, ,

ಉಡುಪಿ: ಪ್ರೇಮ ವಿಚಾರಕ್ಕೆ ಯುವಕನ ಮೇಲೆ ಹಲ್ಲೆ -ಮನನೊಂದು ಆಸ್ಪತ್ರೆಯ ಶೌಚಾಲಯದಲ್ಲೇ ಯುವಕ ನೇಣಿಗೆ ಶರಣು..!

ಉಡುಪಿ : ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಮನೆಯವರು ಯುವಕನ ಮೇಲೆ ಮನಬಂದಂತೆ ಹಲ್ಲೆ ನಡೆಸಿ ತೀವ್ರವಾಗಿ ಬೆದರಿಕೆ ಹಾಕಿದ್ದರಿಂದ ಮನನೊಂದ ಯುವಕನೊಬ್ಬ ಚಿಕತ್ಸೆ ಪಡೆಯುತ್ತಿದ್ದ ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಉಡುಪಿ ನಗರದಲ್ಲಿ ವಡೆದಿದೆ. ಹಿಂದೂ ಸಂಘಟನೆಗಳಲ್ಲಿ ಸಕ್ರಿಯವಾಗಿದ್ದ ಯುವಕ ಪ್ರದೀಪ ಆತ್ಮಹತ್ಯೆಗೆ ಶರಣಾದ ದುರ್ದೈವಿ ಯುವಕ. ಈ ಘಟನೆಗೆ ಕಾರಣರಾದ ಯುವತಿ ಹಾಗೂ ಆಕೆಯ ಸಹೋದರರು ಸೇರಿದಂತೆ ಹತ್ತಕ್ಕೂ ಹೆಚ್ಚು ಮಂದಿಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ…

ಉಡುಪಿ : ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಮನೆಯವರು ಯುವಕನ ಮೇಲೆ ಮನಬಂದಂತೆ ಹಲ್ಲೆ ನಡೆಸಿ ತೀವ್ರವಾಗಿ ಬೆದರಿಕೆ ಹಾಕಿದ್ದರಿಂದ ಮನನೊಂದ ಯುವಕನೊಬ್ಬ ಚಿಕತ್ಸೆ ಪಡೆಯುತ್ತಿದ್ದ ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಉಡುಪಿ ನಗರದಲ್ಲಿ ವಡೆದಿದೆ. ಹಿಂದೂ ಸಂಘಟನೆಗಳಲ್ಲಿ ಸಕ್ರಿಯವಾಗಿದ್ದ ಯುವಕ ಪ್ರದೀಪ ಆತ್ಮಹತ್ಯೆಗೆ ಶರಣಾದ ದುರ್ದೈವಿ ಯುವಕ. ಈ ಘಟನೆಗೆ ಕಾರಣರಾದ ಯುವತಿ ಹಾಗೂ ಆಕೆಯ ಸಹೋದರರು ಸೇರಿದಂತೆ ಹತ್ತಕ್ಕೂ ಹೆಚ್ಚು ಮಂದಿಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮೃತ ಪ್ರದೀಪ ಕಳೆದ 8 ವರ್ಷಗಳಿಂದ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಅಕ್ಟೋಬರ್ 27 ರ ರಾತ್ರಿ 10 ಗಂಟೆಗೆ ಪ್ರದೀಪನು ನಾಯರ್ ಕೋಡಿನಲ್ಲಿರುವ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ, ಪ್ರೀತಿಸುತ್ತಿದ್ದ ಯುವತಿಯ ಸಹೋದರರಾದ ಪ್ರಸನ್ನ ಶೆಟ್ಟಿ, ಸುಧೀರ್ ಶೆಟ್ಟಿ, ಶೈಲೇಶ್ ಶೆಟ್ಟಿ, ಸನತ್, ಕೃಷ್ಣ, ಸುಜಯ್ ಹಾಗೂ ಇತರರು ಮೂರು ಕಾರುಗಳಲ್ಲಿ ಬಂದು ಪ್ರದೀಪನನ್ನು ಬಲವಂತವಾಗಿ ಯುವತಿಯ ಮನೆಗೆ ಕರೆದುಕೊಂಡು ಹೋಗಿದ್ದಾರೆ.

ಅಲ್ಲಿ ಪ್ರಸನ್ನ ಶೆಟ್ಟಿ ಬೆತ್ತವನ್ನು ತೆಗೆದು ಪ್ರದೀಪನ ಕಾಲು ಹಾಗೂ ಬೆನ್ನಿಗೆ ರಕ್ತಗಾಯವಾಗುವಂತೆ ಬಾಸುಂಡೆ ಬರುವ ರೀತಿಯಲ್ಲಿ ಹಲ್ಲೆ ನಡೆಸಿದ್ದಾನೆ. ಜೊತೆಯಲ್ಲಿದ್ದ ಇತರೆ ಆರೋಪಿಗಳು ಮರದ ದೊಣ್ಣೆಗಳಿಂದ ಆತನ ದೇಹಕ್ಕೆ ಹೊಡೆದು ತೀವ್ರವಾಗಿ ಗಾಯಗೊಳಿಸಿದ್ದಾರೆ. ವಿಷಯ ತಿಳಿದು ಪ್ರದೀಪ್ ನ ಸ್ನೇಹಿತರು ಯುವತಿಯ ಮನೆಗೆ ಹೋಗಿ ನೋಡಿದಾಗ, ಆರೋಪಿಗಳು ಪ್ರದೀಪನಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡುವುದು ನಿಂತಿದೆ. ಬಳಿಕ ತೀವ್ರ ಗಾಯಗೊಂಡಿದ್ದ ಪ್ರದೀಪನನ್ನು ಅಕ್ಟೋಬರ್ 28ರಂದು ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಒಳರೋಗಿಯಾಗಿ ದಾಖಲಿಸಲಾಗಿತ್ತು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅಣ್ಣನ ಬಳಿ ಕಣ್ಣೀರಿಟ್ಟ ಪ್ರದೀಪ, ಯುವತಿ ಹಾಗೂ ಆಕೆಯ ಮನೆಯವರು ತನ್ನ ಮೇಲೆ ನಡೆಸಿದ ಅಮಾನವೀಯ ಹಲ್ಲೆ ಮತ್ತು ಮುಂದಿನ ಪರಿಣಾಮಗಳ ಬಗ್ಗೆ ಜೀವ ಬೆದರಿಕೆ ಹಾಕಿರುವ ಕುರಿತು ತೀವ್ರ ದುಃಖದಿಂದ ತೋಡಿಕೊಂಡಿದ್ದನು. ಈ ಸತತ ಮಾನಸಿಕ ಹಿಂಸೆ ಹಾಗೂ ಅವಮಾನದಿಂದ ತೀವ್ರವಾಗಿ ನೊಂದ ಪ್ರದೀಪ, ಅಕ್ಟೋಬರ್ 30 ಸಂಜೆ 5:30 ರ ಸುಮಾರಿಗೆ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶೌಚಾಲಯದೊಳಗೆ ನೇಣು ಬಿಗಿದುಕೊಂಡು ದುರಂತವಾಗಿ ಕೊನೆಯುಸಿರೆಳೆದಿದ್ದಾರೆ.

ಈ ಘಟನೆಗೆ ಕುರಿತಂತೆ ಪ್ರದೀಪ್ ಸಹೋದರ ನೀಡಿದ ದೂರಿನ ಪ್ರಕಾರ ಸಾವಿಗೆ ನೇರವಾಗಿ ಪ್ರಚೋದನೆ ನೀಡಿ ಕಾರಣರಾದ ಶ್ರಾವ್ಯ ಶೆಟ್ಟಿ, ಪ್ರಸನ್ನ ಶೆಟ್ಟಿ, ಸುಧೀರ್, ಶೈಲೇಶ್, ಶಶಾಂಕ್, ಕೃಷ್ಣ, ಸುಜಯ್, ಸನತ್, ಹೊರ ರಾಜ್ಯದ ಇಬ್ಬರು ಕಾರ್ಮಿಕರು ಹಾಗೂ ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 149/2026, ಕಲಂ 108 ಜೊತೆಗೆ 190 BNS ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed