ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಕೊರತೆಯ ಲಾಭ ಪಡೆದು ಕೆಲವರು ಅಕ್ರಮವಾಗಿ ಗೃಹಬಳಕೆ ಸಿಲಿಂಡರ್‌ಗಳನ್ನು ಸಂಗ್ರಹಿಸಿ ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.
ಮಂಗಳೂರು ನಗರದ ಅಳಕೆ, ಕುದ್ರೋಳಿ, ಜೆಪ್ಪು, ಕಾರ್ ಸ್ಟ್ರೀಟ್ ಸೇರಿದಂತೆ ವಿವಿಧೆಡೆ ದುಬಾರಿ ಬೆಲೆಗೆ LPG ಮಾರಾಟ ಮಾಡುತ್ತಿದ್ದಾರೆ.
ಪ್ರಮುಖವಾಗಿ, ವಾಣಿಜ್ಯ ಬಳಕೆಯ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿರುವುದು ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತವನ್ನು ನೀಡುತ್ತಿದೆ. ಪರಿಸ್ಥಿತಿಯ ಲಾಭ ಪಡೆಯುತ್ತಿರುವ ಕಾಳಸಂತೆ ಮಾರಾಟಗಾರರು ದುಪ್ಪಟ್ಟು ಬೆಲೆಗೆ ಸಿಲಿಂಡರ್ ಮಾರಾಟ ಮಾಡುತ್ತಿದ್ದಾರೆ. ಸಿಲಿಂಡರ್’ಗಳಿಗೆ 3,200 – 3,500 ರೂಪಾಯಿವರೆಗೆ ಮಾರಾಟ ಮಾಡಲಾಗುತ್ತಿದೆ.
ಈ ಬಗ್ಗೆ ಸಚಿವ H.K ಮುನಿಯಪ್ಪ ಎಚ್ಚರಿಕೆ ನೀಡಿದರು ಬ್ಲ್ಯಾಕ್ ನಲ್ಲಿ ಗ್ಯಾಸ್ ಸರಬರಾಜು ಮಾಡುವುದು ಮಾತ್ರ ನಿಂತಿಲ್ಲ, ಸರಕಾರವು ಮಂಗಳೂರಿನ ಎಲ್ಲಾ ಗ್ಯಾಸ್ ಏಜೆನ್ಸಿಗಳಿಗೂ ಎಚ್ಚರಿಕೆ ನೀಡಿ, ಬ್ಲಾಕ್ ನಲ್ಲಿ ಗ್ಯಾಸ್ ನೀಡುವವರ ವಿರುದ್ಧದ ಕಠಿಣ ಕ್ರಮ ಕೈಗೊಳ್ಳಬೇಕು
