, ,

ಬೆಳ್ತಂಗಡಿ: ಬೇಟೆ ಬಾಂಬ್ ಸ್ಫೋಟ- ಬಾಲಕನಿಗೆ ಗಾಯ

ಬೆಳ್ತಂಗಡಿ: ಚೆಂಡಿನ ಆಕಾರದ(ಬೇಟೆ ಬಾಂಬ್) ವಸ್ತು ಸ್ಫೋಟಗೊಂಡು  ಓರ್ವ ಬಾಲಕನಿಗೆ ಗಾಯವಾಗಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ‌ ಬಂದಾರು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಅಭೀಶ್​ ಎಂಬ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಸದ್ಯ ಬಾಲಕ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 9(B), 1(b) ಸ್ಫೋಟಕಗಳ ಕಾಯ್ದೆ, 125 A BNS ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು?  ಬಾಲಕ ಅಭೀಶ್ ಮನೆ ಅಂಗಳದಲ್ಲಿ ಆಟ ಆಡುತ್ತಿದ್ದ. ಈ ವೇಳೆ ಚೆಂಡಿನಾಕಾರದ ವಸ್ತು ಪತ್ತೆಯಾಗಿದೆ.…

ಬೆಳ್ತಂಗಡಿ: ಚೆಂಡಿನ ಆಕಾರದ(ಬೇಟೆ ಬಾಂಬ್) ವಸ್ತು ಸ್ಫೋಟಗೊಂಡು  ಓರ್ವ ಬಾಲಕನಿಗೆ ಗಾಯವಾಗಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ‌ ಬಂದಾರು ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ಅಭೀಶ್​ ಎಂಬ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಸದ್ಯ ಬಾಲಕ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 9(B), 1(b) ಸ್ಫೋಟಕಗಳ ಕಾಯ್ದೆ, 125 A BNS ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು? 

ಬಾಲಕ ಅಭೀಶ್ ಮನೆ ಅಂಗಳದಲ್ಲಿ ಆಟ ಆಡುತ್ತಿದ್ದ. ಈ ವೇಳೆ ಚೆಂಡಿನಾಕಾರದ ವಸ್ತು ಪತ್ತೆಯಾಗಿದೆ. ಬಾಲ್ ರೀತಿ ಇದ್ದ ಬಾಂಬ್​​ನಿಂದ ಮಕ್ಕಳು ಕ್ರಿಕೆಟ್ ಆಡಿದ್ದಾರೆ. ಓರ್ವ ಬಾಲಕ ಪತ್ತೆಯಾದ ಚೆಂಡಿನಾಕಾರದ ವಸ್ತುವನ್ನು ಬೌಲ್ ಮಾಡಿದ್ದು, ಅಭೀಶ್ ಬ್ಯಾಟ್​ನಿಂದ ಹೊಡೆದಾಗ ಬ್ಲಾಸ್ಟ್ ಆಗಿದೆ. ಈ ವೇಳೆ ಅಭೀಶ್​ಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾಡು ಹಂದಿ ಬೇಟೆ ಆಡಲು ಇಟ್ಟಿದ್ದ ಬಾಂಬ್​ ಎಂದು ಶಂಕಿಸಲಾಗಿದೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed