,

ಕಾರ್ಕಳ: ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಾಟ- ಲಾರಿ ವಶಕ್ಕೆ, ಚಾಲಕನ ವಿರುದ್ಧ ಪ್ರಕರಣ

ಕಾರ್ಕಳ: ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಕಾರ್ಕಳ ನಗರ ಪೊಲೀಸರು ವಶಕ್ಕೆ ಪಡೆದು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜೂನ್ 29ರಂದು ಬೆಳಿಗ್ಗೆ ಸುಮಾರು 9:30ಕ್ಕೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಬಾರಾಡಿ ಕ್ರಾಸ್ ಬಳಿ ಚೆಕ್‌ಪೋಸ್ಟ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್ಟೇಬಲ್ ನಾಗರಾಜ ಅವರು ಮೂಡಬಿದ್ರಿ ಕಡೆಯಿಂದ ಕಾರ್ಕಳದತ್ತ ಬರುತ್ತಿದ್ದ KA-19-AD-8314 ಸಂಖ್ಯೆಯ ಲಾರಿಯನ್ನು ತಪಾಸಣೆ ನಡೆಸಿದರು. ಪರಿಶೀಲನೆ ವೇಳೆ ಲಾರಿಯಲ್ಲಿ ಸುಮಾರು 300 ಕೆಂಪು ಕಲ್ಲುಗಳು ತುಂಬಿರುವುದು ಕಂಡುಬಂದಿದೆ.…

ಕಾರ್ಕಳ: ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಕಾರ್ಕಳ ನಗರ ಪೊಲೀಸರು ವಶಕ್ಕೆ ಪಡೆದು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಜೂನ್ 29ರಂದು ಬೆಳಿಗ್ಗೆ ಸುಮಾರು 9:30ಕ್ಕೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಬಾರಾಡಿ ಕ್ರಾಸ್ ಬಳಿ ಚೆಕ್‌ಪೋಸ್ಟ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್ಟೇಬಲ್ ನಾಗರಾಜ ಅವರು ಮೂಡಬಿದ್ರಿ ಕಡೆಯಿಂದ ಕಾರ್ಕಳದತ್ತ ಬರುತ್ತಿದ್ದ KA-19-AD-8314 ಸಂಖ್ಯೆಯ ಲಾರಿಯನ್ನು ತಪಾಸಣೆ ನಡೆಸಿದರು.

ಪರಿಶೀಲನೆ ವೇಳೆ ಲಾರಿಯಲ್ಲಿ ಸುಮಾರು 300 ಕೆಂಪು ಕಲ್ಲುಗಳು ತುಂಬಿರುವುದು ಕಂಡುಬಂದಿದೆ. ಈ ಕುರಿತು ಚಾಲಕ ಅಭಿಲಾಶ್ ಶೆಟ್ಟಿಯನ್ನು ವಿಚಾರಿಸಿದಾಗ, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರಿ ತಾಲೂಕಿನ ಕೊಡ್ಯಡ್ಕ ಪ್ರದೇಶದ ಸರ್ಕಾರಿ ಸ್ಥಳವೊಂದರಿಂದ ಕಳವು ಮಾಡಿ ತೆಗೆದಿದ್ದ ಕೆಂಪು ಕಲ್ಲುಗಳನ್ನು ಯಾವುದೇ ಪರವಾನಗಿ ಇಲ್ಲದೆ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಲಂ 303(2) ಹಾಗೂ ಐಎಂವಿ ಕಾಯ್ದೆಯ ಕಲಂ 66 ಮತ್ತು 192(ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed