ಮಂಗಳೂರು ನಗರದಲ್ಲಿ ಮೆಡಿಕಲ್ ಸ್ಟೋರ್‌ಗಳಿಗೆ ಪರವಾನಗಿ ನೀಡುವ ಪ್ರಕ್ರಿಯೆ ಇದೀಗ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ನಿಯಮಾನುಸಾರ ಪರಿಶೀಲನೆ ನಡೆಸಿ, ಅಗತ್ಯ ಮಾನದಂಡಗಳನ್ನು ಪೂರೈಸಿದ ಬಳಿಕವೇ ಮೆಡಿಕಲ್ ಸ್ಟೋರ್‌ಗಳಿಗೆ ಪರವಾನಗಿ ನೀಡಬೇಕಾದ ವ್ಯವಸ್ಥೆಯಲ್ಲಿ ಅಕ್ರಮ ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.
ಕೆಲವು ಕಡೆಗಳಲ್ಲಿ ಸೂಕ್ತ ಸ್ಥಳ ಪರಿಶೀಲನೆ ಹಾಗೂ ಅಗತ್ಯ ದಾಖಲೆಗಳ ಪರಿಶೀಲನೆ ನಡೆಸದೇ ಕೇವಲ ಹಣದ ವ್ಯವಹಾರದ ಆಧಾರದ ಮೇಲೆ ಮೆಡಿಕಲ್ ಸ್ಟೋರ್‌ಗಳಿಗೆ ಅನುಮತಿ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ.
ಇನ್ನೂ ಗಂಭೀರ ಆರೋಪವೆಂದರೆ, ಅಧಿಕಾರಿಗಳು ಮಧ್ಯವರ್ತಿಗಳನ್ನು ಇಟ್ಟು ಹೊಸ ಮೆಡಿಕಲ್ ಸ್ಟೋರ್‌ಗಳಿಗೆ ಪರವಾನಗಿ ಕೊಡಿಸುವುದು ಸೇರಿದಂತೆ ವಿವಿಧ ಕೆಲಸಗಳಿಗೆ ಹಣ ವಸೂಲಿ ಮಾಡಲಾಗುತ್ತಿದೆ ಎನ್ನಲಾಗಿದೆ.
ಮೆಡಿಕಲ್ ಸ್ಟೋರ್‌ಗಳಿಗೆ ಅಧಿಕಾರಿಗಳ ಮಾಸಿಕ ಭೇಟಿ ಕೂಡ ಇದೀಗ ಚರ್ಚೆಗೆ ಕಾರಣವಾಗಿದೆ. ಪ್ರತಿ ತಿಂಗಳು ಪರಿಶೀಲನೆಯ ಹೆಸರಿನಲ್ಲಿ ಭೇಟಿ ನೀಡಿ ‘ಮಾಮೂಲಿ’ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.
ಮೆಡಿಕಲ್ ಪರವಾನಗಿ ನೀಡುವ ಪ್ರಕ್ರಿಯೆ, ಸ್ಥಳ ಪರಿಶೀಲನಾ ವರದಿಗಳು, ಅಧಿಕಾರಿಗಳ ಭೇಟಿ ದಾಖಲೆಗಳು ಹಾಗೂ ಹಣದ ವ್ಯವಹಾರಗಳ ಕುರಿತು ಸಮಗ್ರ ತನಿಖೆ ನಡೆದರೆ ಮಾತ್ರ ಸತ್ಯ ಹೊರಬರಲು ಸಾಧ್ಯ.
ಜನರ ಆರೋಗ್ಯಕ್ಕೆ ಸಂಬಂಧಿಸಿದ ಔಷಧ ವ್ಯಾಪಾರದಲ್ಲಿ ನಿಯಮಗಳ ಉಲ್ಲಂಘನೆ ನಡೆದಿದ್ದರೆ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹವೂ ಕೇಳಿಬರುತ್ತಿದೆ.
ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೇ ಇಂತಹ ಭ್ರಷ್ಟಾಚಾರ ನಡೆಯುತ್ತಿರುವುದು ವಿಪರ್ಯಾಸವೆ ಸರಿ, ಕೂಡಲೇ ತನಿಖೆ ನಡೆಸಿ ಸೂಕ್ತ ರೀತಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲು ಆರೋಗ್ಯ ಸಚಿವರಲ್ಲಿ ವಿನಂತಿ















