ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 150ಕ್ಕೂ ಹೆಚ್ಚು ನಾಡಬಾಂಬ್ಗಳು ಮತ್ತು ಒಂದು ನಾಡಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ 35 ವರ್ಷದ ನರಸಿಂಹಪ್ಪ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಬಟ್ಲಹಳ್ಳಿ ಪೊಲೀಸರು ದಾಳಿ ನಡೆಸಿದ್ದು, ಆರೋಪಿಯ ಬಳಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸ್ಫೋಟಕಗಳು ಮತ್ತು ಬಂದೂಕನ್ನು ಜಪ್ತಿ ಮಾಡಿದ್ದಾರೆ.
ಇಷ್ಟೊಂದು ಪ್ರಮಾಣದ ನಾಡಬಾಂಬ್ಗಳು ಹಾಗೂ ಬಂದೂಕನ್ನು ಯಾವ ಉದ್ದೇಶಕ್ಕಾಗಿ ಸಂಗ್ರಹಿಸಿಡಲಾಗಿತ್ತು ಎಂಬ ಬಗ್ಗೆ ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.















