,

ಜಿಲ್ಲಾಧಿಕಾರಿ, ಎಡಿಸಿ ಸಹಿ ಫೋರ್ಜರಿ : 15 ಲಕ್ಷ ರೂ. ನಕಲಿ ಬಿಲ್ ಸೃಷ್ಟಿಸಿದ್ದ ಐವರು ಆರೋಪಿಗಳು ಅರೆಸ್ಟ್

ರಾಜ್ಯದಲ್ಲಿ ಮತ್ತೊಂದು ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು, ಜಿಲ್ಲಾಧಿಕಾರಿ ಹಾಗೂ ಎಡಿಸಿಯವರ ಡಿಜಿಟಲ್ ಸಹಿ ದುರುಪಯೋಗಪಡಿಸಿಕೊಂಡು 15 ಲಕ್ಷ ರೂ. ಮೌಲ್ಯದ ನಕಲಿ ಬಿಲ್ ಸೃಷ್ಟಿಸಿದ್ದ ಐವರು ನೌಕರರನ್ನು ಬಂಧಿಸಿರುವ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ವಿಭಾಗದಲ್ಲಿ ಹೊರಗುತ್ತಿಗೆ ನೌಕರ ಸೈಯದ್ ಸಾದಿಕ್, ವಿನಯ್ ಶರ್ಮಾ, ವಿಜಯ್ ಕುಮಾರ್, ಬಸವರಾಜ, ಮಹೆಬೂಬ್ ಭಾಷಾ ಹಾಗೂ ವೆಂಕಟೇಶ್ ಎಂಬ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಎ1 ಆರೋಪಿ ಸೈಯದ್ ಪರಾರಿಯಾಗಿದ್ದು, ಇನ್ನುಳಿದ ಐವರನ್ನು ಬಂಧಿಸಿದ್ದಾರೆ.…

ರಾಜ್ಯದಲ್ಲಿ ಮತ್ತೊಂದು ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು, ಜಿಲ್ಲಾಧಿಕಾರಿ ಹಾಗೂ ಎಡಿಸಿಯವರ ಡಿಜಿಟಲ್ ಸಹಿ ದುರುಪಯೋಗಪಡಿಸಿಕೊಂಡು 15 ಲಕ್ಷ ರೂ. ಮೌಲ್ಯದ ನಕಲಿ ಬಿಲ್ ಸೃಷ್ಟಿಸಿದ್ದ ಐವರು ನೌಕರರನ್ನು ಬಂಧಿಸಿರುವ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ.

ನಗರಾಭಿವೃದ್ಧಿ ವಿಭಾಗದಲ್ಲಿ ಹೊರಗುತ್ತಿಗೆ ನೌಕರ ಸೈಯದ್ ಸಾದಿಕ್, ವಿನಯ್ ಶರ್ಮಾ, ವಿಜಯ್ ಕುಮಾರ್, ಬಸವರಾಜ, ಮಹೆಬೂಬ್ ಭಾಷಾ ಹಾಗೂ ವೆಂಕಟೇಶ್ ಎಂಬ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಎ1 ಆರೋಪಿ ಸೈಯದ್ ಪರಾರಿಯಾಗಿದ್ದು, ಇನ್ನುಳಿದ ಐವರನ್ನು ಬಂಧಿಸಿದ್ದಾರೆ.

ಇನ್ನೂ ಡಿಸಿ ಕಚೇರಿಯಲ್ಲಿ ಡಿಸಿ ಹಾಗೂ ಎಡಿಸಿ ಅವರಿಗೆ ಸಂಬಂಧಿತ ಡಿಎಸ್‌ಸಿ ಕೀ ಕಳ್ಳತನ ಮಾಡಿದ್ದಾರೆ ಎಂದು ನೌಕರ ಸೈಯದ್ ಸಾದಿಕ್ ವಿರುದ್ಧ ಕಳ್ಳತನ ಆರೋಪ ಕೇಳಿಬಂದಿದೆ. ಸದ್ಯ ಗುತ್ತಿಗೆ ನೌಕರರನ್ನು ಕೆಲಸದಿಂದ ವಜಾಗೊಳಿಸಿದ್ದು, ಓರ್ವ ಸರ್ಕಾರಿ ನೌಕರನನ್ನು ಅಮಾನತುಗೊಳಿಸಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಜಿಲ್ಲಾ ನಗರಾಭಿವೃದ್ಧಿ ವಿಭಾಗದ ಐವರು ಸಿಎಲ್‌ಟಿಸಿ ಸಿಬ್ಬಂದಿ 15 ಲಕ್ಷ ರೂ. ವೇತನದ ನಕಲಿ ಬಿಲ್ ಸೃಷ್ಟಿಸಿ, ಜಿಲ್ಲಾ ಖಜಾನೆಗೆ ಕಡತವನ್ನು ಕಳಿಸಿದ್ದರು. ಈ ವೇಳೆ ಸಹಿ ಬಗ್ಗೆ ಅನುಮಾನಗೊಂಡು ಖಜಾನೆ ಇಲಾಖೆಯಿಂದ ಆಕ್ಷೇಪಣೆ ಬಂದಿತ್ತು. ಈ ಹಿನ್ನಲೆಯಲ್ಲಿ ವಂಚನೆ ಬಯಲಾಗಿದ್ದು, ನಗರಾಭಿವೃದ್ಧಿ ಕೋಶದ ನಿರ್ದೇಶಕಿ ರೇಷ್ಮಾ ಹಾನಗಲ್ ಚಿತ್ರದುರ್ಗ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed