,

ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಸುಳ್ಳು- ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ

ಮಂಗಳೂರು: ಮೂಡಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ ಕೇಳಿಬಂದಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಎಸಿಪಿ ನೇತೃತ್ವದಲ್ಲಿ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯ ಕುರಿತಾಗಿ ಯಾವುದೇ ಸಾಕ್ಷ್ಯಗಳು ಲಭಿಸಿಲ್ಲ ಎನ್ನಲಾಗುತ್ತಿದ್ದು, ಈ ಬಗ್ಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್ ಮಹಿಳಾ ಆಯೋಗಕ್ಕೆ ನೀಡಿರುವ ದೂರಿಗೆ ಸಂಬಂಧಿಸಿದಂತೆ ಯಾವುದೇ ಲೈಂಗಿಕ…

ಮಂಗಳೂರು: ಮೂಡಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ ಕೇಳಿಬಂದಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಎಸಿಪಿ ನೇತೃತ್ವದಲ್ಲಿ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯ ಕುರಿತಾಗಿ ಯಾವುದೇ ಸಾಕ್ಷ್ಯಗಳು ಲಭಿಸಿಲ್ಲ ಎನ್ನಲಾಗುತ್ತಿದ್ದು, ಈ ಬಗ್ಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್ ಮಹಿಳಾ ಆಯೋಗಕ್ಕೆ ನೀಡಿರುವ ದೂರಿಗೆ ಸಂಬಂಧಿಸಿದಂತೆ ಯಾವುದೇ ಲೈಂಗಿಕ ದೌರ್ಜನ್ಯದ ಸಾಕ್ಷ್ಯಗಳು ಲಭಿಸಿಲ್ಲ ಎಂದಿದ್ದಾರೆ.

ಆಡಿಯೋ ಮತ್ತು ವಿಡಿಯೋದಲ್ಲಿ ಇನ್ಸ್ ಪೆಕ್ಟರ್ ವರ್ತನೆ ಆಕ್ಷೇಪಾರ್ಹ, ದುರ್ನಡತೆಯಿಂದ ಕೂಡಿರುವಂಥದ್ದು. ಅದಕ್ಕೆ ಆತ ಬೆಲೆ ತೆರಬೇಕಾಗುತ್ತದೆ. ಆದರೆ ಈ ಆಡಿಯೋ ಅಥವಾ ವಿಡಿಯೋದಲ್ಲಿರುವವರು ಸುಮತಿ ನಾಯಕ್ ಆಗಲೀ, ಅವಿತಾ ಮಿನೇಜಸ್ ಆಗಲೀ ಅಲ್ಲ. ಯಾರು ಅದರಲ್ಲಿದ್ದಾರೋ ಅವರನ್ನು ತನಿಖೆಗೆ ಒಳಪಡಿಸಿದ್ದು ಅವರು ದೂರು ನೀಡಲು ನಿರಾಕರಿಸಿದ್ದಾರೆ. ಆದರೆ ಈ ಆಡಿಯೋ, ವಿಡಿಯೋಗಳನ್ನು ಮುಂದಿಟ್ಟು ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್ ದೂರು ನೀಡಿರುವುದು ದುರುದ್ದೇಶದಿಂದ ಕೂಡಿದೆ ಎಂದು ರೆಡ್ಡಿ ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯದ ಆರೋಪಗಳು ಸುಳ್ಳಾದರೂ, ಇನ್ಸ್ ಪೆಕ್ಟರ್ ಆಡಿಯೋ, ವಿಡಿಯೋದಲ್ಲಿ ಅಸಭ್ಯವಾಗಿ ಕಾಣಿಸಿಕೊಂಡಿದ್ದಕ್ಕೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ. ಅದಕ್ಕಾಗಿ ಈಗಾಗಲೇ ಅಮಾನತು ಕ್ರಮ ಜರುಗಿಸಲಾಗಿದೆ. ಕೆಲವು ಎಡವಟ್ಟು, ಹಳೆಯ ತಪ್ಪುಗಳಿಂದಾಗಿ ಅವರ ಮೇಲೆ ಸುಳ್ಳು ಆರೋಪಗಳು ಕೇಳಿಬಂದಿದೆ. ಈ ರೀತಿಯ ತಪ್ಪುಗಳು ಮಾಡಿಲ್ಲದೇ ಇರುತ್ತಿದ್ದರೆ ಇಂತಹ ಆಡಿಯೋ, ವಿಡಿಯೋಗಳು ಮುನ್ನೆಲೆಗೆ ಬರುತ್ತಿರಲಿಲ್ಲ. ಈ ತಪ್ಪುಗಳಿಗಾಗಿ ಬೆಲೆ ತೆರಲೇಬೇಕಾಗುತ್ತದೆ ಎಂದು ಹೇಳಿರುವ ಸುಧೀರ್ ರೆಡ್ಡಿ, ಇಲಾಖೆಯಲ್ಲಿ ಇಂತಹ ದುರ್ನಡತೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಠಾಣೆಗೆ ಬರುವ ಮಹಿಳೆಯರ ಜೊತೆಗೆ ವ್ಯವಹರಿಸುವಾಗ ಜಾಗ್ರತೆ ಇರಬೇಕು ಮತ್ತು ಭವಿಷ್ಯದಲ್ಲಿ ಇಂತಹ ವಿಡಿಯೋಗಳು ಬರದಂತೆ ನೋಡಿಕೊಳ್ಳಬೇಕು ಎಂದು ಕಮಿಷನರ್ ಸಹೋದ್ಯೋಗಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed