ಬೆಳಗಾವಿ: ನಗರದ ಚಾವ್ಹಾಟ್ ಗಲ್ಲಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ.
ತಡರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದ ಮನೆಯೊಂದರಲ್ಲಿ ದಿಢೀರನೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಇಡೀ ಮನೆಗೆ ವ್ಯಾಪಿಸಿದೆ. ಗಾಢ ನಿದ್ರೆಯಲ್ಲಿದ್ದ ಕುಟುಂಬಸ್ಥರಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗದೆ ನಾಲ್ವರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಗಜಾನನ ರಾಜಾರಾಮ ದಮೋನೆ (65), ಶರದಾ ದಮೋನೆ (45), ಪ್ರಿಯಾ ಗಜಾನನ ದಮೋನೆ (28), ಗಂಗಾ ಗಜಾನನ (25) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮತ್ತಿಬ್ಬರನ್ನು ರಕ್ಷಿಸಿ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.















