,

ಪ್ರಿಯಾಂಕ್ ಖರ್ಗೆ ವಿರುದ್ಧ ಜಾತಿ ನಿಂದನೆ; ಕಾರ್ಕಳದಲ್ಲಿ ಪ್ರಕರಣ ದಾಖಲು, ಆರೋಪಿ ಜೈಲುಪಾಲು

ಕಾರ್ಕಳ: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ, ಜಾತಿನಿಂದನೆ ಮಾಡಿ ಜೀವ ಬೆದರಿಕೆಯೊಡ್ಡಿರುವ ಆರೋಪದಲ್ಲಿ ಆರೋಪಿಯೋರ್ವನನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.ಕಾರ್ಕಳ ಕೇರ್ವಾಶೆ ನಲ್ಕೆದಬೆಟ್ಟು ನಿವಾಸಿ ಸುಧೀರ ಬಂಗೇರ(48) ಬಂಧಿತ ಆರೋಪಿ.’ನಮ್ಮ ಕಾರ್ಲ’ ಎಂಬ ಫೇಸ್‌ಬುಕ್ ಖಾತೆಯಲ್ಲಿ ಕರ್ನಾಟಕ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಪೋಟೊ ಹಾಕಿ ಅದರಲ್ಲಿ ‘ಆರೆಸ್ಸೆಸ್ ಇನ್ನು ಎರಡು ವರ್ಷಗಳ ಅವಧಿ ಕೋಮು ವಾದವನ್ನು ಉಸಿರಾಡುವುದಿಲ್ಲ. ಕಾರಣ ಗೃಹಮಂತ್ರಿ ಸ್ಥಾನದಲ್ಲಿ ಸೌಮ್ಯ ಸ್ವಭಾವದ…

ಕಾರ್ಕಳ: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ, ಜಾತಿನಿಂದನೆ ಮಾಡಿ ಜೀವ ಬೆದರಿಕೆಯೊಡ್ಡಿರುವ ಆರೋಪದಲ್ಲಿ ಆರೋಪಿಯೋರ್ವನನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.ಕಾರ್ಕಳ ಕೇರ್ವಾಶೆ ನಲ್ಕೆದಬೆಟ್ಟು ನಿವಾಸಿ ಸುಧೀರ ಬಂಗೇರ(48) ಬಂಧಿತ ಆರೋಪಿ.’ನಮ್ಮ ಕಾರ್ಲ’ ಎಂಬ ಫೇಸ್‌ಬುಕ್ ಖಾತೆಯಲ್ಲಿ ಕರ್ನಾಟಕ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಪೋಟೊ ಹಾಕಿ ಅದರಲ್ಲಿ ‘ಆರೆಸ್ಸೆಸ್ ಇನ್ನು ಎರಡು ವರ್ಷಗಳ ಅವಧಿ ಕೋಮು ವಾದವನ್ನು ಉಸಿರಾಡುವುದಿಲ್ಲ. ಕಾರಣ ಗೃಹಮಂತ್ರಿ ಸ್ಥಾನದಲ್ಲಿ ಸೌಮ್ಯ ಸ್ವಭಾವದ ಸಚಿವರಿಲ್ಲ’ ಎಂಬ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ಫೋಸ್ಟ್ ಮಾಡಲಾಗಿತ್ತು.ಈ ಪೋಸ್ಟ್‌ಗೆ ಸುಧೀರ್ ಬಂಗೇರ ಎಂಬಾತ ಜೂ.6ರಂದು ಕಮೆಂಟ್ ಹಾಕಿದ್ದು, ಅದರಲ್ಲಿ ಅವಹೇಳನಕಾರಿಯಾಗಿ ಓರ್ವ ದಲಿತ ಸಚಿವರ ವಿರುದ್ಧ ಕಮೆಂಟ್ ಹಾಕಿರುವುದಾಗಿ ದೂರಲಾಗಿದೆ. ಸುಧೀರ ಬಂಗೇರ ಸಾಮಾಜಿಕ ಜಾಲತಾಣದಲ್ಲಿ ಸಾಮಾಜಿಕ ಶಾಂತಿ ಮತ್ತು ಸಾಮರಸ್ಯಕ್ಕೆ ಹಾನಿ ಮಾಡುವ ಚಟುವಟಿಕೆಯಲ್ಲಿ ತೊಡಗಿ ದಲಿತ ಸಚಿವರಿಗೆ ಜಾತಿ ನಿಂದನೇ ಮಾಡಿ ಜೀವ ಬೆದರಿಕೆ ಹಾಕಿರುವುದಾಗಿ ಕಾರ್ಕಳ ನಿಟ್ಟೆ ಅತ್ತೂರಿನ ಸುರೇಶ ಚೇತನಹಳ್ಳಿ ದೂರು ನೀಡಿದ್ದಾರೆ.ದೂರಿನ ಮೇರೆಹೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕಾರ್ಕಳ ನಗರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ : 82/2026 ಕಲಂ. 351(3), 196, 353(2)BNS ಹಾಗೂ 3(1) (r) (u) SC/ST Act ರಂತೆ ಪ್ರಕರಣ ದಾಖಲಾಗಿರುತ್ತದೆ. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಪ್ರಕರಣದ ಆರೋಪಿ ಸುಧೀರ ಬಂಗೇರನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed