, ,

ಮಂಗಳೂರು: ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿ ನೀಡಿ ನ್ಯಾಯಾಂಗ ವ್ಯವಸ್ಥೆಯನ್ನು ಅಪಮಾನಿಸಿದ ಆರೋಪ- ವಕೀಲನ ವಿರುದ್ಧ FIR

ಮಂಗಳೂರು: ನ್ಯಾಯಾಲಯದ ಪ್ರಕ್ರಿಯೆ ಹಾಗೂ ಪ್ರಕರಣದ ತನಿಖೆಯ ಕುರಿತು ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿ ನೀಡಿ ನ್ಯಾಯಾಂಗ ವ್ಯವಸ್ಥೆಯನ್ನು ಅಪಮಾನಿಸಿದ ಆರೋಪದ ಹಿನ್ನೆಲೆಯಲ್ಲಿ ವಕೀಲರಾದ ಪ್ರಸಾದ್ ಎಂಬವರ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ಬಡಗಬೆಳ್ಳೂರು ನಿವಾಸಿ ಹನೀಫ್ @ ಮಹಮ್ಮದ್, ಹನೀಫ್ (43) ಎಂಬುವವರು ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಘಟನೆಯ ಹಿನ್ನೆಲೆ: ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಿ.ಸಿ. ರೋಡ್‌ನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ವಕೀಲ ಪ್ರಸಾದ್ ಭಾಷಣ…

ಮಂಗಳೂರು: ನ್ಯಾಯಾಲಯದ ಪ್ರಕ್ರಿಯೆ ಹಾಗೂ ಪ್ರಕರಣದ ತನಿಖೆಯ ಕುರಿತು ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿ ನೀಡಿ ನ್ಯಾಯಾಂಗ ವ್ಯವಸ್ಥೆಯನ್ನು ಅಪಮಾನಿಸಿದ ಆರೋಪದ ಹಿನ್ನೆಲೆಯಲ್ಲಿ ವಕೀಲರಾದ ಪ್ರಸಾದ್ ಎಂಬವರ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ಬಡಗಬೆಳ್ಳೂರು ನಿವಾಸಿ ಹನೀಫ್ @ ಮಹಮ್ಮದ್, ಹನೀಫ್ (43) ಎಂಬುವವರು ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಘಟನೆಯ ಹಿನ್ನೆಲೆ:

ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಿ.ಸಿ. ರೋಡ್‌ನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ವಕೀಲ ಪ್ರಸಾದ್ ಭಾಷಣ ಮಾಡಿದ್ದರು. ಧಾರ್ಮಿಕ ಸಂಘಟನೆಯೊಂದರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಈ ಸಭೆಯಲ್ಲಿ ಮಾತನಾಡುತ್ತಾ ಅವರು, ನ್ಯಾಯಾಲಯದ ಪ್ರಕ್ರಿಯೆ ಹಾಗೂ ತನಿಖೆಯ ಬಗ್ಗೆ ಸತ್ಯಕ್ಕೆ ದೂರವಾದ ಸುಳ್ಳು ಹೇಳಿಕೆಗಳನ್ನು ನೀಡಿ ನ್ಯಾಯಾಂಗ ವ್ಯವಸ್ಥೆಗೆ ಅಪಮಾನ ಉಂಟುಮಾಡಿದ್ದಾರೆ ಎಂದು ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.

ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರರ್ಜಿ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed