, ,

ಮನೆಯಿಂದ 5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು- ಇಬ್ಬರ ಬಂಧನ, ಚಿನ್ನ ವಶಕ್ಕೆ

ಸುಳ್ಯ ಕಸಬಾ ನಿವಾಸಿ ಪುಣ್ಯಶ್ರೀ(20) ಎಂಬವರ ಮನೆಯಲ್ಲಿ ನಡೆದ ಚಿನ್ನಾಭರಣ ಕಳವು ಪ್ರಕರಣವನ್ನು ಸುಳ್ಯ ಪೊಲೀಸರು ಭೇದಿಸಿ, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಕಳವಾಗಿದ್ದ ಚಿನ್ನಾಭರಣಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ದೂರುದಾರೆಯ ತಂದೆಗೆ ಆರೋಪಿತೆ ಶೃತಿ @ ವಿಶ್ಮೀತ(37) ಎಂಬಾಕೆಯೊಂದಿಗೆ ಸಂಪರ್ಕವಿದ್ದು, ಆಕೆಗೆ ಸುಮಾರು 6 ಲಕ್ಷ ರೂಪಾಯಿ ಹಣವನ್ನು ಸಾಲವಾಗಿ ನೀಡಲಾಗಿತ್ತು ಎಂದು ತಿಳಿದುಬಂದಿದೆ. ಬಳಿಕ ಹಣವನ್ನು ಹಿಂತಿರುಗಿಸುವಂತೆ ಕೇಳಿದಾಗ ಆರೋಪಿತೆ ಅದನ್ನು ಮರಳಿಸುವುದಾಗಿ ಹೇಳಿ ಏಪ್ರಿಲ್ 7ರಂದು ಪುಣ್ಯಶ್ರೀಯ ಮನೆಗೆ ಬಂದಿದ್ದಳು ಎನ್ನಲಾಗಿದೆ. ಆ ದಿನ ಪುಣ್ಯಶ್ರೀ…

ಸುಳ್ಯ ಕಸಬಾ ನಿವಾಸಿ ಪುಣ್ಯಶ್ರೀ(20) ಎಂಬವರ ಮನೆಯಲ್ಲಿ ನಡೆದ ಚಿನ್ನಾಭರಣ ಕಳವು ಪ್ರಕರಣವನ್ನು ಸುಳ್ಯ ಪೊಲೀಸರು ಭೇದಿಸಿ, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಕಳವಾಗಿದ್ದ ಚಿನ್ನಾಭರಣಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ದೂರುದಾರೆಯ ತಂದೆಗೆ ಆರೋಪಿತೆ ಶೃತಿ @ ವಿಶ್ಮೀತ(37) ಎಂಬಾಕೆಯೊಂದಿಗೆ ಸಂಪರ್ಕವಿದ್ದು, ಆಕೆಗೆ ಸುಮಾರು 6 ಲಕ್ಷ ರೂಪಾಯಿ ಹಣವನ್ನು ಸಾಲವಾಗಿ ನೀಡಲಾಗಿತ್ತು ಎಂದು ತಿಳಿದುಬಂದಿದೆ. ಬಳಿಕ ಹಣವನ್ನು ಹಿಂತಿರುಗಿಸುವಂತೆ ಕೇಳಿದಾಗ ಆರೋಪಿತೆ ಅದನ್ನು ಮರಳಿಸುವುದಾಗಿ ಹೇಳಿ ಏಪ್ರಿಲ್ 7ರಂದು ಪುಣ್ಯಶ್ರೀಯ ಮನೆಗೆ ಬಂದಿದ್ದಳು ಎನ್ನಲಾಗಿದೆ.

ಆ ದಿನ ಪುಣ್ಯಶ್ರೀ ಕೆಲಸಕ್ಕೆ ತೆರಳಿದ್ದು, ಬಳಿಕ ರಾತ್ರಿ ಮನೆಗೆ ವಾಪಾಸಾದಾಗ ಮನೆಯ ಕಪಾಟಿನ ಬೀಗದ ಕೀ ಕೆಳಗೆ ಬಿದ್ದಿರುವುದನ್ನು ಗಮನಿಸಿ ಪರಿಶೀಲನೆ ನಡೆಸಿದಾಗ, ಮನೆಯಲ್ಲಿದ್ದ ಸುಮಾರು ರೂ.5 ಲಕ್ಷ ಮೌಲ್ಯದ 62½ ಗ್ರಾಂ ತೂಕದ ಚಿನ್ನಾಭರಣಗಳು ಕಳವಾಗಿರುವುದು ಪತ್ತೆಯಾಯಿತು..

ಈ ಕುರಿತು ಪುಣ್ಯಶ್ರೀ ನೀಡಿದ ದೂರಿನ ಮೇರೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 49/2026, ಕಲಂ 331(3), 305 BNS 2023 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿತೆ ಶೃತಿ @ ವಿಶ್ಮೀತ ಹಾಗೂ ಕೃತ್ಯಕ್ಕೆ ಸಹಕರಿಸಿದ ಪ್ರದೀಪ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಕಳವಾಗಿದ್ದ ಚಿನ್ನಾಭರಣಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed