,

ಸ್ಟಾಕ್ ಮಾರ್ಕೆಟ್ ನಲ್ಲಿ ಲಾಸ್ : ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆಗೆ ಶರಣು!

ಷೇರು ಮಾರುಕಟ್ಟೆಯಲ್ಲಿ (ಸ್ಟಾಕ್ ಮಾರ್ಕೆಟ್) ಭಾರಿ ಪ್ರಮಾಣದ ಹಣ ಕಳೆದುಕೊಂಡಿದ್ದಕ್ಕೆ ಮನನೊಂದ ಯುವಕನೊಬ್ಬ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕುಂಬಳದಾಳು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕನನ್ನು ಕವನ್ (24) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ, ಕವನ್ ಇತ್ತೀಚಿನ ದಿನಗಳಲ್ಲಿ ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡಿದ್ದರು ಎನ್ನಲಾಗಿದೆ. ಆದರೆ ಅದರಲ್ಲಿ ನಿರೀಕ್ಷಿತ ಮಟ್ಟದ ಲಾಭ ಸಿಗದೆ ಭಾರಿ ನಷ್ಟ ಅನುಭವಿಸಿದ್ದರು. ಇದರಿಂದಾಗಿ…

ಷೇರು ಮಾರುಕಟ್ಟೆಯಲ್ಲಿ (ಸ್ಟಾಕ್ ಮಾರ್ಕೆಟ್) ಭಾರಿ ಪ್ರಮಾಣದ ಹಣ ಕಳೆದುಕೊಂಡಿದ್ದಕ್ಕೆ ಮನನೊಂದ ಯುವಕನೊಬ್ಬ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕುಂಬಳದಾಳು ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕನನ್ನು ಕವನ್ (24) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ, ಕವನ್ ಇತ್ತೀಚಿನ ದಿನಗಳಲ್ಲಿ ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡಿದ್ದರು ಎನ್ನಲಾಗಿದೆ. ಆದರೆ ಅದರಲ್ಲಿ ನಿರೀಕ್ಷಿತ ಮಟ್ಟದ ಲಾಭ ಸಿಗದೆ ಭಾರಿ ನಷ್ಟ ಅನುಭವಿಸಿದ್ದರು. ಇದರಿಂದಾಗಿ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು, ಭವಿಷ್ಯದ ಚಿಂತೆಯಿಂದ ಮನನೊಂದು ಈ ತೀವ್ರ ನಿರ್ಧಾರ ಕೈಗೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಘಟನೆ ನಡೆದ ತಕ್ಷಣ ಸ್ಥಳಕ್ಕೆ ನಾಪೋಕ್ಲು ಪೊಲೀಸ್ ಠಾಣೆಯ ಅಧಿಕಾರಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಕವನ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವಕನ ಆತ್ಮಹತ್ಯೆಗೆ ನಿಖರ ಕಾರಣವೇನು ಹಾಗೂ ಆತ ಬಳಸಿದ ಬಂದೂಕು ಯಾರಿಗೆ ಸೇರಿದ್ದು ಎಂಬಿತ್ಯಾದಿ ವಿಷಯಗಳ ಕುರಿತು ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed