, ,

ಹನೂರು ಎನ್‌ಕೌಂಟರ್ ಪ್ರಕರಣ : ತನಿಖೆಗೆ CID ಎಂಟ್ರಿ, ತನಿಖೆ ಮತ್ತಷ್ಟು ಚುರುಕು

ಕಾವೇರಿ ವನ್ಯಧಾಮದಲ್ಲಿ ನಡೆದ ಬಹುಚರ್ಚಿತ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖಾ ವರದಿ ಸಲ್ಲಿಕೆಯಾದ ಬೆನ್ನಲ್ಲೇ, ಇದೀಗ ಪ್ರಕರಣದ ಸಮಗ್ರ ತನಿಖೆಗಾಗಿ ರಾಜ್ಯ ಸಿಐಡಿ (CID) ತಂಡ ಅಖಾಡಕ್ಕಿಳಿದಿದೆ. ಘಟನೆಯ ಗಂಭೀರತೆಯನ್ನು ಪರಿಗಣಿಸಿರುವ ರಾಜ್ಯ ಸರ್ಕಾರವು ತನಿಖೆಯ ಜವಾಬ್ದಾರಿಯನ್ನು ಸಿಐಡಿಗೆ ವಹಿಸಿದ್ದು, ಅಧಿಕಾರಿಗಳ ತಂಡ ಈಗಾಗಲೇ ಚಾಮರಾಜನಗರ ಜಿಲ್ಲೆಯ ಸಂಬಂಧಿತ ಸ್ಥಳಗಳಿಗೆ ಭೇಟಿ ನೀಡಿ ಬೀಡುಬಿಟ್ಟಿದೆ. ತನಿಖೆ ಚುರುಕುಗೊಳಿಸಲು ಒಟ್ಟು ನಾಲ್ಕು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ. ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಅನುಕೂಲವಾಗುವಂತೆ ರಚಿಸಲಾಗಿರುವ ಈ ನಾಲ್ಕು ತಂಡಗಳಿಗೆ…

ಕಾವೇರಿ ವನ್ಯಧಾಮದಲ್ಲಿ ನಡೆದ ಬಹುಚರ್ಚಿತ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖಾ ವರದಿ ಸಲ್ಲಿಕೆಯಾದ ಬೆನ್ನಲ್ಲೇ, ಇದೀಗ ಪ್ರಕರಣದ ಸಮಗ್ರ ತನಿಖೆಗಾಗಿ ರಾಜ್ಯ ಸಿಐಡಿ (CID) ತಂಡ ಅಖಾಡಕ್ಕಿಳಿದಿದೆ. ಘಟನೆಯ ಗಂಭೀರತೆಯನ್ನು ಪರಿಗಣಿಸಿರುವ ರಾಜ್ಯ ಸರ್ಕಾರವು ತನಿಖೆಯ ಜವಾಬ್ದಾರಿಯನ್ನು ಸಿಐಡಿಗೆ ವಹಿಸಿದ್ದು, ಅಧಿಕಾರಿಗಳ ತಂಡ ಈಗಾಗಲೇ ಚಾಮರಾಜನಗರ ಜಿಲ್ಲೆಯ ಸಂಬಂಧಿತ ಸ್ಥಳಗಳಿಗೆ ಭೇಟಿ ನೀಡಿ ಬೀಡುಬಿಟ್ಟಿದೆ. ತನಿಖೆ ಚುರುಕುಗೊಳಿಸಲು ಒಟ್ಟು ನಾಲ್ಕು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ.

ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಅನುಕೂಲವಾಗುವಂತೆ ರಚಿಸಲಾಗಿರುವ ಈ ನಾಲ್ಕು ತಂಡಗಳಿಗೆ ಇಬ್ಬರು ಡಿವೈಎಸ್ಪಿ ಹಾಗೂ ಇಬ್ಬರು ಪೊಲೀಸ್ ಇನ್ಸ್‌ಪೆಕ್ಟರ್‌ಗಳು ನೇತೃತ್ವ ವಹಿಸಿದ್ದಾರೆ. ಡಿವೈಎಸ್ಪಿ ಸತೀಶ್ ಚಿಟಗುಬ್ಬಿ, ಡಿವೈಎಸ್ಪಿ ಡಿ.ಎಸ್. ರಾಜೇಂದ್ರ, ಪೊಲೀಸ್ ಇನ್ಸ್‌ಪೆಕ್ಟರ್‌ ಕೆ.ಪಿ. ಗೋಪಾಲ್ ಹಾಗೂ ಪೊಲೀಸ್ ಇನ್ಸ್‌ಪೆಕ್ಟರ್‌ ಹೆಚ್.ಎನ್. ಹೊನ್ನಪ್ಪ ಅವರ ನೇತೃತ್ವದಲ್ಲಿ ಈ ತಂಡಗಳು ಕಾರ್ಯಾಚರಣೆ ನಡೆಸಲಿವೆ. ಸ್ಥಳೀಯ ಪೊಲೀಸರು ಈಗಾಗಲೇ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಮುಖ್ಯ ದಾಖಲೆಗಳನ್ನು ಸಿಐಡಿ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

ಈ ಎನ್‌ಕೌಂಟರ್ ಘಟನೆ ಸೇರಿದಂತೆ ಹನೂರು, ರಾಮಾಪುರ ಹಾಗೂ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಒಟ್ಟು ನಾಲ್ಕು ಪ್ರಕರಣಗಳನ್ನು ಸಿಐಡಿ ವ್ಯಾಪಕವಾಗಿ ತನಿಖೆಗೊಳಪಡಿಸಲಿದೆ. ಪ್ರತಿಯೊಂದು ಪ್ರಕರಣದ ಹಿನ್ನೆಲೆ, ಘಟನೆ ನಡೆದ ಪರಿಸ್ಥಿತಿಗಳು ಮತ್ತು ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಲು ಈ ವಿಶೇಷ ತಂಡಗಳು ಶೀಘ್ರದಲ್ಲೇ ಸ್ಥಳೀಯ ಸಾಕ್ಷಿಗಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಯ ವಿಚಾರಣೆ ನಡೆಸಲಿವೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed