,

ರಾಜ್ಯದಲ್ಲಿ ಇನ್ಮುಂದೆ ಹಾಫ್ ಹೆಲ್ಮೆಟ್‌ ಬ್ಯಾನ್!?

ರಾಜ್ಯದಲ್ಲಿ ಇನ್ಮುಂದೆ ಹಾಫ್ (Half) ಹೆಲ್ಮೆಟ್‌ಗಳ ಬಳಕೆ ಮತ್ತು ಮಾರಾಟವನ್ನು ಪೂರ್ಣ ಪ್ರಮಾಣದಲ್ಲಿ ನಿಷೇಧಿಸುವ (ಬ್ಯಾನ್) ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸವಾರರ ಸುರಕ್ಷತೆಯ ದೃಷ್ಟಿಯಿಂದ ಹಾಫ್ ಹೆಲ್ಮೆಟ್‌ಗಳು ಸೂಕ್ತವಲ್ಲ. ಬೈಕ್ ಸವಾರರಲ್ಲಿ ಹಾಫ್ ಹೆಲ್ಮೆಟ್ ಧರಿಸುವವರ ಸಂಖ್ಯೆ ಹೆಚ್ಚುತ್ತಿದ್ದು, ಅಪಘಾತದ ಸಮಯದಲ್ಲಿ ಇವು ಪೂರ್ಣ ರಕ್ಷಣೆ ನೀಡುವುದಿಲ್ಲ. ಹೀಗಾಗಿ ಇವುಗಳ ಬಳಕೆಗೆ ಕಾನೂನಾತ್ಮಕವಾಗಿ ಕಟ್ಟುನಿಟ್ಟಿನ ಕಡಿವಾಣ ಹಾಕಲು ಸರ್ಕಾರ…

ರಾಜ್ಯದಲ್ಲಿ ಇನ್ಮುಂದೆ ಹಾಫ್ (Half) ಹೆಲ್ಮೆಟ್‌ಗಳ ಬಳಕೆ ಮತ್ತು ಮಾರಾಟವನ್ನು ಪೂರ್ಣ ಪ್ರಮಾಣದಲ್ಲಿ ನಿಷೇಧಿಸುವ (ಬ್ಯಾನ್) ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸವಾರರ ಸುರಕ್ಷತೆಯ ದೃಷ್ಟಿಯಿಂದ ಹಾಫ್ ಹೆಲ್ಮೆಟ್‌ಗಳು ಸೂಕ್ತವಲ್ಲ. ಬೈಕ್ ಸವಾರರಲ್ಲಿ ಹಾಫ್ ಹೆಲ್ಮೆಟ್ ಧರಿಸುವವರ ಸಂಖ್ಯೆ ಹೆಚ್ಚುತ್ತಿದ್ದು, ಅಪಘಾತದ ಸಮಯದಲ್ಲಿ ಇವು ಪೂರ್ಣ ರಕ್ಷಣೆ ನೀಡುವುದಿಲ್ಲ. ಹೀಗಾಗಿ ಇವುಗಳ ಬಳಕೆಗೆ ಕಾನೂನಾತ್ಮಕವಾಗಿ ಕಟ್ಟುನಿಟ್ಟಿನ ಕಡಿವಾಣ ಹಾಕಲು ಸರ್ಕಾರ ಪರಿಶೀಲಿಸುತ್ತಿದೆ ಎಂದು ಸ್ಪಷ್ಟಪಡಿಸಿದರು.

ಹಾಫ್ ಹೆಲ್ಮೆಟ್‌ಗಳ ಬಳಕೆಯನ್ನು ತಡೆಯಲು ಕೇವಲ ಸವಾರರಿಗೆ ದಂಡ ವಿಧಿಸುವುದು ಮಾತ್ರವಲ್ಲದೆ, ಇವುಗಳನ್ನು ತಯಾರಿಸುವ ಉತ್ಪಾದಕರು ಹಾಗೂ ಮಾರಾಟ ಮಾಡುವ ಮಾರಾಟಗಾರರ ವಿರುದ್ಧವೇ ಕಾನೂನು ಕ್ರಮ ಕೈಗೊಳ್ಳುವ ಕುರಿತು ಸಾರಿಗೆ ಇಲಾಖೆ ಪರಿಶೀಲನೆ ನಡೆಸುತ್ತಿದೆ. ಹಾಫ್ ಹೆಲ್ಮೆಟ್ ತಯಾರಿಕೆ ಮತ್ತು ಮಾರಾಟವನ್ನು ರಾಜ್ಯದಲ್ಲಿ ಸಂಪೂರ್ಣವಾಗಿ ನಿಷೇಧಿಸಲು ಅವಕಾಶವಿದೆಯೇ ಎಂಬ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುತ್ತಿದ್ದು, ಶೀಘ್ರದಲ್ಲೇ ಈ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಸುಳಿವು ನೀಡಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed