,

ಇನ್ಮುಂದೆ ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ಪೋನ್ ಕಾಲ್ ಸ್ವೀಕರಿಸಲೇಬೇಕು: ರಾಜ್ಯ ಸರ್ಕಾರ ಖಡಕ್ ಆದೇಶ

 ರಾಜ್ಯ ಸರ್ಕಾರದ ಎಲ್ಲಾ ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳಾದ ವಿಧಾನಸಭಾ ಹಾಗೂ ವಿಧಾನಪರಿಷತ್ತಿನ ಸದಸ್ಯರು ಮತ್ತು ಲೋಕಸಭಾ ಹಾಗೂ ರಾಜ್ಯ ಸಭಾ ಸದಸ್ಯರುಗಳ ದೂರವಾಣಿ ಸಂಖ್ಯೆಯನ್ನು ತಮ್ಮ ಬಳಿ ಕಡ್ಡಾಯವಾಗಿ ಇಟ್ಟುಕೊಳ್ಳಬೇಕು. ಅಲ್ಲದೇ ಅವರು ಕರೆ ಮಾಡಿದಾಗ ಕಡ್ಡಾಯವಾಗಿ ಸ್ವೀಕರಿಸುವಂತೆ ರಾಜ್ಯ ಸರ್ಕಾರವು ಖಡಕ್ ಆದೇಶ ಮಾಡಿದೆ. ಸರ್ಕಾರದ ಆದೇಶದಲ್ಲಿ ಏನಿದೆ? ಕರ್ನಾಟಕ ವಿಧಾನ ಪರಿಷತ್ತಿನ ಮಾನ್ಯ ಸಭಾಪತಿಯವರ ದಿನಾಂಕ:16.12.2025ರ ಪತ್ರದಲ್ಲಿ ತಿಳಿಸಿದಂತೆ, ರಾಜ್ಯದ ವಿವಿಧ ಭಾಗಗಳಿಂದ ಸಾರ್ವಜನಿಕರು ಅವರ ಸಮಸ್ಯೆಗಳನ್ನು ಮತ್ತು ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳುವ ಉದ್ದೇಶದಿಂದ…

 ರಾಜ್ಯ ಸರ್ಕಾರದ ಎಲ್ಲಾ ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳಾದ ವಿಧಾನಸಭಾ ಹಾಗೂ ವಿಧಾನಪರಿಷತ್ತಿನ ಸದಸ್ಯರು ಮತ್ತು ಲೋಕಸಭಾ ಹಾಗೂ ರಾಜ್ಯ ಸಭಾ ಸದಸ್ಯರುಗಳ ದೂರವಾಣಿ ಸಂಖ್ಯೆಯನ್ನು ತಮ್ಮ ಬಳಿ ಕಡ್ಡಾಯವಾಗಿ ಇಟ್ಟುಕೊಳ್ಳಬೇಕು. ಅಲ್ಲದೇ ಅವರು ಕರೆ ಮಾಡಿದಾಗ ಕಡ್ಡಾಯವಾಗಿ ಸ್ವೀಕರಿಸುವಂತೆ ರಾಜ್ಯ ಸರ್ಕಾರವು ಖಡಕ್ ಆದೇಶ ಮಾಡಿದೆ.

ಸರ್ಕಾರದ ಆದೇಶದಲ್ಲಿ ಏನಿದೆ?

ಕರ್ನಾಟಕ ವಿಧಾನ ಪರಿಷತ್ತಿನ ಮಾನ್ಯ ಸಭಾಪತಿಯವರ ದಿನಾಂಕ:16.12.2025ರ ಪತ್ರದಲ್ಲಿ ತಿಳಿಸಿದಂತೆ, ರಾಜ್ಯದ ವಿವಿಧ ಭಾಗಗಳಿಂದ ಸಾರ್ವಜನಿಕರು ಅವರ ಸಮಸ್ಯೆಗಳನ್ನು ಮತ್ತು ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳುವ ಉದ್ದೇಶದಿಂದ ಮಾನ್ಯ ವಿಧಾನಸಭಾ ಹಾಗೂ ವಿಧಾನಪರಿಷತ್ತಿನ ಸದಸ್ಯರುಗಳಿಗೆ ವಿನಂತಿಸಿಕೊಂಡಾಗ ಅನಿವಾರ್ಯವಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಬೇಕಾಗಿರುತ್ತದೆ. ಅಂತಹ ಸಂದರ್ಭಗಳಲ್ಲಿ ಜನಪ್ರತಿನಿಧಿಗಳ ದೂರವಾಣಿ ಕರೆಗಳನ್ನು ಕೆಲವು ಅಧಿಕಾರಿಗಳು ಸ್ವೀಕರಿಸದೇ ಇರುವುದು ಹಾಗೂ ಒಂದು ವೇಳೆ ಆ ಸಮಯದಲ್ಲಿ ಬೇರೆ ತುರ್ತು ಕಾರ್ಯದಲ್ಲಿ ನಿರತರಾಗಿದ್ದಲ್ಲಿ ತದನಂತರ ಸೌಜನ್ಯಕ್ಕಾದರೂ ಮರು ಕರೆ ಮಾಡದೆ ಇರುವುದು ನನ್ನ ಗಮನಕ್ಕೆ ಬಂದಿದೆ ಎಂದಿದ್ದಾರೆ.

ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಇನ್ನು ಮುಂದೆ ಎಲ್ಲಾ ಅಧಿಕಾರಿಗಳು ಜನಪ್ರತಿನಿಧಿಗಳಾದ ಮಾನ್ಯ ವಿಧಾನಸಭಾ ಹಾಗೂ ವಿಧಾನಪರಿಷತ್ತಿನ ಸದಸ್ಯರು ಮತ್ತು ಮಾನ್ಯ ಲೋಕಸಭಾ ಹಾಗೂ ಸಭಾ ರಾಜ್ಯ ಸಭಾ ಸದಸ್ಯರುಗಳ ದೂರವಾಣಿ ಸಂಖ್ಯೆಯನ್ನು ತಮ್ಮ ಬಳಿ ಕಡ್ಡಾಯವಾಗಿ ಇಟ್ಟುಕೊಳ್ಳತಕ್ಕದ್ದು ಹಾಗೂ ಅವರು ಕರೆ ಮಾಡಿದಾಗ ಕರೆಯನ್ನು ಸ್ವೀಕರಿಸುವುದು, ಒಂದು ವೇಳೆ ತಾವು ಅನ್ಯ ಕರ್ತವ್ಯದಲ್ಲಿ ನಿರತರಾಗಿದ್ದಲ್ಲಿ ಅವರುಗಳಿಗೆ ತಮ್ಮ ಕರ್ತವ್ಯ ಮುಗಿದ ನಂತರ ಮರು ಕರೆಯನ್ನು ಮಾಡುವುದರ ಮೂಲಕ ಸೂಕ್ತವಾಗಿ ಸಮಸ್ಯೆಗಳ ಕುರಿತು ಸ್ಪಂದಿಸುವಂತೆ ಈ ಮೂಲಕ ಸೂಚನೆಯನ್ನು ನೀಡಿದೆ. ಸದರಿ ಸೂಚನೆಯನ್ನು ತಮ್ಮ ಆಪ್ತ ಶಾಖೆ ಸಿಬ್ಬಂದಿಗಳಿಗೂ ನೀಡಲು ಸೂಚಿಸಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed