ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿರುವುದಾಗಿ ಆರೋಪಿಸಲಾಗಿರುವ ಅಕ್ರಮಗಳ ತನಿಖೆಗೆ ಮಹತ್ವದ ತಿರುವು ಸಿಕ್ಕಿದ್ದು, ಮುಡಾದ ಇಂಜಿನಿಯರ್ ಆಗಿದ್ದ ಅಕ್ಬರ್ ಅಕ್ತರ್ ಪಾಷಾ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿನ್ನೆಯಿಂದ ಇಂದು ಬೆಳ್ಳಗಿನ ವರೆಗೆ ಪಾಷಾರವರ ಮನೆಯಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.ಕೊಣಾಜೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮುಡಾಗೆ ಸಂಬಂಧಿಸಿದ ಜಮೀನು ಮತ್ತು ಅಭಿವೃದ್ಧಿ ಕಾಮಗಾರಿಗಳಲ್ಲಿ ಭಾರೀ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ದಾಳಿ ವೇಳೆ ಹಲವು ಮಹತ್ವದ ದಾಖಲೆಗಳು ಅಧಿಕಾರಿಗಳ ಕೈ ಸೇರಿವೆ ಎನ್ನಲಾಗಿದೆ.ಮೂಲಗಳ ಪ್ರಕಾರ, ಮುಡಾದ ಕೆಲವು ಜಾಗಗಳನ್ನು ಖರೀದಿಸಿ ಅಭಿವೃದ್ಧಿ ಮಾಡುವುದಾಗಿ ಸಾರ್ವಜನಿಕರಿಂದ ಹಾಗೂ ಸಂಬಂಧಿತ ಯೋಜನೆಗಳಿಂದ ಹಣ ಸಂಗ್ರಹಿಸಲಾಗಿತ್ತು. ಆದರೆ ಹಣ ಪಡೆದ ಬಳಿಕ ಹಲವು ಪ್ರದೇಶಗಳಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ನಡೆಸದೇ ಇರುವ ಆರೋಪ ಕೇಳಿಬಂದಿದೆ. ಇದೇ ಇದೀಗ ದೊಡ್ಡ ಹಗರಣವಾಗಿ ಹೊರಹೊಮ್ಮುವ ಸಾಧ್ಯತೆ ಇದೆ. ಅಕ್ಬರ್ ಅಕ್ತರ್ ಪಾಷಾ ಅವರೊಬ್ಬರ ಪಾತ್ರ ಮಾತ್ರವಲ್ಲದೆ, ಮುಡಾದ ಹಲವು ಅಧಿಕಾರಿಗಳು ಮತ್ತು ಸಿಬ್ಬಂದಿಯೂ ಈ ಅಕ್ರಮದಲ್ಲಿ ಭಾಗಿಯಾಗಿರುವ ಸಾಧ್ಯತೆಯನ್ನು ತನಿಖಾ ಸಂಸ್ಥೆಗಳು ಪರಿಶೀಲಿಸುತ್ತಿವೆ ಎನ್ನಲಾಗಿದೆ.ಪ್ರಸ್ತುತ ಅಕ್ತರ್ ಪಾಷಾ ಅವರ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ ಮತ್ತು ಶೋಧ ಕಾರ್ಯ ಮುಂದುವರಿದಿದ್ದು, ಹಣಕಾಸು ವ್ಯವಹಾರಗಳು, ಜಮೀನು ಖರೀದಿ ಪ್ರಕ್ರಿಯೆಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ.ಮುಡಾದಲ್ಲಿ ನಡೆದಿರುವ ಅಕ್ರಮದ ನಿಖರ ಪ್ರಮಾಣ ಎಷ್ಟು? ಸಾರ್ವಜನಿಕರ ಹಣ ಎಲ್ಲಿಗೆ ಹೋಗಿದೆ? ಈ ಹಗರಣದ ಹಿಂದೆ ಇನ್ನೆಷ್ಟು ಅಧಿಕಾರಿಗಳ ಕೈವಾಡವಿದೆ? ಎಂಬ ಪ್ರಶ್ನೆಗಳಿಗೆ ಲೋಕಾಯುಕ್ತ ತನಿಖೆಯ ಬಳಿಕವೇ ಸ್ಪಷ್ಟ ಉತ್ತರ ಸಿಗಬೇಕಿದೆ.ಸದ್ಯ ಈ ದಾಳಿ ಮಂಗಳೂರು ನಗರಾಭಿವೃದ್ಧಿ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಪ್ರಕರಣದ ಸಂಪೂರ್ಣ ಸತ್ಯ ಹೊರಬರಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
ಅಕ್ಬರ್ ಅಕ್ತರ್ ಪಾಷಾ ಮನೆ ಮೇಲೆ ಲೋಕಾಯುಕ್ತ ದಾಳಿ:ಹಲವು ಅಧಿಕಾರಿಗಳ ಪಾತ್ರದ ಶಂಕೆ
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿರುವುದಾಗಿ ಆರೋಪಿಸಲಾಗಿರುವ ಅಕ್ರಮಗಳ ತನಿಖೆಗೆ ಮಹತ್ವದ ತಿರುವು ಸಿಕ್ಕಿದ್ದು, ಮುಡಾದ ಇಂಜಿನಿಯರ್ ಆಗಿದ್ದ ಅಕ್ಬರ್ ಅಕ್ತರ್ ಪಾಷಾ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿನ್ನೆಯಿಂದ ಇಂದು ಬೆಳ್ಳಗಿನ ವರೆಗೆ ಪಾಷಾರವರ ಮನೆಯಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.ಕೊಣಾಜೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮುಡಾಗೆ ಸಂಬಂಧಿಸಿದ ಜಮೀನು ಮತ್ತು ಅಭಿವೃದ್ಧಿ ಕಾಮಗಾರಿಗಳಲ್ಲಿ ಭಾರೀ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ದಾಳಿ ವೇಳೆ ಹಲವು ಮಹತ್ವದ ದಾಖಲೆಗಳು ಅಧಿಕಾರಿಗಳ…
Previous Post
Next Post
Leave a Reply
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed












