,

ಮಂಗಳೂರು ವಕೀಲರ ಸಂಘದ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷರಾಗಿ ಶ್ರೀ ಜಗದೀಶ್ ಕೆ. ಶೇಣವ ಅಧಿಕಾರ ಸ್ವೀಕಾರ

ಮಂಗಳೂರು: ಮಂಗಳೂರು ವಕೀಲರ ಸಂಘದ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಮಂಗಳೂರು ನ್ಯಾಯಾಲಯದ ಹಳೆಯ ಕಟ್ಟಡದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಬಸವರಾಜ್ ಅವರು ವಹಿಸಿದ್ದರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕರ್ನಾಟಕ ಹೈಕೋರ್ಟ್‌ನ ಹಿರಿಯ ವಕೀಲರು ಹಾಗೂ ಕರ್ನಾಟಕ ಸರ್ಕಾರದ ಮಾಜಿ ಅಡಿಷನಲ್ ಅಡ್ವಕೇಟ್ ಜನರಲ್ ಡಾ. ಅರುಣ್ ಶ್ಯಾಮ್ ಮತ್ತು ಕರ್ನಾಟಕ ವಕೀಲ ಪರಿಷತ್ತಿನ ನೂತನ ಸದಸ್ಯರು ಹಾಗೂ ಹೈಕೋರ್ಟ್‌ನ ಹಿರಿಯ ವಕೀಲರಾದ ಶ್ರೀ ಪದ್ಮಪ್ರಸಾದ್…

ಮಂಗಳೂರು: ಮಂಗಳೂರು ವಕೀಲರ ಸಂಘದ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಮಂಗಳೂರು ನ್ಯಾಯಾಲಯದ ಹಳೆಯ ಕಟ್ಟಡದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಬಸವರಾಜ್ ಅವರು ವಹಿಸಿದ್ದರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕರ್ನಾಟಕ ಹೈಕೋರ್ಟ್‌ನ ಹಿರಿಯ ವಕೀಲರು ಹಾಗೂ ಕರ್ನಾಟಕ ಸರ್ಕಾರದ ಮಾಜಿ ಅಡಿಷನಲ್ ಅಡ್ವಕೇಟ್ ಜನರಲ್ ಡಾ. ಅರುಣ್ ಶ್ಯಾಮ್ ಮತ್ತು ಕರ್ನಾಟಕ ವಕೀಲ ಪರಿಷತ್ತಿನ ನೂತನ ಸದಸ್ಯರು ಹಾಗೂ ಹೈಕೋರ್ಟ್‌ನ ಹಿರಿಯ ವಕೀಲರಾದ ಶ್ರೀ ಪದ್ಮಪ್ರಸಾದ್ ಹೆಗ್ಡೆ ಭಾಗವಹಿಸಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ನೂತನ ಅಧ್ಯಕ್ಷರಾದ ಶ್ರೀ ಜಗದೀಶ್ ಕೆ. ಶೇಣವ ಅವರು ಅತಿಥಿಗಳನ್ನು ಸ್ವಾಗತಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಗೌತಮ್ ಬಿ.ಪಿ. ಅವರು ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ವಕೀಲರಾದ ಸುಹಾನ್ ಆಳ್ವ ಅವರು ನಿರ್ವಹಿಸಿದರು.

ಮಂಗಳೂರು ವಕೀಲರ ಸಂಘದ ಚುನಾವಣೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟ ಹಿರಿಯ ವಕೀಲರಾದ ಶ್ರೀ ಪ್ರೇಮನಾಥ್ ಅವರನ್ನು ಈ ಸಂದರ್ಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಜೊತೆಗೆ ಸಂಘದ ನೂತನ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ನ್ಯಾಯಾಂಗ ಅಧಿಕಾರಿಗಳು, ಹಿರಿಯ ಹಾಗೂ ಕಿರಿಯ ವಕೀಲರು, ಸಂಘದ ಸದಸ್ಯರು ಮತ್ತು ಗಣ್ಯರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed