ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ( ಮುಡಾ) ದ ಇಂಜಿನಿಯರ್ ಆಗಿದ್ದ ಅಕ್ಬರ್ ಪಾಷಾರವರ ಮನೆಗೆ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.
ಕೊಣಾಜೆ ಪರಿಸರದಲ್ಲಿ ಮುಡಾಗೆ ಸಂಬಂಧಿಸಿದ ಹಲವಾರು ಆಸ್ತಿಗಳಲ್ಲಿ ಅವ್ಯವಹಾರ ನಡೆದಿದ್ದು, ದಾಳಿ ವೇಳೆ ಸಂಬಂಧ ಪಟ್ಟ ಮಹತ್ವದ ದಾಖಲೆಗಳು ಪತ್ತೆಯಾಗಿವೆ.
ಮುಡಾದಲ್ಲಿ ನಡೆದ ಅಕ್ರಮ ಅವ್ಯವಹಾರಗಳ ಬಗ್ಗೆ ಖಚಿತ ಮಾಹಿತಿಯೊಂದಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮಾಹಿತಿ ಇದೆ.
ಅಕ್ಬರ್ ಪಾಷಾ ಮನೆಯಲ್ಲಿ ಅಧಿಕಾರಿಗಳ ಶೋಧ ಕಾರ್ಯ ಮುಂದುವರಿದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
