ಹಿರಿಯಡ್ಕ : ಆನ್‌ಲೈನ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಬರುತ್ತದೆ ಎಂದು ನಂಬಿಸಿ, ಮಹಿಳೆಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಳೆದ ಎರಡು ತಿಂಗಳ ಹಿಂದೆ ಅಪರಿಚಿತರು ಸಾಮಾಜಿಕ ಜಾಲತಾಣ ಅಥವಾ ಸಂದೇಶದ ಮೂಲಕ ಸಂಪರ್ಕಿಸಿ, ‘Stake JP’ ಎಂಬ ವೆಬ್‌ಸೈಟ್ ಬಗ್ಗೆ ಮಾಹಿತಿ ನೀಡಿದ್ದರು. ಈ ವೆಬ್‌ಸೈಟ್‌ನಲ್ಲಿ ಹಣವನ್ನು ಡಿಪಾಸಿಟ್ ಮಾಡಿದರೆ ಹೆಚ್ಚಿನ ಹಣ ಬರುತ್ತದೆ ಎಂದು ನಂಬಿಕೆ ಬರುವಂತೆ ಮಾತನಾಡಿದ್ದರು.ವಂಚಕರ ಮಾತನ್ನು ನಂಬಿದ ಮಹಿಳೆ ಅವರು, ಹಂತ ಹಂತವಾಗಿ ಒಟ್ಟು ₹4,02,000 ಹಣವನ್ನು ಡಿಪಾಸಿಟ್ ಮಾಡಿದ್ದಾರೆ. ಆರಂಭದಲ್ಲಿ ವಂಚಕರು ನಂಬಿಕೆ ಹುಟ್ಟಿಸಲು ಅಲ್ಪಸ್ವಲ್ಪ ಹಣವನ್ನು ವಾಪಸ್ ನೀಡಿದ್ದಾರೆ. ಆದರೆ, ಹೆಚ್ಚಿನ ಹಣವನ್ನು ಜಮೆ ಮಾಡಿದ ಬಳಿಕ, ಯಾವುದೇ ಲಾಭ ನೀಡದೆ ಅಥವಾ ಜಮೆ ಮಾಡಿದ ಹಣವನ್ನು ಮರಳಿಸದೆ ಸತಾಯಿಸಿದ್ದಾರೆ. ಒಟ್ಟಾರೆಯಾಗಿ ಶೀಲಾವತಿ ಅವರು ₹3,50,000 ಹಣವನ್ನು ಕಳೆದುಕೊಂಡು ವಂಚನೆಗೆ ಒಳಗಾಗಿದ್ದಾರೆ.ಈ ಕುರಿತು ಮಹಿಳೆ ನೀಡಿದ ದೂರಿನ ಮೇರೆಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಐಟಿ ಕಾಯ್ದೆಯಡಿ (IT Act) ಪ್ರಕರಣ ದಾಖಲಾಗಿದೆ. ಅಪರಾಧ ಕ್ರಮಾಂಕ: 42/2026, ಕಲಂ: 66(D) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸಾರ್ವಜನಿಕರು ಇಂತಹ ಅಪರಿಚಿತ ಲಿಂಕ್‌ಗಳನ್ನು ನಂಬಿ ಹಣ ಹೂಡಿಕೆ ಮಾಡದಂತೆ ಹಾಗೂ ಎಚ್ಚರಿಕೆಯಿಂದ ಇರಬೇಕೆಂದು ಪೊಲೀಸರು ಸೂಚಿಸಿದ್ದಾರೆ.
ಸೈಬರ್ ವಂಚಕರ ಹೊಸ ತಂತ್ರ: ಹೂಡಿಕೆ ಹೆಸರಿನಲ್ಲಿ ಹಿರಿಯಡ್ಕ ಮಹಿಳೆಗೆ ಲಕ್ಷಾಂತರ ನಷ್ಟ
ಹಿರಿಯಡ್ಕ : ಆನ್‌ಲೈನ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಬರುತ್ತದೆ ಎಂದು ನಂಬಿಸಿ, ಮಹಿಳೆಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಳೆದ ಎರಡು ತಿಂಗಳ ಹಿಂದೆ ಅಪರಿಚಿತರು ಸಾಮಾಜಿಕ ಜಾಲತಾಣ ಅಥವಾ ಸಂದೇಶದ ಮೂಲಕ ಸಂಪರ್ಕಿಸಿ, ‘Stake JP’ ಎಂಬ ವೆಬ್‌ಸೈಟ್ ಬಗ್ಗೆ ಮಾಹಿತಿ ನೀಡಿದ್ದರು. ಈ ವೆಬ್‌ಸೈಟ್‌ನಲ್ಲಿ ಹಣವನ್ನು ಡಿಪಾಸಿಟ್ ಮಾಡಿದರೆ ಹೆಚ್ಚಿನ ಹಣ ಬರುತ್ತದೆ ಎಂದು ನಂಬಿಕೆ ಬರುವಂತೆ ಮಾತನಾಡಿದ್ದರು.ವಂಚಕರ ಮಾತನ್ನು…
Previous Post
Next Post
Leave a Reply
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed












