ಮಂಗಳೂರು: ಉದ್ಯೋಗಕ್ಕಾಗಿ ಇಸ್ರೇಲ್ಗೆ ತೆರಳಿದ್ದ ಮಂಗಳೂರು ಮೂಲದ 41 ವರ್ಷದ ಶಡ್ರಕ್ ಇಮ್ಯಾನುವಲ್ ಅವರು ನಿಗೂಢ ಪರಿಸ್ಥಿತಿಯಲ್ಲಿ ನಾಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಪತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗದ ಹಿನ್ನೆಲೆಯಲ್ಲಿ ಅವರ ಪತ್ನಿ, ಪತಿಯನ್ನು ಪತ್ತೆಹಚ್ಚಲು ನೆರವಾಗುವಂತೆ ಮಂಗಳೂರು ಪೊಲೀಸ್ ಕಮಿಷನರ್ ಹಾಗೂ ಭಾರತೀಯ ರಾಯಭಾರ ಕಚೇರಿಗೆ ಮನವಿ ಸಲ್ಲಿಸಿದ್ದಾರೆ.
ಮಂಗಳೂರಿನ ಪಡೀಲ್ ಸಮೀಪದ ಕಣ್ಣೂರು ಕೊಡೆಕ್ಕಲ್ ನಿವಾಸಿಯಾಗಿರುವ ಶಡ್ರಕ್ ಇಮ್ಯಾನುವಲ್ ಅವರು, ಉದ್ಯೋಗದ ನಿಮಿತ್ತ 2025ರ ಮೇ 16ರಂದು ಇಸ್ರೇಲ್ಗೆ ತೆರಳಿದ್ದರು. ಮಂಗಳೂರಿನ ಫರ್ನಾಂಡಿಸ್ ಗ್ರೂಪ್ ಎಂಬ ಉದ್ಯೋಗ ನೇಮಕಾತಿ ಸಂಸ್ಥೆಯ ಮೂಲಕ ಅಧಿಕೃತ ಕೆಲಸದ ವೀಸಾ ಪಡೆದು ಅವರು ವಿದೇಶಕ್ಕೆ ಪ್ರಯಾಣಿಸಿದ್ದರು ಎನ್ನಲಾಗಿದೆ.
ಇಸ್ರೇಲ್ನ ನಜರೆತ್ ಸಮೀಪದ ನೊಫ್ ಹಗಲಿಲ್ ಪ್ರದೇಶದಲ್ಲಿರುವ ಯುಸಿಟಿ ಲಿಕ್ವಿಡ್ ಸೊಲ್ಯೂಷನ್ಸ್ (UCT Liquid Solutions) ಕಂಪನಿಯಲ್ಲಿ ಅವರು ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಆದರೆ, ಇದೀಗ ಶಡ್ರಕ್ ಇಮ್ಯಾನುವಲ್ ಅವರು ನಾಪತ್ತೆಯಾಗಿರುವುದು ಕುಟುಂಬಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಪತಿಯ ಬಗ್ಗೆ ಮಾಹಿತಿ ಸಿಗದೆ ಪತ್ನಿ ಕಳವಳಗೊಂಡಿದ್ದು, ಅವರನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಹಾಗೂ ಇಸ್ರೇಲ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ನೆರವು ಕೋರಲಾಗಿದೆ. ವಿದೇಶದಲ್ಲಿ ನಾಪತ್ತೆಯಾಗಿರುವ ವ್ಯಕ್ತಿಯನ್ನು ಪತ್ತೆಹಚ್ಚಲು ಅಗತ್ಯ ಮಾಹಿತಿ ಸಂಗ್ರಹಿಸಿ, ಕುಟುಂಬಕ್ಕೆ ಸ್ಪಷ್ಟ ಮಾಹಿತಿ ಒದಗಿಸುವಂತೆ ಮನವಿ ಮಾಡಲಾಗಿದೆ.















