, ,

ಮಂಗಳೂರು: ಬೋಳಿಯಾರ್ ಅಪಘಾತ ಪ್ರಕರಣ- ಕೊಲೆ ಆರೋಪದಲ್ಲಿ ಪಿಕಪ್ ಚಾಲಕನ ಬಂಧನ

ಮಂಗಳೂರು: ಬೋಳಿಯಾರ್ ಪೆಟ್ರೋಲ್ ಪಂಪ್ ಬಳಿ ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನದಿಂದ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆಸಿ ಇಬ್ಬರು ಯುವಕರನ್ನು ಕೊಲೆ ಮಾಡಿದ ಪ್ರಕರಣದ ಪ್ರಮುಖ ಆರೋಪಿಯನ್ನು ಮಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪಿಕಪ್ ಚಾಲಕ ಹಫೀಝ್ ಅಲಿಯಾಸ್ ಅಪ್ಪಿ ಬಂಧಿತ ಆರೋಪಿ ಎಂದು ನಗರ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ. ಉಳ್ಳಾಲ ತಾಲೂಕಿನ ಕಿನ್ಯಾ ಗ್ರಾಮದ ಇಸ್ಮಾಯಿಲ್ ಅವರು ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅಕ್ಟೋಬರ್ 19ರಂದು ಸಂಜೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ…

ಮಂಗಳೂರು: ಬೋಳಿಯಾರ್ ಪೆಟ್ರೋಲ್ ಪಂಪ್ ಬಳಿ ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನದಿಂದ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆಸಿ ಇಬ್ಬರು ಯುವಕರನ್ನು ಕೊಲೆ ಮಾಡಿದ ಪ್ರಕರಣದ ಪ್ರಮುಖ ಆರೋಪಿಯನ್ನು ಮಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪಿಕಪ್ ಚಾಲಕ ಹಫೀಝ್ ಅಲಿಯಾಸ್ ಅಪ್ಪಿ ಬಂಧಿತ ಆರೋಪಿ ಎಂದು ನಗರ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ. ಉಳ್ಳಾಲ ತಾಲೂಕಿನ ಕಿನ್ಯಾ ಗ್ರಾಮದ ಇಸ್ಮಾಯಿಲ್ ಅವರು ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಅಕ್ಟೋಬರ್ 19ರಂದು ಸಂಜೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಜುನೈದ್ ಮತ್ತು ಅರ್ಫಾಝ್ ಹಾಗೂ ಪಿಕಪ್ ಚಾಲಕ ಹಫೀಝ್ ನಡುವೆ ಮೊಬೈಲ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿನ ಚಕಮಕಿ ಹಾಗೂ ಜಗಳ ನಡೆದಿತ್ತು. ಈ ಯುವಕರೊಂದಿಗೆ ಈ ಹಿಂದೆಯೇ ವೈಷಮ್ಯವಿತ್ತು ಎಂದು ತಿಳಿದುಬಂದಿದೆ. ಮಾತಿನ ಗಲಾಟೆಯ ಬಳಿಕ ಜುನೈದ್ ಮತ್ತು ಅರ್ಫಾಝ್ ಸ್ಕೂಟರ್‌ನಲ್ಲಿ ಮುಡಿಪು ಕಡೆಗೆ ತೆರಳುತ್ತಿದ್ದಾಗ, ಆಕ್ರೋಶಗೊಂಡಿದ್ದ ಹಫೀಝ್ ತನ್ನ ಪಿಕಪ್ ವಾಹನದಲ್ಲಿ ಅವರನ್ನು ಹಿಂಬಾಲಿಸಿ ಹೋಗಿದ್ದಾನೆ. ಕೊಲ್ಲುವ ಸ್ಪಷ್ಟ ಉದ್ದೇಶದಿಂದ ಬೋಳಿಯಾರ್ ಪೆಟ್ರೋಲ್ ಪಂಪ್ ಬಳಿ ಸ್ಕೂಟರ್‌ಗೆ ಹಿಂದಿನಿಂದ ಅತಿವೇಗವಾಗಿ ಡಿಕ್ಕಿ ಹೊಡೆಸಿದ್ದಾನೆ. ಢಿಕ್ಕಿಯ ರಭಸಕ್ಕೆ ಸ್ಕೂಟರ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ್ದು, ರಸ್ತೆಗೆ ಎಸೆಯಲ್ಪಟ್ಟ ಇಬ್ಬರು ಯುವಕರು ಗಂಭೀರ ಗಾಯಗೊಂಡು ಮೃತಪಟ್ಟಿದ್ದರು. ಕೃತ್ಯ ಎಸಗಿದ ಬಳಿಕ ಚಾಲಕ ವಾಹನವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದನು.

ಘಟನೆ ನಡೆದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ತೀವ್ರ ಹುಡುಕಾಟ ನಡೆಸಿ ಕೊನೆಗೂ ಆರೋಪಿ ಹಫೀಝ್‌ನನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ, ಗೆಳೆಯನ ಮೊಬೈಲ್ ವಿಷಯದಲ್ಲಿ ನಡೆದ ಮಾತಿನ ಚಕಮಕಿ ಹಾಗೂ ಹಿಂದಿನ ವೈಷಮ್ಯದ ಸಿಟ್ಟಿನ ಭರದಲ್ಲೇ ತಾನು ಬೊಲೆರೊ (ಪಿಕಪ್) ವಾಹನವನ್ನು ಯುವಕರ ಬೈಕ್‌ಗೆ ಡಿಕ್ಕಿಪಡಿಸಿರುವುದಾಗಿ ಆರೋಪಿ ಬಾಯಬಿಟ್ಟಿದ್ದಾನೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ

About The Author

Leave a Reply

Your email address will not be published. Required fields are marked *

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports