, ,

ಮಂಗಳೂರು: ರಹಮತ್ ನಗರದಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ — ದುರಂತ ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳುತ್ತಾ ಪಾಲಿಕೆ?

ಮಂಗಳೂರು ನಗರದ ಕುದ್ರೋಳಿ ವಾರ್ಡ್‌ನ ರೆಹಮತ್ ನಗರ ರಸ್ತೆಯಲ್ಲಿ ತಡೆಗೋಡೆಯೊಂದು ಅಪಾಯದ ಸ್ಥಿತಿಯಲ್ಲಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ತಡೆಗೋಡೆಗೆ ವಿದ್ಯುತ್ ಕಂಬವೇ ಅಂಟಿಕೊಂಡಿರುವುದು ಮತ್ತಷ್ಟು ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ಶಾಲಾ ಮಕ್ಕಳು, ವೃದ್ಧರು ಸೇರಿದಂತೆ ಅನೇಕ ಸಾರ್ವಜನಿಕರು ಸಂಚರಿಸುತ್ತಾರೆ. ಇಂತಹ ಸಂದರ್ಭದಲ್ಲಿ ತಡೆಗೋಡೆ ಕುಸಿದು ಬಿದ್ದರೆ ಅಥವಾ ವಿದ್ಯುತ್ ಕಂಬಕ್ಕೆ ಹಾನಿಯಾದರೆ ಗಂಭೀರ ಅನಾಹುತ ಸಂಭವಿಸುವ ಆತಂಕವಿದೆ. ಈ ಸಮಸ್ಯೆಯ ಕುರಿತು ಸ್ಥಳೀಯರು ಹಲವಾರು ಬಾರಿ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ದೂರು ನೀಡಿದ್ದರೂ,…

ಮಂಗಳೂರು ನಗರದ ಕುದ್ರೋಳಿ ವಾರ್ಡ್‌ನ ರೆಹಮತ್ ನಗರ ರಸ್ತೆಯಲ್ಲಿ ತಡೆಗೋಡೆಯೊಂದು ಅಪಾಯದ ಸ್ಥಿತಿಯಲ್ಲಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ತಡೆಗೋಡೆಗೆ ವಿದ್ಯುತ್ ಕಂಬವೇ ಅಂಟಿಕೊಂಡಿರುವುದು ಮತ್ತಷ್ಟು ಅಪಾಯಕ್ಕೆ ಆಹ್ವಾನ ನೀಡುವಂತಿದೆ.

ಈ ರಸ್ತೆಯಲ್ಲಿ ಪ್ರತಿನಿತ್ಯ ಶಾಲಾ ಮಕ್ಕಳು, ವೃದ್ಧರು ಸೇರಿದಂತೆ ಅನೇಕ ಸಾರ್ವಜನಿಕರು ಸಂಚರಿಸುತ್ತಾರೆ. ಇಂತಹ ಸಂದರ್ಭದಲ್ಲಿ ತಡೆಗೋಡೆ ಕುಸಿದು ಬಿದ್ದರೆ ಅಥವಾ ವಿದ್ಯುತ್ ಕಂಬಕ್ಕೆ ಹಾನಿಯಾದರೆ ಗಂಭೀರ ಅನಾಹುತ ಸಂಭವಿಸುವ ಆತಂಕವಿದೆ.

ಈ ಸಮಸ್ಯೆಯ ಕುರಿತು ಸ್ಥಳೀಯರು ಹಲವಾರು ಬಾರಿ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ದೂರು ನೀಡಿದ್ದರೂ, ಈವರೆಗೆ ಯಾವುದೇ ಪ್ರಯೋಜನವಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಜನರ ಸುರಕ್ಷತೆಗೆ ಸಂಬಂಧಿಸಿದ ಇಂತಹ ಗಂಭೀರ ಸಮಸ್ಯೆಯ ಬಗ್ಗೆ ಅಧಿಕಾರಿಗಳು ಇನ್ನೂ ನಿರ್ಲಕ್ಷ್ಯ ವಹಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಎಮ್ಮೆಕೆರೆಯ ದುರಂತ ಎಚ್ಚರಿಕೆಯ ಸಂದೇಶ!

ಇತ್ತೀಚೆಗೆ ಮಂಗಳೂರಿನ ಎಮ್ಮೆಕೆರೆಯಲ್ಲಿರುವ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನಲ್ಲಿ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯುತ್ತಿದ್ದ ವೇಳೆ, ಹಾಲ್‌ನ ಬಾಲ್ಕನಿ ಭಾಗದ ತಡೆಗೋಡೆ ಏಕಾಏಕಿ ಕುಸಿದು ಬಿದ್ದು ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ ದುರಂತ ಸಂಭವಿಸಿತ್ತು.

ಈ ಘಟನೆ ಕಟ್ಟಡಗಳಲ್ಲಿನ ತಡೆಗೋಡೆಗಳ ಸುರಕ್ಷತೆಯ ಬಗ್ಗೆ ಎಚ್ಚರಿಕೆ ವಹಿಸುವ ಅಗತ್ಯವನ್ನು ಮತ್ತೊಮ್ಮೆ ನೆನಪಿಸಿದೆ. ಇಂತಹ ದುರಂತಗಳು ಸಂಭವಿಸಿದ ಬಳಿಕ ಎಚ್ಚೆತ್ತುಕೊಳ್ಳುವುದಕ್ಕಿಂತ, ಅಪಾಯವನ್ನು ಮೊದಲೇ ಗುರುತಿಸಿ ಕ್ರಮ ಕೈಗೊಳ್ಳುವುದು ಸಂಬಂಧಪಟ್ಟ ಅಧಿಕಾರಿಗಳ ಜವಾಬ್ದಾರಿಯಾಗಿದೆ.

ಸಾರ್ವಜನಿಕರ ಆಗ್ರಹವೇನು?

ರೆಹಮತ್ ನಗರದ ಅಪಾಯಕಾರಿ ತಡೆಗೋಡೆಯನ್ನು ತಕ್ಷಣ ಪರಿಶೀಲಿಸಿ, ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ತಡೆಗೋಡೆಯ ಸ್ಥಿತಿಯನ್ನು ತಜ್ಞರಿಂದ ಪರಿಶೀಲಿಸಬೇಕು ಹಾಗೂ ವಿದ್ಯುತ್ ಕಂಬದಿಂದ ಉಂಟಾಗಬಹುದಾದ ಅಪಾಯವನ್ನೂ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತರಬೇಕು.

ದುರಂತ ಸಂಭವಿಸಿದ ಬಳಿಕ ಪರಿಹಾರ ನೀಡುವುದಕ್ಕಿಂತ, ದುರಂತವೇ ಸಂಭವಿಸದಂತೆ ತಡೆಯುವುದು ಮುಖ್ಯ.

ಶಾಲಾ ಮಕ್ಕಳು ಹಾಗೂ ಸಾರ್ವಜನಿಕರ ಜೀವಕ್ಕೆ ಅಪಾಯ ಎದುರಾಗುವ ಮುನ್ನ ಮಂಗಳೂರು ಮಹಾನಗರ ಪಾಲಿಕೆ ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕೆಂಬುದು ಸ್ಥಳೀಯರ ಆಗ್ರಹವಾಗಿದೆ.

About The Author

Leave a Reply

Your email address will not be published. Required fields are marked *

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports