ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಪ್ರಭಾವಿ ಮುಖವಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ಗೆ ಡಿಕೆ ಶಿವಕುಮಾರ್ ನೂತನ ಸಂಪುಟದಲ್ಲಿ ಮೊದಲ ಅವಕಾಶ ಕೈತಪ್ಪಿದೆ. ಸಚಿವ ಸಂಪುಟ ವಿಸ್ತರಣೆ ವೇಳೆಯೂ ಸ್ಥಾನ ತಪ್ಪುವ ಸಾಧ್ಯತೆ ದಟ್ಟವಾಗಿದೆ. ಮುಂದಿನ ದಿನಗಳಲ್ಲೂ ಕಾಂಗ್ರೆಸ್ 2.0 ಸರ್ಕಾರದಲ್ಲಿ ಜಮೀರ್‌ಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಗಳು ಕ್ಷೀಣಿಸಿವೆ ಎಂದು ಉನ್ನತ ಮೂಲಗಳು ತಿಳಿಸಿವೆ. ದಾವಣಗೆರೆ ದಕ್ಷಿಣ ಉಪಚುನಾವಣೆಯ ವೇಳೆ ಉಂಟಾದ ಆಂತರಿಕ ಭಿನ್ನಮತ ಹಾಗೂ ಬಂಡಾಯವೇ ಜಮೀರ್‌ಗೆ ಹಿನ್ನಡೆಯಾಗಲು ಪ್ರಮುಖ ಕಾರಣ ಎನ್ನಲಾಗಿದೆ.ದಾವಣಗೆರೆ ಉಪಚುನಾವಣೆ ಬಂಡಾಯ ಹಾಗೂ ಹೈಕಮಾಂಡ್ ಅಸಮಾಧಾನಏಪ್ರಿಲ್ 9 ರಂದು ನಡೆದಿದ್ದ ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಅಲ್ಪಸಂಖ್ಯಾತ ಮತಬ್ಯಾಂಕ್ ಭಾರಿ ಪ್ರಮಾಣದಲ್ಲಿ ಒಡೆದುಹೋಗಿತ್ತು. ಸುಮಾರು 20 ಕ್ಕೂ ಹೆಚ್ಚು ಮುಸ್ಲಿಂ ಪಕ್ಷೇತರ ಅಭ್ಯರ್ಥಿಗಳು ಕಣಕ್ಕಿಳಿದು ಅಲ್ಪಸಂಖ್ಯಾತರ ಮತಗಳನ್ನು ಹಂಚಿಕೊಂಡಿದ್ದರು. ಇದರೊಂದಿಗೆ ಎಸ್‌ಡಿಪಿಐ (SDPI) ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಅವರು ಬರೋಬ್ಬರಿ 19,000 ಮತಗಳನ್ನು ಪಡೆದು ತೃತೀಯ ಸ್ಥಾನ ಗಳಿಸಿದ್ದು ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆ ತಂದಿತ್ತು. ಈ ಇಡೀ ಅಸಮಾಧಾನ ಮತ್ತು ಬಂಡಾಯದ ಹಿಂದೆ ಜಮೀರ್ ಅಹ್ಮದ್ ಖಾನ್ ಅವರ ಕೈವಾಡವಿದೆ ಎಂದು ಹೈಕಮಾಂಡ್‌ಗೆ ದೂರು ಸಲ್ಲಿಕೆಯಾಗಿತ್ತು. ವಿಡಿಯೋ ಹಾಗೂ ಆಡಿಯೋವೊಂದು ವೈರಲ್ ಆಗಿದ್ದು, ಅದು ಎಐ (AI) ಸೃಷ್ಟಿತ ಎಂದು ಜಮೀರ್ ಸಮರ್ಥಿಸಿಕೊಂಡಿದ್ದರೂ ವರಿಷ್ಠರು ಅದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಪಕ್ಷ ವಿರೋ ಜಬ್ಬಾರ್ ಮತ್ತು ನಸೀರ್ ಅಹ್ಮದ್ ಅವರನ್ನು ಕೈಬಿಡಲಾಗಿದ್ದು, ಈಗ ಜಮೀರ್ ಅವರ ಹೆಸರನ್ನು ಮೊದಲ ಪಟ್ಟಿಯಿಂದ ದೂರ ಇಡಲಾಗಿದೆ.
ಡಿಕೆ ಶಿವಕುಮಾರ್ ಸಂಪುಟದಲ್ಲಿ ಜಮೀರ್ ಅಹ್ಮದ್‌ಗೆ ಶಾಕ್! ರಾಜಕೀಯ ವಲಯದಲ್ಲಿ ಭಾರಿ ಚರ್ಚೆ
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಪ್ರಭಾವಿ ಮುಖವಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ಗೆ ಡಿಕೆ ಶಿವಕುಮಾರ್ ನೂತನ ಸಂಪುಟದಲ್ಲಿ ಮೊದಲ ಅವಕಾಶ ಕೈತಪ್ಪಿದೆ. ಸಚಿವ ಸಂಪುಟ ವಿಸ್ತರಣೆ ವೇಳೆಯೂ ಸ್ಥಾನ ತಪ್ಪುವ ಸಾಧ್ಯತೆ ದಟ್ಟವಾಗಿದೆ. ಮುಂದಿನ ದಿನಗಳಲ್ಲೂ ಕಾಂಗ್ರೆಸ್ 2.0 ಸರ್ಕಾರದಲ್ಲಿ ಜಮೀರ್‌ಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಗಳು ಕ್ಷೀಣಿಸಿವೆ ಎಂದು ಉನ್ನತ ಮೂಲಗಳು ತಿಳಿಸಿವೆ. ದಾವಣಗೆರೆ ದಕ್ಷಿಣ ಉಪಚುನಾವಣೆಯ ವೇಳೆ ಉಂಟಾದ ಆಂತರಿಕ ಭಿನ್ನಮತ ಹಾಗೂ ಬಂಡಾಯವೇ ಜಮೀರ್‌ಗೆ ಹಿನ್ನಡೆಯಾಗಲು ಪ್ರಮುಖ…
Previous Post
Next Post
Leave a Reply
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed












