ಉಡುಪಿ: ಪೆರ್ಡೂರಿನ ಪ್ರದೀಪ್ ಪೂಜಾರಿ ಮೇಲಿನ ಹಲ್ಲೆ ಮತ್ತು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಪ್ರದೀಪ್ ಪೂಜಾರಿ ಅವರ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಶಕ್ಕೆ ಪಡೆದಿರುವ ಆರೋಪಿಗಳನ್ನು ಉಡುಪಿಗೆ ಕರೆತರಲಾಗುತ್ತಿದ್ದು, ಬಂಧನಕ್ಕೆ ಸಂಬಂಧಿಸಿದ ಅಧಿಕೃತ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಆರೋಪಿಗಳ ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.















