೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed