,

ವಿಚಾರಣೆ ವೇಳೆ ಲಾಕರ್ ಕೀ ನುಂಗಿದ ಆರೋಪಿ: 10 ಕೆಜಿ ಬಾಳೆಹಣ್ಣು ಬಳಿಕ ಹೊರಬಂದ ಕೀ – ಠಾಣೆಯಲ್ಲಿ ಹೈಡ್ರಾಮಾ

ನೆಲಮಂಗಲ: ಆರೋಪಿ  ಓರ್ವ ವಿಚಾರಣೆ ವೇಳೆ ಲಾಕರ್ ಕೀ ನುಂಗಿ ಹೈಡ್ರಾಮಾ ಸೃಷ್ಟಿಸಿದ ಘಟನೆಯೊಂದು ಬೆಂಗಳೂರು ಉತ್ತರದ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಬಳ್ಳಾರಿ ಮೂಲದ ಕಾರ್ತಿಕ್ ಅಲಿಯಾಸ್​​ ರಾಮು ಎಂಬಾತನೇ ಈ ವಿಚಿತ್ರ ಕೃತ್ಯ ಎಸಗಿದ ಆರೋಪಿ. ಕೀ ನುಂಗುವ ಮೂಲಕ ಪೊಲೀಸರಿಗೆ ಟೆನ್ಷನ್​ ಕೊಟ್ಟಿದ್ದ. ಆದರೆ ಮಲದ ಮೂಲಕ ಕೀ ಹೊರಬಂದ ಬಳಿಕ ಪೊಲೀಸರು ನಿಟ್ಟುಸಿರು ಬಿಟ್ಟಿದ್ದಾರೆ. ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಏಪ್ರಿಲ್ 24ರಂದು ಮಾದನಾಯಕನಹಳ್ಳಿ ಪೊಲೀಸ್​ ಠಾಣೆಗೆ ಬಾಲಕಿ ಪೋಷಕರು ನಾಪತ್ತೆ…

ನೆಲಮಂಗಲ: ಆರೋಪಿ  ಓರ್ವ ವಿಚಾರಣೆ ವೇಳೆ ಲಾಕರ್ ಕೀ ನುಂಗಿ ಹೈಡ್ರಾಮಾ ಸೃಷ್ಟಿಸಿದ ಘಟನೆಯೊಂದು ಬೆಂಗಳೂರು ಉತ್ತರದ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಬಳ್ಳಾರಿ ಮೂಲದ ಕಾರ್ತಿಕ್ ಅಲಿಯಾಸ್​​ ರಾಮು ಎಂಬಾತನೇ ಈ ವಿಚಿತ್ರ ಕೃತ್ಯ ಎಸಗಿದ ಆರೋಪಿ. ಕೀ ನುಂಗುವ ಮೂಲಕ ಪೊಲೀಸರಿಗೆ ಟೆನ್ಷನ್​ ಕೊಟ್ಟಿದ್ದ. ಆದರೆ ಮಲದ ಮೂಲಕ ಕೀ ಹೊರಬಂದ ಬಳಿಕ ಪೊಲೀಸರು ನಿಟ್ಟುಸಿರು ಬಿಟ್ಟಿದ್ದಾರೆ. ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ಏಪ್ರಿಲ್ 24ರಂದು ಮಾದನಾಯಕನಹಳ್ಳಿ ಪೊಲೀಸ್​ ಠಾಣೆಗೆ ಬಾಲಕಿ ಪೋಷಕರು ನಾಪತ್ತೆ ದೂರು ದಾಖಲಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಕರೆದುಕೊಂಡು ಹೋದ ಆರೋಪ ಹಿನ್ನೆಲೆ ಯುವಕ ಕಾರ್ತಿಕ್ ಅಲಿಯಾಸ್​​ ರಾಮು ನನ್ನು ಪೊಲೀಸರು ಠಾಣೆಗೆ ಕರೆತಂದಿದ್ದರು.

ಕಾರ್ತಿಕ್ ಅಲಿಯಾಸ್​​ ರಾಮು ನನ್ನು ಪತ್ತೆ ಹಚ್ಚಿ ಕರೆತಂದ ಪೊಲೀಸರು ಠಾಣೆಯಲ್ಲಿ ವಿಚಾರಣೆ ಮಾಡಿದ್ದಾರೆ. ಈ ವೇಳೆ ಪೋಕ್ಸೋ ಕೇಸ್​​ ಭಯಕ್ಕೆ ಲಾಕರ್ ಕೀ ನುಂಗಿದ್ದಾನೆ. ಆ ಮೂಲಕ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ. ಈ ಅನಿರೀಕ್ಷಿತ ಘಟನೆಯಿಂದ ಪೊಲೀಸ್ ಸಿಬ್ಬಂದಿ ಬೆಚ್ಚಿಬಿದ್ದರು.

10 ಕೆಜಿ ಬಾಳೆಹಣ್ಣು ತಿನ್ನಿಸಿದ ಪೊಲೀಸರು 

ಘಟನೆ ನಡೆಯುತ್ತಿದ್ದಂತೆ ತಕ್ಷಣ ಆರೋಪಿಯನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ 3 ದಿನಗಳ ಕಾಲ ಚಿಕಿತ್ಸೆ ನೀಡಲಾಗಿದೆ. ಪೊಲೀಸರು ಆರೋಪಿಗೆ 10 ಕೆಜಿ ಬಾಳೆಹಣ್ಣು ತಿನ್ನಿಸಿ ಕೀ ಹೊರ ಬರುವ ಪ್ರಯತ್ನದಲ್ಲಿದ್ದರು. ಮೂರು ದಿನದ ನಂತರ ಮಲದ ಮೂಲಕ ಕೀ ಹೊರಬಂದ ಬಳಿಕ ಪೊಲೀಸರು ನಿಟ್ಟುಸಿರು ಬಿಟ್ಟಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed