,

ಇನ್ಮುಂದೆ ಪೊಲೀಸ್ ಅಧಿಕಾರಿಗಳು MLA, MLC, MP ನಂಬರ್ ಹೊಂದಿರೋದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ರಾಜ್ಯದ ಎಲ್ಲಾ ಹಂತದ ಪೊಲೀಸ್ ಅಧಿಕಾರಿಗಳು ಇನ್ಮುಂದೆ ಜನಪ್ರತಿನಿಧಿಗಳ ಕರೆಗಳನ್ನು ಕಡ್ಡಾಯವಾಗಿ ಸ್ವೀಕರಿಸಬೇಕು ಹಾಗೂ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಪೊಲೀಸ್ ಮಹಾನಿರ್ದೇಶಕರು (DGP) ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಇತ್ತೀಚೆಗೆ ನಡೆದ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆಯು ಈ ಮಹತ್ವದ ಸುತ್ತೋಲೆಯನ್ನು ಹೊರಡಿಸಿದೆ. ಇದರ ಪ್ರಮುಖ ಅಂಶಗಳು ಈ ಕೆಳಗಿನಂತಿವೆ: ಸುತ್ತೋಲೆಯಲ್ಲಿ ಏನಿದೆ ? ಸಂಪರ್ಕ ಸಂಖ್ಯೆ ಇಟ್ಟುಕೊಳ್ಳುವುದು ಕಡ್ಡಾಯ: ಎಲ್ಲಾ ಹಿರಿಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ವಿಧಾನಸಭಾ ಸದಸ್ಯರು (MLA), ವಿಧಾನ ಪರಿಷತ್ ಸದಸ್ಯರು (MLC),…

ರಾಜ್ಯದ ಎಲ್ಲಾ ಹಂತದ ಪೊಲೀಸ್ ಅಧಿಕಾರಿಗಳು ಇನ್ಮುಂದೆ ಜನಪ್ರತಿನಿಧಿಗಳ ಕರೆಗಳನ್ನು ಕಡ್ಡಾಯವಾಗಿ ಸ್ವೀಕರಿಸಬೇಕು ಹಾಗೂ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಪೊಲೀಸ್ ಮಹಾನಿರ್ದೇಶಕರು (DGP) ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಇತ್ತೀಚೆಗೆ ನಡೆದ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆಯು ಈ ಮಹತ್ವದ ಸುತ್ತೋಲೆಯನ್ನು ಹೊರಡಿಸಿದೆ. ಇದರ ಪ್ರಮುಖ ಅಂಶಗಳು ಈ ಕೆಳಗಿನಂತಿವೆ:

ಸುತ್ತೋಲೆಯಲ್ಲಿ ಏನಿದೆ ?

ಸಂಪರ್ಕ ಸಂಖ್ಯೆ ಇಟ್ಟುಕೊಳ್ಳುವುದು ಕಡ್ಡಾಯ: ಎಲ್ಲಾ ಹಿರಿಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ವಿಧಾನಸಭಾ ಸದಸ್ಯರು (MLA), ವಿಧಾನ ಪರಿಷತ್ ಸದಸ್ಯರು (MLC), ಲೋಕಸಭಾ ಸದಸ್ಯರು (MP) ಮತ್ತು ರಾಜ್ಯಸಭಾ ಸದಸ್ಯರ ಅಧಿಕೃತ ದೂರವಾಣಿ ಸಂಖ್ಯೆಗಳನ್ನು ಕಡ್ಡಾಯವಾಗಿ ತಮ್ಮ ಬಳಿ ಇಟ್ಟುಕೊಂಡಿರಬೇಕು.

ಕರೆ ಸ್ವೀಕರಿಸಲು ಸೂಚನೆ: ಜನಪ್ರತಿನಿಧಿಗಳು ಕರೆ ಮಾಡಿದಾಗ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು. ಒಂದು ವೇಳೆ ಕರ್ತವ್ಯದ ನಿಮಿತ್ತ ಅಥವಾ ತುರ್ತು ಕೆಲಸದ ನಡುವೆ ಕರೆ ಸ್ವೀಕರಿಸಲು ಸಾಧ್ಯವಾಗದಿದ್ದರೆ, ಆ ಕೆಲಸ ಮುಗಿದ ತಕ್ಷಣವೇ ಅವರಿಗೆ ಮರಳಿ ಕರೆ (Call Back) ಮಾಡುವುದು ಕಡ್ಡಾಯ.

ಸಮಸ್ಯೆಗಳ ಪರಿಹಾರ: ಜನಪ್ರತಿನಿಧಿಗಳು ಸಾರ್ವಜನಿಕ ಸಮಸ್ಯೆಗಳ ಕುರಿತು ಗಮನ ಸೆಳೆದಾಗ, ಅಧಿಕಾರಿಗಳು ಅದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತವಾಗಿ ಸ್ಪಂದಿಸಬೇಕು ಎಂದು ನಿರ್ದೇಶಿಸಲಾಗಿದೆ.

ಮುಖ್ಯ ಕಾರ್ಯದರ್ಶಿಗಳ ಕಚೇರಿಯಿಂದ ಬಂದಿದ್ದ ನಿರ್ದೇಶನದ ಮೇರೆಗೆ, ಪೊಲೀಸ್ ಇಲಾಖೆಯು ಈ ಸುತ್ತೋಲೆಯನ್ನು ಹೊರಡಿಸಿದೆ. ಜನಪ್ರತಿನಿಧಿಗಳು ನೀಡುವ ದೂರು ಅಥವಾ ಮಾಹಿತಿಗೆ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬ ಆರೋಪಗಳ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರುವಂತೆ ಎಲ್ಲಾ ಘಟಕದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed