,

ಉಡುಪಿ: ಕಾಲೇಜಿಗೆ ಹೋಗು ಎಂದು ತಂದೆ ಬುದ್ಧಿಮಾತು ಹೇಳಿದ್ದಕ್ಕೆ ವಿದ್ಯಾರ್ಥಿ ಆತ್ಮ*ಹ*ತ್ಯೆ

ಉಡುಪಿ: ಸರಿಯಾಗಿ ಕಾಲೇಜಿಗೆ ಹೋಗು ಅಂತಾ ತಂದೆ ಬುದ್ಧಿಮಾತು ಹೇಳಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಲ್ಲೂರಿನ ಕೆರಾಡಿ ಗ್ರಾಮದ ಹಯ್ಯಂಗಾರಿನಲ್ಲಿ ನಡೆದಿದೆ.ಹಯ್ಯಂಗಾರು ನಿವಾಸಿ ಮಂಜುನಾಥ ನಾಯ್ಕ ಅವರ ಪುತ್ರ ಮನೀಷ್ (16) ಮೃತಪಟ್ಟ ವಿದ್ಯಾರ್ಥಿ. ಈತ ಉಡುಪಿಯ ಕೊಳಲಗಿರಿಯ ಜಿ.ಟಿ.ಟಿ.ಸಿ ಕಾಲೇಜಿನಲ್ಲಿ ಡಿಪ್ಲೋಮಾ ವಿದ್ಯಾಭ್ಯಾಸ ಮಾಡುತ್ತಿದ್ದ. ಇತ್ತೀಚೆಗೆ ಮನೀಷ್ ಸರಿಯಾಗಿ ಕಾಲೇಜಿಗೆ ಹೋಗುತ್ತಿರಲಿಲ್ಲ. ಈ ವಿಷಯ ತಿಳಿದ ತಂದೆ ಮಂಜುನಾಥ ಅವರು, ಮಗನ ಭವಿಷ್ಯದ ದೃಷ್ಟಿಯಿಂದ ಸರಿಯಾಗಿ ಕಾಲೇಜಿಗೆ ಹೋಗುವಂತೆ ಬುದ್ಧಿಮಾತು ಹೇಳಿದ್ದರು. ತಂದೆಯ ಮಾತಿನಿಂದ…

ಉಡುಪಿ: ಸರಿಯಾಗಿ ಕಾಲೇಜಿಗೆ ಹೋಗು ಅಂತಾ ತಂದೆ ಬುದ್ಧಿಮಾತು ಹೇಳಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಲ್ಲೂರಿನ ಕೆರಾಡಿ ಗ್ರಾಮದ ಹಯ್ಯಂಗಾರಿನಲ್ಲಿ ನಡೆದಿದೆ.ಹಯ್ಯಂಗಾರು ನಿವಾಸಿ ಮಂಜುನಾಥ ನಾಯ್ಕ ಅವರ ಪುತ್ರ ಮನೀಷ್ (16) ಮೃತಪಟ್ಟ ವಿದ್ಯಾರ್ಥಿ. ಈತ ಉಡುಪಿಯ ಕೊಳಲಗಿರಿಯ ಜಿ.ಟಿ.ಟಿ.ಸಿ ಕಾಲೇಜಿನಲ್ಲಿ ಡಿಪ್ಲೋಮಾ ವಿದ್ಯಾಭ್ಯಾಸ ಮಾಡುತ್ತಿದ್ದ. ಇತ್ತೀಚೆಗೆ ಮನೀಷ್ ಸರಿಯಾಗಿ ಕಾಲೇಜಿಗೆ ಹೋಗುತ್ತಿರಲಿಲ್ಲ. ಈ ವಿಷಯ ತಿಳಿದ ತಂದೆ ಮಂಜುನಾಥ ಅವರು, ಮಗನ ಭವಿಷ್ಯದ ದೃಷ್ಟಿಯಿಂದ ಸರಿಯಾಗಿ ಕಾಲೇಜಿಗೆ ಹೋಗುವಂತೆ ಬುದ್ಧಿಮಾತು ಹೇಳಿದ್ದರು.

ತಂದೆಯ ಮಾತಿನಿಂದ ಮನನೊಂದ ಮನೀಷ್, ಫೆಬ್ರವರಿ 16ರಂದು ರಾತ್ರಿ 9:30ರ ಸುಮಾರಿಗೆ ಮನೆಯಲ್ಲಿದ್ದ ಕಳೆ ನಾಶಕದ ವಿಷ ಪದಾರ್ಥ ಸೇವಿಸಿದ್ದಾನೆ. ಕೂಡಲೇ ಆತನನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಫೆಬ್ರವರಿ 19ರಂದು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಕಳೆದ 14 ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಮನೀಷ್, ಬುಧವಾರ (ಮಾರ್ಚ್ 4) ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ.ಈ ಸಂಬಂಧ ಮೃತನ ತಂದೆ ನೀಡಿದ ದೂರಿನ ಮೇರೆಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಯುಡಿಆರ್ (UDR) ಕ್ರಮಾಂಕ 03/2026, ಕಲಂ 194 BNSS ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed