,

ಮಂಗಳೂರು: ಪ್ಲಾಸ್ಟಿಕ್‌ ಚೀಲ, ಕವರ್‌ಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ನಿಷೇಧ- ಎಡಿಸಿ ಸೂಚನೆ

ಮಂಗಳೂರು: ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಜು ಕೆ ಸೂಚಿಸಿದ್ದಾರೆ. ಪ್ಲಾಸ್ಟಿಕ್‍ನಲ್ಲಿರುವ ಹಾನಿಕಾರಕ ರಾಸಾಯನಿಕಗಳು ಬಿಸಿ ಆಹಾರಕ್ಕೆ ಸೇರಿ ಕ್ಯಾನ್ಸರ್ ರೋಗಕ್ಕೆ ಕಾರಣವಾಗುತ್ತಿವೆ. ಹೋಟೆಲ್, ಕ್ಯಾಂಟೀನ್‍ಗಳಿಂದ ಹೆಚ್ಚಾಗಿ ಕಾರ್ಮಿಕರು ಅಥವಾ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಬಿಸಿ ಆಹಾರ ಪದಾರ್ಥಗಳನ್ನು ಕೊಂಡೊಯ್ಯಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ಕವರ್, ನ್ಯೂಸ್ ಪೇಪರ್‌ಗಳಲ್ಲಿ ಬಿಸಿ ಆಹಾರ ಪದಾರ್ಥಕ್ಕೆ ಪ್ಲಾಸ್ಟಿಕ್ ಬಳಕೆ ಕಡ್ಡಾಯವಾಗಿ ನಿಷೇಧಿಸಲು…

ಮಂಗಳೂರು: ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಜು ಕೆ ಸೂಚಿಸಿದ್ದಾರೆ.

ಪ್ಲಾಸ್ಟಿಕ್‍ನಲ್ಲಿರುವ ಹಾನಿಕಾರಕ ರಾಸಾಯನಿಕಗಳು ಬಿಸಿ ಆಹಾರಕ್ಕೆ ಸೇರಿ ಕ್ಯಾನ್ಸರ್ ರೋಗಕ್ಕೆ ಕಾರಣವಾಗುತ್ತಿವೆ. ಹೋಟೆಲ್, ಕ್ಯಾಂಟೀನ್‍ಗಳಿಂದ ಹೆಚ್ಚಾಗಿ ಕಾರ್ಮಿಕರು ಅಥವಾ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಬಿಸಿ ಆಹಾರ ಪದಾರ್ಥಗಳನ್ನು ಕೊಂಡೊಯ್ಯಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ಕವರ್, ನ್ಯೂಸ್ ಪೇಪರ್‌ಗಳಲ್ಲಿ ಬಿಸಿ ಆಹಾರ ಪದಾರ್ಥಕ್ಕೆ ಪ್ಲಾಸ್ಟಿಕ್ ಬಳಕೆ ಕಡ್ಡಾಯವಾಗಿ ನಿಷೇಧಿಸಲು ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು.

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್, ತಂಬಾಕು ಸೇವನೆ ನಿಷೇಧ, ಎಚ್ಚರಿಕೆಯ ಫಲಕ ಇಲ್ಲದೆ ಇರುವುದು, ಅಂಗಡಿ, ಹೋಟೆಲ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರ್ ಲೈಟರ್, ಬೆಂಕಿ ಪೊಟ್ಟಣಗಳನ್ನು ಇಟ್ಟರೆ ಅವರಿಗೆ ದಂಡ ವಿಧಿಸಬೇಕು. ತಂಬಾಕು ಬ್ರಾಂಡ್ ಹೆಸರಿನೊಂದಿಗೆ ಜಾಹೀರಾತು ಫಲಕಗಳು ಅಥವಾ ಯಾವುದೇ ರೀತಿಯಲ್ಲಿ ತಂಬಾಕು ಉತ್ಪನ್ನಗಳ ಪ್ರಚಾರ, 21 ವರ್ಷದೊಳಗಿನವರಿಗೆ ತಂಬಾಕು ಮಾರಾಟ ಮಾಡಿದರೆ, ಚಿಲ್ಲರೆ ಅಂಗಡಿಗಳಲ್ಲಿ ಸಿಗರೇಟ್, ತಂಬಾಕು ಉತ್ಪನ್ನಗಳ ಪ್ರದರ್ಶನ ಮಾಡಿದರೆ ದಂಡ ವಿಧಿಸಲು ಅಪರ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಶಾಲಾ ಕಾಲೇಜುಗಳಲ್ಲಿ 100 ಮೀಟರ್ ಅಂತರದೊಳಗೆ ತಂಬಾಕು ಮಾರಾಟ ನಿಷೇಧ ಬೋರ್ಡ್ ಕಡ್ಡಾಯವಾಗಿ ಹಾಕಬೇಕು ಮತ್ತು ತಂಬಾಕು ಉತ್ಪನ್ನಗಳನ್ನು ಬಳಸದಂತೆ ಸೂಕ್ತ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ತಂಬಾಕಿಗೆ ಸಂಬಂಧಿಸಿದಂತೆ ಜಾಹೀರಾತು ಫಲಕಗಳು ಕಂಡು ಬಂದಿದ್ದು, ತಂಬಾಕು ನಿಯಂತ್ರಣ ಕಾಯ್ದೆ ಪ್ರಕಾರ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು.

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವಿಸಿದವರಿಗೆ ಮತ್ತು ಗುಟ್ಕಾ ಜಗಿದು ಉಗಿಯುವವರಿಗೆ 1000 ರೂ. ವರೆಗೆ ದಂಡ ವಿಧಿಸಲಾಗುತ್ತದೆ. ಅಂಗಡಿಗಳಲ್ಲಿ ಚಿಲ್ಲರೆ ಸಿಗರೇಟ್ ಮಾರಾಟ ಮಾಡಲು ಅವಕಾಶವಿಲ್ಲ. ಇದನ್ನು ಉಲ್ಲಂಘಿಸಿದ ಅಂಗಡಿಗಳಿಗೂ ದಂಡ ವಿಧಿಸಲಾಗುವುದು.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed