ಮಂಗಳೂರು: ಸೆಪ್ಟೆಂಬರ್ 6ರಂದು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ “ಬೆಳ್ಳಿ ಹಬ್ಬ ಸಮಾರಂಭ”

ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ (ಮಂಗಳೂರು ಮತ್ತು ಉಡುಪಿ ಜಿಲ್ಲೆಗಳು) ಅಭಿವೃದ್ಧಿ ಹಾಗೂ ಪರಿಸರ ಸಂರಕ್ಷಣೆಯ ಪ್ರಮುಖ ವಿಚಾರಗಳ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಗಮನ ಸೆಳೆಯುತ್ತಾ ಕಾರ್ಯನಿರ್ವಹಿಸುತ್ತಿರುವ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ 25ನೇ ವರ್ಷದ ಬೆಳ್ಳಿ ಹಬ್ಬ ಸಮಾರಂಭ ಸೆಪ್ಟೆಂಬರ್ 6ರಂದು ಮಂಗಳೂರಿನಲ್ಲಿ ನಡೆಯಲಿದೆ. ನಗರದ ಕುದ್ಮುಲ್ ರಂಗರಾವ್ ಟೌನ್‌ಹಾಲ್, ಹಂಪನಕಟ್ಟೆ ಇಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಗೆ ಸಮಾರಂಭ ಆಯೋಜಿಸಲಾಗಿದೆ.ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ.ಸಮಿತಿಯ ಅಧ್ಯಕ್ಷ…

ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ (ಮಂಗಳೂರು ಮತ್ತು ಉಡುಪಿ ಜಿಲ್ಲೆಗಳು) ಅಭಿವೃದ್ಧಿ ಹಾಗೂ ಪರಿಸರ ಸಂರಕ್ಷಣೆಯ ಪ್ರಮುಖ ವಿಚಾರಗಳ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಗಮನ ಸೆಳೆಯುತ್ತಾ ಕಾರ್ಯನಿರ್ವಹಿಸುತ್ತಿರುವ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ 25ನೇ ವರ್ಷದ ಬೆಳ್ಳಿ ಹಬ್ಬ ಸಮಾರಂಭ ಸೆಪ್ಟೆಂಬರ್ 6ರಂದು ಮಂಗಳೂರಿನಲ್ಲಿ ನಡೆಯಲಿದೆ.


ನಗರದ ಕುದ್ಮುಲ್ ರಂಗರಾವ್ ಟೌನ್‌ಹಾಲ್, ಹಂಪನಕಟ್ಟೆ ಇಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಗೆ ಸಮಾರಂಭ ಆಯೋಜಿಸಲಾಗಿದೆ.
ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ.
ಸಮಿತಿಯ ಅಧ್ಯಕ್ಷ ಥೋನ್ಸೆ ನಿತ್ಯಾನಂದ ಡಿ. ಕೋಟ್ಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ.

ಎನ್‌ಆರ್‌ಐ, ಇನ್‌ಸ್ಟಿಟ್ಯೂಟ್ ಆಫ್ ಡೈರೆಕ್ಸರ್ಸ್ (ಇಂಡಿಯಾ-ಗ್ಲೋಬಲ್)ನ ಡಿಸ್ಟಿಂಗ್ವಿಶ್ ಫೆಲೋ ಡಾ. ರೊನಾಲ್ಡ್ ಕೊಲಾಕೋ ಅವರು “ಮಂಗಳೂರು ಮತ್ತು ಉಡುಪಿ ಜಿಲ್ಲೆಗಳ ಭವಿಷ್ಯದ ಯೋಜನೆ, ಕೈಗಾರಿಕಾ ಹಾಗೂ ವಾಣಿಜ್ಯ ಅಭಿವೃದ್ಧಿ” ಕುರಿತು ಮುಖ್ಯ ಭಾಷಣ ಮಾಡಲಿದ್ದಾರೆ.


ಸಮಿತಿಯ ಸಂಸ್ಥಾಪಕ ಥೋನ್ಸೆ ಜಯಕೃಷ್ಣ ಎ. ಶೆಟ್ಟಿ ಅವರು ಸಮಿತಿಯ ಭವಿಷ್ಯದ ದೃಷ್ಟಿಕೋನ ಹಾಗೂ Vision Statement ಮಂಡಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಂಗಳೂರು ಶಾಸಕ ಡಿ. ವೇದವ್ಯಾಸ ಕಾಮತ್, ಪುತ್ತೂರು ಶಾಸಕ ಅಶೋಕ್ ರೈ, ಕರ್ನಾಟಕ ರಾಜ್ಯ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ, ಎಂಆರ್‌ಜಿ ಗ್ರೂಪ್‌ನ ಸಿಎಂಡಿ ಡಾ. ಕೆ. ಪ್ರಕಾಶ್ ಶೆಟ್ಟಿ, ಸೌದಿ ಅರೇಬಿಯಾದ ಖ್ಯಾತ ಉದ್ಯಮಿ ಜಕಾರಿಯಾ ಜೋಕಟ್ಟೆ, ಮುಂಬೈ ಬಂಟ್ಸ್ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಹಾಗೂ ವಿಶ್ವ ದೇವಾಡಿಗ ಮಹಾಮಂಡಲದ ಅಧ್ಯಕ್ಷ ಧರ್ಮಪಾಲ ದೇವಾಡಿಗ ಮತ್ತಿತರರು ಉಪಸ್ಥಿತರಿರಲಿದ್ದಾರೆ.


ಬೆಳ್ಳಿ ಹಬ್ಬದ ಅಂಗವಾಗಿ ಮಧ್ಯಾಹ್ನ 3ರಿಂದ 4 ಗಂಟೆಯವರೆಗೆ ಪುತ್ತೂರಿನ ನಾಟ್ಯರಂಗ ಸಂಸ್ಥೆಯಿಂದ ‘ನಾಟ್ಯ ಲಹರಿ’ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ವಿದುಷಿ ಮಂಜುಳಾ ಸುಬ್ರಹ್ಮಣ್ಯ ನಿರ್ದೇಶನದಲ್ಲಿ ಕಾರ್ಯಕ್ರಮ ಮೂಡಿಬರಲಿದೆ. ಸಂಜೆ 7.30ಕ್ಕೆ ಭೋಜನ ವ್ಯವಸ್ಥೆ ಇರಲಿದೆ.


ನೆಲ-ಜಲ ಉಳಿಸಿ, ಉದ್ದಿಮೆ ಬೆಳೆಸಿ, ಪ್ರಗತಿ ಸಾಧಿಸಿ, ಬಡತನ ನಿವಾರಿಸಿ, ನಮ್ಮೂರ ಅಭಿವೃದ್ಧಿ-ನಮ್ಮೆಲ್ಲರ ಸಮಗ್ರ ಸಮೃದ್ಧಿ” ಎಂಬ ಆಶಯದೊಂದಿಗೆ ಸಮಿತಿ ತನ್ನ 25 ವರ್ಷಗಳ ಸೇವಾ ಪಯಣವನ್ನು ಮುನ್ನಡೆಸುತ್ತಿದೆ. ಪರಿಸರ, ಗಾಳಿ, ನೀರು ಮತ್ತು ಭೂಮಿಯನ್ನು ಸಂರಕ್ಷಿಸುವುದರ ಜೊತೆಗೆ ಸ್ಥಳೀಯ ಪ್ರದೇಶಗಳನ್ನು ಸ್ವಚ್ಛವಾಗಿಡುವುದು, ಕೈಗಾರಿಕೆ ಹಾಗೂ ಅಭಿವೃದ್ಧಿಗೆ ಬೆಂಬಲ ನೀಡುವುದು, ಉದ್ಯೋಗ ಸೃಷ್ಟಿಸುವುದು ಮತ್ತು ಬಡತನ ನಿರ್ಮೂಲನೆಗೆ ಕೈಜೋಡಿಸುವುದು ಸಮಿತಿಯ ಪ್ರಮುಖ ಧೈಯವಾಗಿದೆ.
ಜಾತಿ ಮತ್ತು ಧರ್ಮವನ್ನು ಪ್ರೀತಿಸುವುದು ನಮ್ಮ ಜವಾಬ್ದಾರಿಯಾದರೆ, ಇತರ ಜಾತಿ-ಧರ್ಮಗಳನ್ನು ಗೌರವಿಸುವುದು ನಮ್ಮ ಪರಮ ಜವಾಬ್ದಾರಿ ಎಂಬ
ನಿಟ್ಟಿನಲ್ಲಿ ಸಹಕಾರ ನೀಡುವ ಉದ್ದೇಶವನ್ನು ಸಮಿತಿ ಹೊಂದಿದೆ.


ಬೆಳ್ಳಿ ಹಬ್ಬದ ಈ ವಿಶೇಷ ಸಮಾರಂಭಕ್ಕೆ ಸಾರ್ವಜನಿಕರು, ಪರಿಸರಾಸಕ್ತರು, ಉದ್ಯಮಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಮಿತಿಯ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಗೌರವಾನ್ವಿತ ಅಧ್ಯಕ್ಷರು ಪದ್ಮವಿಭೂಷಣ ಡಾ. ಬಿ. ಎಂ. ಹೆಗ್ಡೆ, ಉಡುಪಿ ಮತ್ತು ದಕ್ಷಿಣ ಕನ್ನಡ ಅಧ್ಯಕ್ಷರು ಹರೀಶ್‌ಕುಮಾ‌ರ್ ಎಂ. ಶೆಟ್ಟಿ, ಗೌರವ ಖಜಾಂಚಿ ಸದಾನಂದ ಎನ್. ಆಚಾರ್ಯ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರು ಜಿ. ಟಿ. ಆಚಾರ್ಯ, ರಾಜ್ಯ ಸಂಯೋಜಕರು ಕೆ. ಪಿ. ಜಗದೀಶ್ ಅಧಿಕಾರಿ, ಸುರೇಂದ್ರ ಮೆಂಡನ್, ಮುಂಡೂರು ಸುರೇಂದ್ರ ಸಾಲ್ಯಾನ್, ಗೌರವ ಪ್ರಧಾನ ಕಾರ್ಯದರ್ಶಿ ಡಾ. ಆರ್. ಕೆ. ಶೆಟ್ಟಿ, ನಿಧಿ ಸಂಗ್ರಹ ಸಮಿತಿ ಅಧ್ಯಕ್ಷರು ದಯಾಸಾಗರ ಚೌಟ ವಕ್ತಾರರು,ಪ್ರಭಾಕರ ಬಂಗೇರ, ಕಾರ್ಕಳ, ಲೆಕ್ಕಾಧಿಕಾರಿ ಹಾಗೂ ಗೌರವ ಕಾರ್ಯದರ್ಶಿಗಳು ಗೌರವ ಖಜಾಂಚಿ ಸಲಹೆಗಾರರು, ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಎಲ್ಲಾ ಪದಾಧಿಕಾರಿಗಳು ಆಹ್ವಾನಿಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed